ಪರಿಸರ ಸಂರಕ್ಷಣೆಯ ಕಾಳಜಿ ಮುಖ್ಯ: ಕೆ.ವಿ.ಪ್ರಭಾಕರ್

KannadaprabhaNewsNetwork |  
Published : Jun 09, 2025, 04:14 AM IST
ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೆ.ವಿ. ಪ್ರಭಾಕರ್‌. | Kannada Prabha

ಸಾರಾಂಶ

ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ಕೆಪಿಟಿ ಮಂಗಳೂರು, ಸಂತ ಅಲೋಶಿಯಸ್ ಐಟಿಐ ಹಾಗೂ ಗ್ಲೋಬಲ್ ಗ್ರೀನ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಜನಸಾಮಾನ್ಯರಲ್ಲಿ ಪರಿಸರ ಸಂರಕ್ಷಣೆಯ ಕಾಳಜಿ ಮೂಡಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಸಾಮೂಹಿಕ ಗಿಡ ನೆಡುವ ಕಾರ್ಯಕ್ರಮಗಳ ಅಗತ್ಯವಿದೆ ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದ್ದಾರೆ.

ನಗರದ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ಕೆಪಿಟಿ ಮಂಗಳೂರು, ಸಂತ ಅಲೋಶಿಯಸ್ ಐಟಿಐ ಹಾಗೂ ಗ್ಲೋಬಲ್ ಗ್ರೀನ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ರೋಟರಿ ಸೆಂಟ್ರಲ್ ಮಂಗಳೂರು ಘಟಕ ಅಧ್ಯಕ್ಷ ಬ್ರಿಯಾನ್ ಪಿಂಟೊ, ರೋಟರಿ ಮಾಜಿ ಸಹಾಯಕ ಗವರ್ನರ್ ರಾಜ ಗೋಪಾಲ್ ರೈ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಸಂತ ಅಲೋಶಿಯಸ್ ಐಟಿಐ ಕಾಲೇಜು, ಕೆಪಿಟಿ ಮಂಗಳೂರಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್‌ ಪದಾಧಿಕಾ ರಿಗಳು, ಮಾಜಿ ಕಾರ್ಪೊರೇಟರ್‌ ಸಂಧ್ಯಾ ಆಚಾರ್ಯ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್, ವಲಯ ಅರಣ್ಯ ಅಧಿಕಾರಿ ರಾಜೇಶ್ ಇದ್ದರು. ಪುಷ್ಪರಾಜ್ ಬಿ.ಎನ್. ನಿರೂಪಿಸಿದರು. ಭಾಸ್ಕರ ರೈ ಕಟ್ಟ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌