ಮುಂದಿನ ಯುವಪೀಳಿಗಾಗಿ ಪರಿಸರ ಸಂರಕ್ಷಣೆ ಅಗತ್ಯ

KannadaprabhaNewsNetwork |  
Published : May 27, 2024, 01:22 AM IST
ಚಿತ್ರ:ಭರಮಸಾಗರ ಸರ್ಕಾರಿ ಪದವಿ ಕಾಲೇಜಿನ ಎನ್‌ಎಸ್‌ಎಸ್‌ ಸ್ವಯಂಸೇವಕರು ಬಹದ್ದೂರುಗಟ್ಟದಲ್ಲಿ ಸಂಚರಿಸಿ ಪರಿಸರ ಕಾಳಜಿ ಮೂಡಿಸಿದರು. | Kannada Prabha

ಸಾರಾಂಶ

ಭರಮಸಾಗರ ಸರ್ಕಾರಿ ಪದವಿ ಕಾಲೇಜಿನ ಎನ್‌ಎಸ್‌ಎಸ್‌ ಸ್ವಯಂಸೇವಕರು ಬಹದ್ದೂರುಗಟ್ಟದಲ್ಲಿ ಸಂಚರಿಸಿ ಪರಿಸರ ಕಾಳಜಿ ಮೂಡಿಸಿದರು.

ಕನ್ನಡಪ್ರಭ ವಾರ್ತೆ ಸಿರಿಗೆರೆ

ಇತ್ತೀಚಿನ ದಿನಗಳಲ್ಲಿ ಮನುಷ್ಯನ ದುರಾಸೆಯಿಂದ ಪರಿಸರ ಅಳಿವಿನ ಅಂಚಿಗೆ ತಲುಪುತ್ತಿದ್ದು, ನೆಲ, ಜಲವನ್ನು ಸಂರಕ್ಷಿಸದೆ ಹೋದರೆ ಮುಂದಿನ ಯುವಪೀಳಿಗೆ ಬಹುದೊಡ್ಡ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಲಯ ಘಟಕ ಅಧ್ಯಕ್ಷ ಹನುಮಂತಪ್ಪ ಹೇಳಿದರು.

ಭರಮಸಾಗರ ಸರ್ಕಾರಿ ಪದವಿ ಕಾಲೇಜ್‌ ಆಶ್ರಯದಲ್ಲಿ ಬಹದ್ದೂರಗಟ್ಟದಲ್ಲಿ ನಡೆಯುತ್ತಿರುವ ವಿಶೇಷ ವಾರ್ಷಿಕ ಶಿಬಿರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

ಈ ಶಿಬಿರದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಿ, ಸಾರ್ವಜನಿಕರಿಗೆ ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ಘೋಷವಾಕ್ಯಗಳನ್ನು ರಚಿಸಿ, ಜಾಥಾ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಬರಮಸಾಗರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿಲೀಪ್ ಮಾತನಾಡಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್ಎಸ್ ಘಟಕ ಶಿಬಿರದ ಮೂಲಕ ಪ್ರತಿ ವರ್ಷ ಬಸ್‌ನಿಲ್ದಾಣ, ಕಾಲೇಜು ಆವರಣ, ದೇವಸ್ಥಾನ ಹಾಗೂ ಇನ್ನಿತರೆ ಸರ್ಕಾರಿ ಜಾಗಗಳಲ್ಲಿ ಸಸಿ ನೆಡುವುದರ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಅಮೂಲ್ಯ ಪಾತ್ರ ವಹಿಸುತ್ತಿದ್ದಾರೆ. ಹೊಂಗೆ, ಗಸಗಸೆ, ಹಲಸು, ಕಾಡು ಬಾದಾಮಿ, ನೇರಳೆಯೊಂದಿಗೆ ಹಲವು ಕಾಡು ಜಾತಿಯ ಮತ್ತು ಹಣ್ಣಿನ ಸಸಿಗಳನ್ನು ನೆಟ್ಟು ಪೋಷಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಲೋಕೇಶ್ ನಾಯಕ್ ಮಾತನಾಡಿ, ಸ್ವಯಂ ಸೇವಕರು ತಮ್ಮ ಗ್ರಾಮಗಳಲ್ಲಿ ಸ್ವಯಂ ಪ್ರೇರಿತರಾಗಿ ಹಸಿರೀಕರಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ನಾವು ಪರಿಸರವನ್ನು ಸಂರಕ್ಷಿಸಿದರೆ ಮುಂದಿನ ದಿನಗಳಲ್ಲಿ ಪರಿಸರ ನಮ್ಮನ್ನು ಸಂರಕ್ಷಿಸುತ್ತದೆ ಎಂದು ತಿಳಿಸಿದರು. ಈ ವೇಳೆ ವಿದ್ಯಾರ್ಥಿಗಳು ಸಸಿಗಳನ್ನು ದತ್ತು ಪಡೆಯುವುದರ ಮೂಲಕ ಬೆಳೆಸುವ ಪ್ರತಿಜ್ಞೆ ಮಾಡಿದರು. ಶಿಬಿರದಲ್ಲಿ ಎನ್ಎಸ್ಎಸ್ ಘಟಕ 2ರ ಅಧಿಕಾರಿಯಾದ ಚಂದ್ರ ಕುಮಾರ್, ಉಪನ್ಯಾಸಕ ಶಿವಲಿಂಗಪ್ಪ, ಗ್ರಾಪಂ ಸದಸ್ಯರು, ಸಾರ್ವಜನಿಕರು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ