ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ

KannadaprabhaNewsNetwork |  
Published : Jun 06, 2024, 12:30 AM IST
ಮಧುಗಿರಿಯಲ್ಲಿ ತಾಲೂಕು ಆಡಳಿತ ಮತ್ತು ಸರ್ಕಾರಿ ಪ್ರೌಢಶಾಲೆ  ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಎಸಿ ಶಿವಪ್ಪ ಮಾತನಾಡಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.  | Kannada Prabha

ಸಾರಾಂಶ

ಮರ, ಗಿಡಗಳನ್ನು ಬೆಳಸಿ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ಗೊಟೂರು ಶಿವಪ್ಪ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಧುಗಿರಿ

ಮರ, ಗಿಡಗಳನ್ನು ಬೆಳಸಿ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ಗೊಟೂರು ಶಿವಪ್ಪ ತಿಳಿಸಿದರು.

ಇಲ್ಲಿನ ಕೆ.ಆರ್‌.ಬಡಾವಣೆ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಆಡಳಿತ ಮತ್ತು ಅರಣ್ಯ ಇಲಾಖೆಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ದೇಶದ ಭವಿಷ್ಯ ಕಟ್ಟುವ ವಿದ್ಯಾರ್ಥಿಗಳು ಪರಿಸರದ ಬಗ್ಗೆ ಜ್ಞಾನ ಅರಿವು ಕಾಳಜಿ ಮತ್ತು ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ವಲಯ ಅರಣ್ಯಾಧಿಕಾರಿ ಸುರೇಶ್‌ ಮಾತನಾಡಿ, ಈ ಬಾರಿ ಘೋಷವಾಕ್ಯವಿರುವ ನಮ್ಮ ಭೂಮಿ ನಮ್ಮ ಭವಿಷ್ಯದಡಿ ಲಕ್ಷಾಂತರ ಗಿಡಗಳನ್ನು ನಡೆಸುತ್ತಿದ್ದೇವೆ. ಆದರೆ ಮರವಾಗಿ ಪೋಷಣೆ ಮಾಡುವಲ್ಲಿ ವಿಫರಾಗಿದ್ದೇವೆ. ಆದ್ದರಿಂದ ಸರ್ಕಾರ ನೆಟ್ಟಂತಹ ಪ್ರತಿಯೊಂದು ಗಿಡಗಳನ್ನು ಪೋಷಿಸುವ ಕೆಲಸ ಮಾಡುವಂತೆ ಆದೇಶವಾಗಿದೆ. ರಾಷ್ಟ್ರೀಯ ಅರಣ್ಯ ನೀತಿಯಡಿ ಶೇ.33ರಷ್ಟು ಭೂಭಾಗದಲ್ಲಿ ಅರಣ್ಯ ಪ್ರದೇಶ ಇರಬೇಕು. ಆದರೆ ಕರ್ನಾಟಕದಲ್ಲಿ ಶೇ.20ರಷ್ಠು ಮಾತ್ರ ಅರಣ್ಯ ಪ್ರದೇಶವಿದೆ. ಸರ್ಕಾರದ ಹಸಿರು ಹೊದಿಕೆ ಯೋಜನೆಯಡಿ ಸಾಕಷ್ಟು ಪ್ರಯತ್ನಗಳು ನಡೆಯುತ್ತಿದ್ದು, ಸಾರ್ವಜನಿಕರ ಸಹಕಾರ ಬೇಕಿದೆ. ರಸ್ತೆ, ರೈಲ್ವೆ, ನೀರಾವರಿ ಅಭಿವೃದ್ಧಿ ಯೋಜನೆಗಳಲ್ಲಿ ಮರ ಗಿಡಗಳನ್ನು ಕಡಿಯುತ್ತಿರುವುದು ಹೆಚ್ಚಾಗಿದೆ. ಆದ್ದರಿಂದ ರೈತರು ತಮ್ಮ ಜಮೀನುಗಳ ಬದುವಿನಲ್ಲಿ ಗಿಡಗಳನ್ನು ನಡೆಸುವಂತೆ ಕರೆ ನೀಡಿದರು.

ವಿದ್ಯಾರ್ಥಿಗಳು ತಮ್ಮಹುಟ್ಟು ಹಬ್ಬದ ದಿನದಂದು ಒಂದು ಗಿಡ ನೆಟ್ಟು ಬೆಳಸಿ ಪರಿಸರಕ್ಕೆ ಕೊಡುಗೆ ನೀಡಿಬೇಕು. ಮಧುಗಿರಿ ತಾಲೂಕಿನಲ್ಲಿ 39 ಗ್ರಾಪಂಗಳಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಿಂದ 39 ಸಾವಿರ ಗಿಡಗಳನ್ನು ನೀಡಲಾಗುತ್ತಿದ್ದು, ಕೃಷಿ ಅರಣ್ಯ ಪ್ರೋತ್ಸಾಹ ಕಾರ್ಯಕ್ರಮದಡಿ ಒಂದು ಗಿಡಕ್ಕೆ 125 ರು. ನೀಡಲಾಗುತ್ತಿದ್ದು, ಒಂದು ಹೆಕ್ಟೇರ್‌ ಪ್ರದೇಶದಲ್ಲಿ 400 ಗಿಡ ನಟ್ಟಿದ್ದರೆ ಮೂರು ವರ್ಷಗಳಲ್ಲಿ 50 ಸಾವಿರ ರು. ಪ್ರೋತ್ಸಾಹ ಧನ ನೀಡಲಾಗುವುದು. ಇದರಿಂದಾಗಿ ರೈತರಿಗೆ ಆರ್ಥಿಕವಾಗಿ ಸದೃಡರಾಗಬಹುದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್‌.ಹನುಮಂತರಾಯಪ್ಪ ಮಾತನಾಡಿ, ತಾಲೂಕಿನಲ್ಲಿ ಎಲ್ಲ ಶಾಲೆಗಳನ್ನು ಸಸ್ಯ ಸಂಜೀವಿನಿ ಯೋಜನೆಯಡಿ 5 ಸಾವಿರ ಗಿಡಗಳನ್ನು ಅರಣ್ಯ ಇಲಾಖೆ ನೀಡಿದ್ದು, ಈಗಾಗಲೇ ಅವುಗಳನ್ನು ನಡೆಲಾಗಿದೆ ಎಂದರು.

ಪ್ಲಾಸ್ಟಿಕ್‌ ಮುಕ್ತ ಪರಿಸರಕ್ಕೆ ಮೊದಲ ಆದ್ಯತೆ ನೀಡುವ ಬಗ್ಗೆ ಪ್ರತಿಜ್ಞೆ ಮಾಡಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪರಿಸರ ಉಳಿಸಿ ಬೆಳಸಿ ಎಂದು ಜಾಗೃತಿ ಜಾಥಾ ನಡೆಸಲಾಯಿತು. ಬಿ.ಆರ್‌.ಸಿ .ಹನುಮಂತರಾಯಪ್ಪ, ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ಶೈಲೀಶ್ರೀ, ಮುಖ್ಯ ಶಿಕ್ಷಕ ರಾಜಣ್ಣ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಟಿ.ಲಕ್ಷ್ಮೀನರಸಯ್ಯ, ಪುರಸಭೆ ಮುಖ್ಯಾಧಿಕಾರಿ ಸುರೇಶ್, ಎತ್ತಿನ ಹೊಳೆ ಇಲಾಖೆ ಅಧಿಕಾರಿ ಮುರುಳಿ, ಉಪ ವಲಯ ಅರಣ್ಯಾಧಿಕಾರಿ ಮುತ್ತುರಾಜ್‌ ಹಾಗೂ ಶಾಲಾ ಮಕ್ಕಳು ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...