ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಭಿ ವಿಭಾಗ, ದೊಡ್ಡಬಳ್ಳಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮೂರ್ಛೆ ದಿನಾಚರಣೆ ಪ್ರಯುಕ್ತ ಸಾಮಾನ್ಯ ಜನರಿಗೆ ಮೂರ್ಛೆರೋಗದ ಬಗ್ಗೆ ಇರುವ ಮೂಢನಂಬಿಕೆ ಹೋಗಲಾಡಿಸಲು ಸೂಕ್ತ ತಿಳಿವಳಿಕೆ ನೀಡಲು ಫೈತ್ ನರ್ಸಿಂಗ್ ಇನ್ಸ್ಟಿಟ್ಯೂಷನ್ಸ್ ಸಹಯೋಗದಲ್ಲಿ ಜಾಥಾ ನಡೆಯಿತು. ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳು ಮತ್ತು ಆಸ್ಪತ್ರೆ ಸಿಬ್ಬಂದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಾರ್ವಜನಿಕ ಆಸ್ಪತ್ರೆಯಿಂದ ಡಿಕ್ರಾಸ್‌ವರೆಗೆ ಜಾಥಾ ನಡೆಸಿ, ಸಾರ್ವಜನಿಕರಿಗೆ ಮೂರ್ಛೆ ರೋಗದ ಬಗ್ಗೆ ಇದ್ದ ಕಳಂಕ ಮತ್ತು ತಪ್ಪು ಕಲ್ಪನೆ ಹೋಗಲಾಡಿಸುವ ಅರಿವು ಮೂಡಿಸಲಾಯಿತು.