ಕನ್ನಡಪ್ರಭ ವಾರ್ತೆ ಮಂಡ್ಯ
ನಗರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆವರಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಅಪಸ್ಮಾರ (ಮೂರ್ಛೆ) ರೋಗ ದಿನಾಚರಣೆ, ಜಿಲ್ಲಾ ಮಟ್ಟದ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದರು.
ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆಯುವುದು ಬಹಳ ಮುಖ್ಯ. ವಿಶ್ವ ಆರೋಗ್ಯ ಸಂಸ್ಥೆ ಹೇಳುವ ಪ್ರಕಾರ ಜಗತ್ತಿನಲ್ಲಿ ಬರೋಬ್ಬರಿ ೫೦ ಮಿಲಿಯನ್ ಜನರು ಈ ಮೂರ್ಛೆ ರೋಗವನ್ನು ಹೊಂದಿದ್ದಾರೆ. ಆದರೆ, ಹೆಚ್ಚಿನವರು ಈ ರೋಗವನ್ನು ಶಾಪವೆಂದು ನಂಬುತ್ತಾರೆ. ಈ ನಿಟ್ಟಿನಲ್ಲಿ ಈ ರೋಗದ ಬಗ್ಗೆ ಇರುವ ಜನರ ತಪ್ಪು ಕಲ್ಪನೆಗಳನ್ನು ತೊಡೆದು ಹಾಕಲು, ಜಾಗೃತಿ, ಅರಿವು ಮೂಡಿಸುತ್ತಿದ್ದೇವೆ ಎಂದು ನುಡಿದರು.ಮೂರ್ಛೆ ರೋಗ ಹಾಗೂ ಅದರ ಚಿಕಿತ್ಸಾ ವಿಧಾದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು, ಅಪಸ್ಮಾರ ರೋಗಿಗಳಲ್ಲಿನ ಕೀಳರಿಮೆಯನ್ನು ಹೋಗಲಾಡಿಸಿ ಅವರಿಗೆ ಧೈರ್ಯವನ್ನು ತುಂಬಲು ಪ್ರತಿವರ್ಷ ಫೆಬ್ರವರಿ ತಿಂಗಳ ಎರಡನೇ ಸೋಮವಾರದಂದು ಅಂತಾರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ ಆಚರಣೆ ಮಾಡಲಾಗುತ್ತಿದೆ ಎಂದರು.
ಈ ದಿನವು ಕೇವಲ ರೋಗದ ಬಗ್ಗೆ ತಿಳಿಸುವುದಲ್ಲದೇ, ಈ ಸ್ಥಿತಿಯೊಂದಿಗೆ ಬದುಕುತ್ತಿರುವ ಜನರಿಗೆ ಒಳಗೊಳ್ಳುವಿಕೆ ಮತ್ತು ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತಾ, ಡಾ.ಬೆಟ್ಟಸ್ವಾಮಿ, ತರಬೇತಿಕೇಂದ್ರ ಪ್ರಾಂಶುಪಾಲೆ ಡಾ.ಮಮತಾ, ಮೇಲ್ವಿಚಾರಕರಾದ ಚಿಕ್ಕ ಅರಸೇಗೌಡ, ಕಭಿ, ಉಪೇಂದ್ರ, ಮಹಮದ್ ಸುಹೇಲ್ ಮತ್ತಿತರರಿದ್ದರು.