ಸಂವಿಧಾನದಿಂದ ಎಲ್ಲರಿಗೂ ಸಮಾನ ಅವಕಾಶ

KannadaprabhaNewsNetwork |  
Published : Feb 06, 2024, 01:32 AM IST
5ಸಿಎಚ್ಎನ್‌55ಹನೂರು ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ದೇಶದ ಎಲ್ಲಾ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ನೀಡುವುದರ ಜೊತೆಗೆ ಅಭಿವ್ಯಕ್ತಿ, ಸ್ವಾತಂತ್ರ‍್ಯ, ಸ್ಥಾನಮಾನ ಮತ್ತು ಸಮಾನ ಅವಕಾಶಗಳನ್ನು ನೀಡುವುದು ಸಂವಿಧಾನದ ಮೂಲ ಆಶಯವಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ರೇಖಾ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶಗಳನ್ನು ನೀಡುವ ಜೊತೆಗೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಮತ್ತು ಸಹಬಾಳ್ವೆಯಿಂದ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದೆ ಎಂದು ಹುತ್ತೂರು ಗ್ರಾಪಂ ಅಧ್ಯಕ್ಷೆ ರೇಖಾ ಹೇಳಿದರು. ಹನೂರು ತಾಲೂಕಿನ ಹುತ್ತೂರು ಗ್ರಾಪಂ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸುತ್ತಿರುವ ಸವಿನೆನಪಿಗಾಗಿ ನಮ್ಮ ಗ್ರಾಪಂಗೆ ಸಂವಿಧಾನ ಜಾಗೃತಿ ಜಾಥಾ ಬಂದಿರುವುದು ಬಹಳ ಸಂತೋಷ ವಾತಾವರಣವನ್ನು ಸೃಷ್ಟಿಸಿದೆ ಎಂದು ಹೇಳಿದರು.

ಗ್ರಾಪಂನಲ್ಲಿ ಮಹಿಳೆಯರು ಅಧ್ಯಕ್ಷರಾಗಿದ್ದಾರೆ ಎಂದರೆ ಅದು ಅಂಬೇಡ್ಕರ್ ಕೊಟ್ಟ ಸಂವಿಧಾನ ಕಾರಣ. ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವ. ಹೀಗಾಗಿ ಸಂವಿಧಾನ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಬೇಕು ಎಂದರು.

ದೇಶದ ಎಲ್ಲಾ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ನೀಡುವುದರ ಜೊತೆಗೆ ಅಭಿವ್ಯಕ್ತಿ, ಸ್ವಾತಂತ್ರ‍್ಯ, ಸ್ಥಾನಮಾನ ಮತ್ತು ಸಮಾನ ಅವಕಾಶಗಳನ್ನು ನೀಡುವುದು ಸಂವಿಧಾನದ ಮೂಲ ಆಶಯವಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ರೇಖಾ ಹೇಳಿದರು.ಈ ವೇಳೆ ಸಂವಿಧಾನ ಜಾಗೃತಿ ಜಾಥಾವನ್ನು ಗ್ರಾಮದ ಎಲ್ಲಾ ಜನರು, ಶಾಲಾ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು.ಸಂವಿಧಾನ ಜಾಗೃತಿ ಜಾಥಾ ನೋಡಲ್ ಅಧಿಕಾರಿ ನವೀನ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ, ಪಿಡಿಒ ರಾಜು ಮತ್ತು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದ
ಅಸ್ಸಾಂ ಚುನಾವಣೆ ವೀಕ್ಷಕರಾಗಿ ಡಿಕೇಶಿ ನೇಮಕ