ಗುಂಡ್ಲುಪೇಟೆ ತಾಲೂಕು ಆಡಳಿತದಿಂದ ಮಹಿಳಾ ದಿನಾಚರಣೆ । ಟಿಎಲ್‌ಎಂ ಮೇಳ ಉದ್ಘಾಟಿಸಿ ಶಾಸಕ ಕರೆ
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಪ್ರಗತಿ ಸಾಧಿಸುತ್ತಿದ್ದು, ಆದರೆ ಮಹಿಳೆಯರಿಗೆ ಸಮಾನ ಹಕ್ಕು ಕೊಡಿಸುವ ಕೆಲಸ ಆಗಬೇಕು ಎಂದು ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಹೇಳಿದರು.ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತ ಮತ್ತು ತಾಪಂ, ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ತಾಲೂಕು ಮಹಿಳಾ ಒಕ್ಕೂಟ ಮತ್ತು ತಾಲೂಕು ಅಂಗನವಾಡಿ ನೌಕರರ ಸಂಘದ ಸಹಯೋಗದಲ್ಲಿ ತಾಲೂಕು ಮಟ್ಟದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಟಿಎಲ್‌ಎಂ ಮೇಳ ಉದ್ಘಾಟಿಸಿ ಹಾಗೂ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೊಡ್ಡ ಶಕ್ತಿ:
ಮಹಿಳೆಯರು ಸಂಸಾರದ ಹೊಣೆ ಜೊತೆಗೆ ಮಕ್ಕಳ ಲಾಲನೆ, ಪಾಲನೆ ಮಾಡುತ್ತಿದ್ದಾರೆ. ಪ್ರಸ್ತುತ ಮಹಿಳೆಯರು ಹೆಚ್ಚು ಸಕ್ರಿಯರಾಗಿದ್ದಾರೆ. ಮಹಿಳೆಯರು ತನ್ನಷ್ಟಕ್ಕೆ ತಾನೆ ಸ್ವಾವಲಂಬಿಗಳಾಗುತ್ತಿದ್ದಾರೆ. ಇದು ಸಂತಸದ ವಿಷಯ ಎಂದರು.
---
ಏ.೨೧ಕ್ಕೆ ಗುಂಡ್ಲುಪೇಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಅಂದಿನ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಬೇಕು ಎಂದು ಮನವಿ ಮಾಡಿದರು.ಚಾಮರಾಜನಗರ ಸಮತಾ ಸೊಸೈಟಿ ಅಧ್ಯಕ್ಷರಾದ ದೀಪಾ ಬುದ್ಧೆ ಮುಖ್ಯ ಭಾಷಣ ಮಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ. ಹೇಮಾವತಿ ಸ್ವಾಗತಿಸಿದರು.
--
ಅಂತಾರಾಷ್ಟ್ರೀಯ ಮಹಿಳಾ
ದಿನಾಚರಣೆಗೂ ಗಣ್ಯರು ಗೈರುಮಹಿಳೆಯರು ಬಗ್ಗೆ ಸಭೆ, ಸಮಾರಂಭದಲ್ಲಿ ಬೊಬ್ಬೆ ಹಾಕುವ ಸಚಿವ, ಶಾಸಕರು, ವಿಧಾನ ಪರಿಷತ್ ಸದಸ್ಯರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಆಹ್ವಾನ ಪತ್ರಿಕೆಯಲ್ಲಿದ್ದ ಬಹುತೇಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗೈರಾಗಿದ್ದರು.
ಮಹಿಳಾ ದಿನಾಚರಣೆ ಉದ್ಘಾಟಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಮುಖ್ಯ ಅತಿಥಿಗಳಾಗಬೇಕಿದ್ದ ಸಂಸದ ಸುನೀಲ್ ಬೋಸ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಎರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾಡ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು, ಪುರಸಭೆ ಆಡಳಿತಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಾಪಂ ಆಡಾಳಿತಾಧಿಕಾರಿ ಸಿ.ಬಸವರಾಜು, ಬಾಲ ನ್ಯಾಯ ಮಂಡಳಿ ಸದಸ್ಯೆ ಸರಸ್ವತಿ ಎನ್.ಎಂ. ತಹಸೀಲ್ದಾರ್ ಎಂ.ಎಸ್. ತನ್ಮಯ್, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಷಣ್ಮುಗಂ, ಪುರಸಭೆ ಮುಖ್ಯಾಧಿಕಾರಿ ಎಸ್. ಸರವಣ ಗೈರಾಗಿದ್ದರು.---೭ಜಿಪಿಟಿ೨ಗುಂಡ್ಲುಪೇಟೆ ಗುರುಭವನದಲ್ಲಿ ಏರ್ಪಡಿಸಿದ್ದ ಟಿಎಲ್‌ಎಂ ಮೇಳವನ್ನು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಉದ್ಘಾಟಿಸಿದರು.