ಪ್ರಪಂಚಕ್ಕೆ ಮಾದರಿಯಾಗಿರುವ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ದೇಶಕ್ಕೆ ನೀಡಿದ್ದು, ಎಲ್ಲರಿಗೂ ಸಮಾನತೆ ಸಿಕ್ಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಹೇಳಿದರು.
ಚಿತ್ರದುರ್ಗ: ಪ್ರಪಂಚಕ್ಕೆ ಮಾದರಿಯಾಗಿರುವ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ದೇಶಕ್ಕೆ ನೀಡಿದ್ದು, ಎಲ್ಲರಿಗೂ ಸಮಾನತೆ ಸಿಕ್ಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಅಂಬೇಡ್ಕರ್ ಕೇವಲ ದಲಿತರಿಗಷ್ಟೆ ಸಂವಿಧಾನ ನೀಡಿಲ್ಲ. ಎಲ್ಲಾ ಜಾತಿ ಧರ್ಮದವರಿಗೂ ಸಮಾನತೆ ಕಲ್ಪಿಸಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ದೇಶಕ್ಕೆ ಯಾವುದೇ ವ್ಯವಸ್ಥಿತವಾದ ಸಂವಿಧಾನವಿರಲಿಲ್ಲ. ರಾಜಕೀಯ, ಕೈಗಾರಿಕೆ, ಕೃಷಿ, ವ್ಯಾಪಾರ ವಹಿವಾಟು ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಕಾನೂನಿನಡಿ ಸಮಾನತೆ ಸಿಕ್ಕಿದೆ ಎಂದರೆ ಅದಕ್ಕೆ ಸಂವಿಧಾನ ಕಾರಣ ಎಂದರು.ಸಂವಿಧಾನದಡಿ ಪ್ರತಿಯೊಬ್ಬರು ಸ್ವಾತಂತ್ರ್ಯವಾಗಿ ಬದುಕುವ ಹಕ್ಕಿದೆ. ಯಾರ ಹಕ್ಕನ್ನು ಯಾರು ಕಸಿದುಕೊಳ್ಳುವಂತಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಅನೇಕ ಕ್ಯಾತೆಗಳನ್ನು ತಗೆದಿದ್ದರಿಂದ ಜನ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದರು. ಪರಿಣಾಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಹೋಗಿ ಸಂವಿಧಾನ ಹಾಗೂ ಕಾಂಗ್ರೆಸ್ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ ಕಳೆದ ಬಾರಿಗಿಂತ ಈ ಸಾರಿ ಪ್ರತಿ ಬೂತ್‍ನಲ್ಲಿ ಹೆಚ್ಚಿಗೆ ನೂರು ಮತಗಳು ಸಿಗುವಂತೆ ನೋಡಿಕೊಳ್ಳಬೇಕೆಂದು ಕರೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಕಾಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷರುಗಳಾದ ನಜ್ಮತಾಜ್, ಎನ್ ಬಿಟಿ ಜಮೀರ್, ಹೆಚ್.ಶಬ್ಬೀರ್ ಬಾಷಾ, ಶಬ್ಬೀರ್ ಅಹಮದ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಸೈಯದ್ ಅಲ್ಲಾಭಕ್ಷಿ, ಭಾಗ್ಯಮ್ಮ, ಪೈಲ್ವಾನ್ ತಿಪ್ಪೇಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಮಾಜಿ ಸದಸ್ಯ ಗಾಡಿಮಂಜುನಾಥ್, ರಘು, ಡಿ.ಕುಮಾರ್ ಪಿಳ್ಳೆಕೆರನಹಳ್ಳಿ, ಡಿ.ದುರುಗೇಶ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ, ಪರಿಶಿಷ್ಟ ವರ್ಗಗಳ ವಿಭಾಗದ ಅಧ್ಯಕ್ಷ ಎಚ್.ಅಂಜಿನಪ್ಪ, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೇಣುಕ ಶಿವು, ಭಾಗ್ಯಮ್ಮ, ಪವಿತ್ರ, ವಲಿಖಾದ್ರಿ ಇನ್ನು ಅನೇಕರು ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿದ್ದರು.
--------------
ಪೋಟೋ ಕ್ಯಾಪ್ಸನ್
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಂಬೇಡ್ಕರ್‍ರವರ 133 ನೆ ಜಯಂತಿ ಆಚರಣೆಯಲ್ಲಿ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್ ಫೀರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.