ಸಂವಿಧಾನದಿಂದ ಹಕ್ಕು-ಸಮಾನತೆ: ತಹಸೀಲ್ದಾರ್ ಜಿ.ಆದರ್ಶ

KannadaprabhaNewsNetwork |  
Published : Jan 27, 2026, 02:30 AM IST
೨೬ಕೆಎಂಎನ್‌ಡಿ-೮ನಾಗಮಂಗಲದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ೭೭ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಐವರು ಸಾಧಕರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ನಮ್ಮ ದೇಶದ ಸಂವಿಧಾನ ಒಂದು ಕೃತಿ ಕವಿತೆ ಅಥವಾ ಕಾದಂಬರಿಯಲ್ಲ. ಇದೊಂದು ಅತ್ಯಂತ ಶ್ರೇಷ್ಠ ಗ್ರಂಥ. ದೇಶದ ಜನರನ್ನು ಅರ್ಥ ಮಾಡಿಕೊಂಡರೆ ಸಂವಿಧಾನ ಅರ್ಥವಾಗುತ್ತದೆ. ಜನರನ್ನು ಅರ್ಥ ಮಾಡಿಕೊಳ್ಳಬೇಕಾದರೆ ಪ್ರಜೆಗಳ ಇತಿಹಾಸ, ಸಾಮಾಜಿಕ, ಆರ್ಥಿಕ, ರಾಜಕೀಯ ಅಸಮಾತನೆ ಅರ್ಥ ಮಾಡಿಕೊಳ್ಳಬೇಕು.

ಕನ್ನಡಪ್ರಭವಾರ್ತೆ ನಾಗಮಂಗಲ

ದೇಶದಲ್ಲಿ ಸಂವಿಧಾನಕ್ಕಿಂತ ದೊಡ್ಡದು ಯಾವುದೂ ಇಲ್ಲ. ರಾಷ್ಟ್ರದ ಪತಿಯೊಬ್ಬ ಪ್ರಜೆಗೂ ಸಹ ಶಿಕ್ಷಣ ಮೂಲಭೂತ ಹಕ್ಕು ಸೇರಿದಂತೆ ಎಲ್ಲ ರೀತಿಯ ಸಮಾನತೆಯನ್ನು ನಮ್ಮ ಸಂವಿಧಾನ ಕಲ್ಪಿಸಿಕೊಟ್ಟಿದೆ ಎಂದು ತಹಸೀಲ್ದಾರ್ ಜಿ.ಆದರ್ಶ ತಿಳಿಸಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ೭೭ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿ ಮಾತನಾಡಿ, ಭಾರತ ಪ್ರಬುದ್ಧವಾದ ದೇಶವಾಗಬೇಕೆಂದರೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವನ್ನು ಪ್ರತಿಯೊಬ್ಬರೂ ಸಹ ಚಾಚೂ ತಪ್ಪದೆ ಉಳಿಸಿ ಪಾಲಿಸುವ ಜೊತೆಗೆ ಅನುಕರಣೆ ಮಾಡಬೇಕಿದೆ ಎಂದರು.

ನಮ್ಮ ದೇಶದ ಸಂವಿಧಾನ ಒಂದು ಕೃತಿ ಕವಿತೆ ಅಥವಾ ಕಾದಂಬರಿಯಲ್ಲ. ಇದೊಂದು ಅತ್ಯಂತ ಶ್ರೇಷ್ಠ ಗ್ರಂಥ. ದೇಶದ ಜನರನ್ನು ಅರ್ಥ ಮಾಡಿಕೊಂಡರೆ ಸಂವಿಧಾನ ಅರ್ಥವಾಗುತ್ತದೆ. ಜನರನ್ನು ಅರ್ಥ ಮಾಡಿಕೊಳ್ಳಬೇಕಾದರೆ ಪ್ರಜೆಗಳ ಇತಿಹಾಸ, ಸಾಮಾಜಿಕ, ಆರ್ಥಿಕ, ರಾಜಕೀಯ ಅಸಮಾತನೆ ಅರ್ಥ ಮಾಡಿಕೊಳ್ಳಬೇಕು ಎಂದರು.

ತಾಲೂಕಿನ ಮೈಲಾರಪಟ್ಟಣ ಸರ್ಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕ ಎಂ.ಎನ್.ಮಂಜುನಾಥ್ ಮಾತನಾಡಿ, ದೇಶದ ಪ್ರತಿಯೊಬ್ಬ ನಾಗರೀಕನೂ ಸಹ ಸ್ವತಂತ್ರವಾಗಿ ಬದುಕಲು ಸುಭದ್ರವಾದ ಕಾನೂನು ಚೌಕಟ್ಟು ರೂಪಿಸಿ, ಸಮಾನತೆ ಮತ್ತು ಭ್ರಾತೃತ್ವದಡಿಯಲ್ಲಿ ಬದುಕುವ ಹಕ್ಕನ್ನು ನೀಡಿರುವ ಪ್ರತೀಕವೇ ಗಣರಾಜ್ಯ. ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾತ್ಮಗಾಂಧೀಜಿ ಮತ್ತು ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಎಲ್ಲ ಮಹನೀಯರನ್ನು ಸ್ಮರಿಸುವ ಸುವರ್ಣಾವಕಾಶ ನಮ್ಮೆಲ್ಲರಿಗೂ ಸಿಕ್ಕಿದೆ ಎಂದರು.

ಸಮಾರಂಭದ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಐವರು ಸಾಧಕರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. ನಂತರ ವಿವಿಧ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ತಾಪಂ ಇಒ ಸತೀಶ್, ಡಿವೈಎಸ್ಪಿ ಬಿ.ಚಲುವರಾಜು, ಸಿಪಿಐ ಹೇಮಂತ್ ಕುಮಾರ್, ಬಿಇಒ ಲೋಕೇಶ್, ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಸಹಾಯಕ ಕೃಷಿ ನಿರ್ದೇಶಕ ಹರೀಶ್, ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರತ್ ರಾಜ್, ಸಿಡಿಪಿಒ ಕೃಷ್ಣಮೂರ್ತಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ವೀಣಾ, ಅಗ್ನಿಶಾಮಕ ಠಾಣಾಧಿಕಾರಿ ಮಂಜುನಾಥ್, ಕನ್ನಡ ಸಂಘದ ನಟರಾಜ್ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ