ಕನ್ನಡಪ್ರಭ ವಾರ್ತೆ ಶಹಾಪುರ
ನಗರದ ಡಿ.ಡಿ.ಯು ಕೇಂದ್ರೀಯ ಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ, ಕಂದಾಯ ಇಲಾಖೆ, ಯಾದಗಿರಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಕಚೇರಿ, ತಾಲೂಕು ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಡಿ.ಡಿ.ಯು ಕೇಂದ್ರೀಯ ಶಾಲೆ ಶಹಾಪುರ, ವರ್ಲ್ಡ್ ವಿಷನ್ ಸಂಸ್ಥೆ ಶಹಾಪುರ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ 21ನೇ ವಿಧಿ 6ರಿಂದ 14 ವರ್ಷದ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕೆಂದು ಹೇಳುತ್ತದೆ. ಶಿಕ್ಷಣದಿಂದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯವಿದ್ದು, ಶಿಕ್ಷಣವು ಪ್ರತಿ ಮಗುವಿನ ಮೂಲಭೂತ ಹಕ್ಕು ಆಗಿದೆ ಎಂದರು.ಪ್ಯಾನಲ್ ವಕೀಲರು ಹಾಗೂ ವಿಶೇಷ ಸಂಪನ್ಮೂಲ ವ್ಯಕ್ತಿ ಮಲ್ಲಪ್ಪ ಕುರಿ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ, ಗ್ಯಾರೇಜ್, ಕಾರ್ಖಾನೆ, ಹೋಟೆಲ್, ರೆಸ್ಟೋರೆಂಟ್, ಡಾಬಾ, ಮನೆಗೆಲಸ ಇತರೆ ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಿಯಾಜ್ ಪಟೇಲ್ ವರ್ಕ್ನಳ್ಳಿ ಮಾತನಾಡಿದರು. ಸಹಾಯಕ ಸರಕಾರಿ ಅಭಿಯೋಜಕರಾದ ದಿವ್ಯಾರಾಣಿ, ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಬಿರಾದಾರ್, ಶಹಾಪುರ ಕಾರ್ಮಿಕ ನಿರೀಕ್ಷಕ ಸಾಬೇರಾ ಬೇಗಂ, ಡಿ.ಡಿ.ಯು ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ದೇವೇಂದ್ರಪ್ಪ ಮೇಟಿ, ಡಿ.ಡಿ.ಯು ಶಿಕ್ಷಣ ಸಂಸ್ಥೆ ಪ್ರಾಂಶಪಾಲರಾದ ಮಥಾಯಿ, ಜಸ್ಟೀನ್, ವರ್ಲ್ಡ್ ವಿಷನ್ ಸಂಸ್ಥೆಯ ರೋಮ, ಕಾರ್ಮಿಕ ಇಲಾಖೆ ಸಿಬ್ಬಂದಿ ಜಾವೇದ್, ಎಥೇಶ್ಯಾಮ್ ಇತರರಿದ್ದರು.