ಕನ್ನಡಪ್ರಭ ವಾರ್ತೆ ಮಂಗಳೂರು
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಂಗಳೂರು ವಕೀಲರ ಸಂಘ ಮತ್ತು ಸಂಬಂಧಿಸಿದ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳು ಶಿಕ್ಷಣದಿಂದ ವಂಚಿತರಾದರೆ ಬಡತನದಲ್ಲೇ ಮುಂದುವರಿದು ಭವಿಷ್ಯದಲ್ಲಿ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುವ ಸಾಧ್ಯತೆ ಇದೆ. ಶಿಕ್ಷಿತರು ಸರ್ಕಾರದ ನಿಯಮ ಕಾನೂನುಗಳನ್ನು ಅರಿತುಕೊಳ್ಳುವುದರಿಂದ ತಮ್ಮ ಹಕ್ಕುಗಳನ್ನು ಕೇಳಿ ಪಡೆದುಕೊಳ್ಳುತ್ತಾರೆ ಎಂದು ಅವರು ತಿಳಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ಕಾರ್ಮಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಪಾಟೀಲ ವೀರನಗೌಡ ಎಸ್. ಮಾತನಾಡಿ, ಬಾಲ ಕಾರ್ಮಿಕರನ್ನು ದುಡಿಸುವ ಅವರ ಪಾಲಕರು ಕೂಡ ಶಿಕ್ಷಾರ್ಹರಾಗಿರುತ್ತಾರೆ. ಭವಿಷ್ಯದ ಪ್ರಜೆಗಳಾಗಿರುವ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿಸಿ ಅವರ ಭವಿಷ್ಯವನ್ನು ಹಿಚುಕುವುದು ಕಳವಳಕಾರಿ ಎಂದರು. ಉಪಕಾರ್ಮಿಕ ಆಯುಕ್ತ ಸೋಮಣ್ಣ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಬಾಲಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ ಮಕ್ಕಳಿಂದ ವಿವಿಧ ಕಾರ್ಯಕ್ರಮ ನಡೆಯಿತು. ಸಹಾಯಕ ಕಾರ್ಮಿಕ ಆಯುಕ್ತ ಶಿವಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.