ಸಮಾಜಕ್ಕೆ ಜೀವನವನ್ನೇ ಮುಡುಪಾಗಿಟ್ಟ ಈಶ್ವರಪ್ಪ

KannadaprabhaNewsNetwork |  
Published : Jun 11, 2025, 11:59 AM IST
ಪೋಟೋ: 10ಎಸ್‌ಎಂಜಿಕೆಪಿ08ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಮಂಗಳವಾರ ಕೆ.ಎಸ್. ಈಶ್ವರಪ್ಪನವರ 77ನೇ ಜನ್ಮದಿನ ನಿಮಿತ್ತ ಶ್ರೀಗಂಧ ಸಂಸ್ಥೆ ಆಯೋಜಿಸಿದ್ದ ಧರ್ಮಸಭೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕ ಸು. ರಾಮಣ್ಣ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ: ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕ ಸು. ರಾಮಣ್ಣ ಬಣ್ಣಿಸಿದರು.

ಶಿವಮೊಗ್ಗ: ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕ ಸು. ರಾಮಣ್ಣ ಬಣ್ಣಿಸಿದರು.

ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಮಂಗಳವಾರ ಕೆ.ಎಸ್.ಈಶ್ವರಪ್ಪ ಅವರ 77ನೇ ಜನ್ಮದಿನ ನಿಮಿತ್ತ ಶ್ರೀಗಂಧ ಸಂಸ್ಥೆ ಆಯೋಜಿಸಿದ್ದ ಧರ್ಮಸಭೆಯಲ್ಲಿ ಅವರು ಮಾತನಾಡಿದರು.

ನಾವು ಗಳಿಸಿದ, ಗುರುತಿಸಿದ ಸದ್ಗುಣಗಳನ್ನು ಉಳಿಸಿಕೊಳ್ಳುತ್ತೇನೆ ಎಂಬ ಸಂಕಲ್ಪ ಮಾಡಬೇಕು. ಸಂಕಲ್ಪದ ಸಂಸ್ಕಾರದಿಂದ ಸಾರ್ಥಕ ಚೈತನ್ಯ ಬರುತ್ತದೆ. ವ್ಯಕ್ತಿ ಮೇಲೆ ಬರಬೇಕಾದರೆ ದುಡ್ಡಿನ ಆಧಾರದ ಮೇಲೆ ಬರುತ್ತಾನೆ. ಇಂದಿನ ರಾಷ್ಟ್ರೀಯ ನಾಯಕರೆನಿಸಿಕೊಂಡವರು ದುಡ್ಡು ಮತ್ತು ಜಾತಿ ಆಧಾರದ ಮೇಲೆ ನಡೆಯುತ್ತಿರುವುದು ರಾಜಕೀಯ ವಿಡಂಬನೆಯಾಗಿದೆ. ಈಶ್ವರಪ್ಪನವರು ಎಂದಿಗೂ ಜಾತಿಯನ್ನು ಏಣಿಯನ್ನಾಗಿ ಬಳಸಲಿಲ್ಲ. ಬದಲಾಗಿ ಹಿಂದುತ್ವ, ರಾಷ್ಟ್ರ, ಸಮಾಜ ಸೇವೆಗೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ ಎಂದರು.

ಕೆ.ಎಸ್. ಈಶ್ವರಪ್ಪನವರು ಎಂದೂ ಸಂಘದ ನಿಷ್ಠೆಯನ್ನು ಬಿಟ್ಟಿಲ್ಲ. ರಾಜಕೀಯದಲ್ಲಿ ಎಷ್ಟೇ ಏರುಪೇರಾದರೂ ಎಲ್ಲೂ ರಾಜೀ ಮಾಡಿಕೊಳ್ಳಲಿಲ್ಲ, ರಾಷ್ಟ್ರಜೀವನವನ್ನೇ ತಮ್ಮ ಜೀವನದುದ್ದಕ್ಕೂ ಸಮರ್ಥವಾಗಿ ಮುಂದುವರಿಸಿಕೊಂಡು ಬಂದಿದ್ದಾರೆ. ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ದೇಶ ಸೇವೆಯನ್ನು ಮಾಡುತ್ತಿದ್ದಾರೆ ಎಂದು ಗುಣಗಾನ ಮಾಡಿದರು.

ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಮಾದರಚನ್ನಯ್ಯ ಸ್ವಾಮೀಜಿ, ಕಾಗೆನೆಲೆ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಧರ್ಮಸಭೆಗೂ ಮೊದಲು ಮಹಾವೀರ ಗೋಶಾಲೆಯ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿದರು. ಬಳಿಕ ಶುಭ ಮಂಗಳ ಸಮುದಾಯ ಭವನದ ಆವರಣದಲ್ಲಿ ಲಿಲಿತ ಸಹಸ್ರನಾಮ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ, ರುದ್ರಹೋಮ, ಶತ ಚಂಡಿಹವನ, 1008 ಮಹಿಳೆಯರಿಗೆ ಬಾಗಿನ ಸಮರ್ಪಣೆ ನಡೆಯಿತು.

ಸಭಾ ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ನಡೆಯುವ ಸಾಮಾಜಿಕ ಕಾರ್ಯಗಳಿಗೆ ಈಶ್ವರಪ್ಪನವರ ಕುಟುಂಬದಿಂದ ಮಂಗಲ ನಿಧಿಯನ್ನು ಹಿರಿಯ ಪ್ರಚಾರಕರಾದ ಸು.ರಾಮಣ್ಣನವರಿಗೆ ಸಮರ್ಪಿಸಲಾಯಿತು.

ವೇದಿಕೆಯಲ್ಲಿ ಜಯಲಕ್ಷ್ಮೀ ಈಶ್ವರಪ್ಪ, ಪುತ್ರ ಕೆ.ಈ.ಕಾಂತೇಶ್, ನಟರಾಜ್ ಭಾಗವತ್, ಪದ್ಮನಾಭ ಭಟ್, ಮಹಾಲಿಂಗ ಶಾಸ್ತ್ರಿ, ಕೆ.ಜಿ.ಕೃಷ್ಣಾನಂದ, ಈ.ವಿಶ್ವಾಸ್ ಸೇರಿದಂತೆ ರಾಷ್ಟ್ರಭಕ್ತ ಬಳಗದ ಪ್ರಮುಖರು ಹಾಗೂ ಅಪಾರ ಅಭಿಮಾನಿಗಳು, ವಿವಿಧ ಮಠಾಧೀಶರು ಉಪಸ್ಥಿತರಿದ್ದರು.

ಶ್ರೀರಾಮ ತೋರಿದ ಆದರ್ಶಗಳನ್ನು ಕೆ.ಎಸ್.ಈಶ್ವರಪ್ಪ ಅವರು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಂಡು ಬರುತ್ತಿದ್ದಾರೆ. ಇದು ಇಡೀ ಸಮಾಜಕ್ಕೆ ಮಾದರಿಯಾಗಿದೆ.

- ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ.

ವಿದ್ಯಾರ್ಥಿದೆಸೆಯಿಂದಲೇ ಈಶ್ವರಪ್ಪನವರು ರಾಷ್ಟ್ರಭಕ್ತಿ ಮೈಗೂಡಿಸಿಕೊಂಡವರು. ಜೀವನದಲ್ಲಿ ಎಷ್ಟೇ ರಾಜಕೀಯ ವಿಪ್ಲವವಾದರೂ ರಾಷ್ಟ್ರೀಯತೆಯಿಂದ ವಿಮುಖರಾಗಲಿಲ್ಲ. ಇವತ್ತಿಗೂ ರಾಷ್ಟ್ರಸೇವೆಗೆ ಕಟಿಬದ್ಧರಾಗಿದ್ದಾರೆ ಪತ್ನಿ ಜಯಲಕ್ಷ್ಮೀ, ಪುತ್ರ ಕಾಂತೇಶ್ ಅವರೊಡನೆ ಇರುವ ಅವಿನಾಭಾವ ಸಂಬಂಧ, ವಾತ್ಸಲ್ಯ, ಪ್ರೀತಿ ಇತರರಿಗೂ ಮಾದರಿ.

- ಚಿತ್ರದುರ್ಗದ ಶ್ರೀ ಮಾದರಚನ್ನಯ್ಯ ಸ್ವಾಮೀಜಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''