ಸಾಗರಕ್ಕೆ ಈಶ್ವರಪ್ಪ ಭೇಟಿ: ಪ್ರಮುಖರ ಮನೆಗಳಲ್ಲಿ ಚರ್ಚೆ

KannadaprabhaNewsNetwork |  
Published : Mar 17, 2024, 01:46 AM ISTUpdated : Mar 17, 2024, 02:45 PM IST
೧೬ಕೆ.ಎಸ್.ಎ.ಜಿ.೧ | Kannada Prabha

ಸಾರಾಂಶ

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತೇವೆ ಎಂದು ಶುಕ್ರವಾರ ಘೋಷಣೆ ಮಾಡಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶನಿವಾರ ಸಾಗರಕ್ಕೆ ಭೇಟಿ ನೀಡಿ, ಪ್ರಮುಖರ ಮನೆ ಹಾಗೂ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು.

ಕನ್ನಡಪ್ರಭ ವಾರ್ತೆ ಸಾಗರ

 ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತೇವೆ ಎಂದು ಶುಕ್ರವಾರ ಘೋಷಣೆ ಮಾಡಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶನಿವಾರ ಸಾಗರಕ್ಕೆ ಭೇಟಿ ನೀಡಿ, ಪ್ರಮುಖರ ಮನೆ ಹಾಗೂ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು.

ಶೃಂಗೇರಿ ಶಂಕರ ಮಠದಲ್ಲಿ ಪೂಜೆ ಸಲ್ಲಿಸಿ, ಬ್ರಾಹ್ಮಣ ಸಮಾಜದ ಪ್ರಮುಖರಾದ ಮ.ಸ. ನಂಜುಂಡಸ್ವಾಮಿ ಅವರ ಮನೆಗೆ ಭೇಟಿ ನೀಡಿ ಪ್ರಮುಖರ ಜೊತೆ ಮಾತುಕತೆ ನಡೆಸಿದರು.

ಈ ಸಂದರ್ಭ ನಂಜುಂಡಸ್ವಾಮಿ ಮಾತನಾಡಿ, ಬಿಜೆಪಿ ಪ್ರಮುಖರಾದ ಕೆ.ಎಸ್.ಈಶ್ವರಪ್ಪ ಅವರಿಗೆ ಅನ್ಯಾಯ ಆಗಿರುವ ಈ ಹೊತ್ತಿನಲ್ಲಿ ನಾವು ಅವರ ಜೊತೆ ನಿಲ್ಲುತ್ತೇವೆ. 

ಈಶ್ವರಪ್ಪ ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ತಮ್ಮ ಹಾಗೂ ಮಗನ ಭವಿಷ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಅನಂತರ ಈಶ್ವರಪ್ಪ ವರದಹಳ್ಳಿಯ ಶ್ರೀಧರಾಶ್ರಮಕ್ಕೆ ಭೇಟಿ ನೀಡಿ, ಶ್ರೀಧರಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. 

ಬಳಿಕ ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಶುಕ್ರವಾರ ನಾನು ಪ್ರಮುಖರು ಹಾಗೂ ಅಭಿಮಾನಿಗಳ ಸಭೆಯಲ್ಲಿ ಘೋಷಣೆ ಮಾಡಿದ್ದೇನೆ. 

ಅನಂತರ ಅಭೂತಪೂರ್ವವಾದ ಬೆಂಬಲ ಎಲ್ಲ ಕಡೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಗರ ತಾಲೂಕಿಗೆ ಭೇಟಿ ನೀಡಿ, ಚರ್ಚೆ ನಡೆಸಲಾಗಿದೆ.

ಹಿಂದೂ ಧರ್ಮ ಮತ್ತು ಭಾರತ ದೇಶವನ್ನು ವಿಶ್ವಗುರುವಾಗಿಸಬೇಕು ಎನ್ನುವ ಉದ್ದೇಶದಿಂದ ನಾನು ಸ್ಪರ್ಧೆ ಮಾಡುತ್ತಿದ್ದೇನೆ. ಎಲ್ಲರೂ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಅಶೋಕ್ ಭಟ್, ಸುದರ್ಶನ್, ಎಸ್.ವಿ. ಕೃಷ್ಣಮೂರ್ತಿ, ವೈ.ಮೋಹನ್, ಎಸ್.ಎಲ್. ಮಂಜುನಾಥ್, ವಸಂತಕುಮಾರ್, ಗೋಪಾಲ್, ಟಿ.ವಿ.ಪಾಂಡುರಂಗ, ಗುಂಡಪ್ಪ, ಸತೀಶ್ ಗೌಡ, ಪರಮಾತ್ಮ, ಗಜಾನನ ಜೋಯ್ಸ್, ರಘುನಾಥ್, ಬದರಿನಾಥ್ ಇನ್ನಿತರರು ಹಾಜರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ