ಈ ಬಾರಿ ಗುಡಿಬಂಡೆ ತಾಲೂಕಿನಲ್ಲಿ ಉತ್ತಮ ಫಲಿತಾಂಶ ಗಳಿಸಲು ಇಲಾಖೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಆಯಾ ಪ್ರೌಢಶಾಲೆಗಳ ವ್ಯಾಫ್ತಿಯಲ್ಲಿ ವಾಟ್ಸಾಪ್ ಗ್ರೂಪ್ ಸಹ ರಚನೆ ಮಾಡಿ, ಅದರಲ್ಲಿ ವಿದ್ಯಾರ್ಥಿಗಳ ಪೋಷಕರನ್ನು ಸೇರಿಸಿ ಪರೀಕ್ಷೆಯ ಕುರಿತು ಮಾಹಿತಿ ನೀಡಲಾಗುತ್ತದೆ. ನೋಡಲ್ ಅಧಿಕಾರಿಗಳಿಗೆ ಪ್ರೌಢಶಾಲೆಗಳ ಮುಖ್ಯಸ್ಥರು ಸಹಕಾರ ನೀಡಬೇಕು.
ಕನ್ನಡಪ್ರಭ ವಾರ್ತೆ ಗುಡಿಬಂಡೆ
2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಗುಡಿಬಂಡೆ ತಾಲೂಕು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಲು ಎಲ್ಲ ಇಲಾಖೆಗಳು, ನೋಡಲ್ ಅಧಿಕಾರಿಗಳು, ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು ಶ್ರಮ ವಹಿಸಬೇಕೆಂದು ತಹಸೀಲ್ದಾರ್ ಸಿಗ್ಬತ್ತುಲ್ಲಾ ಸೂಚಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲೆಗಳ ಮುಖ್ಯಶಿಕ್ಷಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲಾಧಿಕಾರಿಗಳು ತಾಲೂಕಿನ ಪ್ರೌಢಶಾಲೆಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಿದ್ದಾರೆ ಎಂದರು.
ನೋಡಲ್ ಅಧಿಕಾರಿಗಳಿಗೆ ಪ್ರೌಢಶಾಲೆಗಳ ಮುಖ್ಯಸ್ಥರು ಸಹಕಾರ ನೀಡಬೇಕು. ಅದೇ ರೀತಿ ನೋಡಲ್ ಅಧಿಕಾರಿಗಳೂ ಸಹ ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ಪರಿಸ್ಥಿತಿ ಅರಿತು, ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.
ಬಿಇಒ ಕೃಷ್ಣಪ್ಪ ಮಾತನಾಡಿ, ಈ ಬಾರಿ ಗುಡಿಬಂಡೆ ತಾಲೂಕಿನಲ್ಲಿ ಉತ್ತಮ ಫಲಿತಾಂಶ ಗಳಿಸಲು ಇಲಾಖೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಆಯಾ ಪ್ರೌಢಶಾಲೆಗಳ ವ್ಯಾಫ್ತಿಯಲ್ಲಿ ವಾಟ್ಸಾಪ್ ಗ್ರೂಪ್ ಸಹ ರಚನೆ ಮಾಡಿ, ಅದರಲ್ಲಿ ವಿದ್ಯಾರ್ಥಿಗಳ ಪೋಷಕರನ್ನು ಸೇರಿಸಿ ಪರೀಕ್ಷೆಯ ಕುರಿತು ಮಾಹಿತಿ ನೀಡಲಾಗುತ್ತದೆ ಎಂದರು.
ಈ ಸಮಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ನೋಡಲ್ ಅಧಿಕಾರಿಗಳಾದ ಕೃಷಿ ಇಲಾಖೆಯ ಕೇಶವರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಲಕ್ಷ್ಮೀಪತಿರೆಡ್ಡಿ, ಶಿಶು ಅಭಿವೃದ್ದಿ ಅಧಿಕಾರಿ ರಫೀಕ್, ಪಶು ಇಲಾಖೆಯ ಸುಬ್ರಮಣ್ಯ, ಬಿಸಿಎಂ ಇಲಾಖೆಯ ಶಂಕರಪ್ಪ, ಬಿಇಒ ಇಲಾಖೆಯ ರಘು ಸೇರಿದಂತೆ ವಿವಿಧ ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.