-ಗಂಗೂಬಾಯಿ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತ ಸುರಪುರ
ಯಾದಗಿರಿ ಜಿಲ್ಲೆಯಲ್ಲಿ ವಿಶ್ವ ವಿದ್ಯಾಲಯ ಸ್ಥಾಪಿಸಬೇಕು. ಈ ಕುರಿತು ಸಚಿವರಲ್ಲಿ ಮನವಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ಧನಗೌಡ ಪೊಲೀಸ್ ಪಾಟೀಲ್ ಹೇಳಿದರು.ತಾಲೂಕಿನ ಕೆಂಭಾವಿ ಪಟ್ಟಣದ ಗಂಗೂಬಾಯಿ ಶಾಂತಗೌಡ ಪೊಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿವಿಧ ಸಮಿತಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಹಿರೇಮಠ ಸಂಸ್ಥಾನದ ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.
ಪಿಯು ಕಾಲೇಜು ಪ್ರಾಂಶುಪಾಲ ವೀರೇಂದ್ರ ಧರಿ, ವರ್ತಕರಾದ ಶರಣಬಸವ (ಕಾಕಾ) ದಿಗ್ಗಾವಿ, ಸಾಹೇಬಲಾಲ್ ಆಂದೇಲಿ, ಪ್ರಾಧ್ಯಾಪಕ ನಸರೀನ್ ತಾಜ್, ಸಿದ್ದಲಿಂಗ ರಾಥೋಡ್, ಮಲ್ಲಿಕಾರ್ಜುನ ಮರಡ್ಡಿ, ಹಳೆಯ ವಿದ್ಯಾರ್ಥಿಗಳ ಪ್ರತಿನಿಧಿ ವೀರೇಶ ಬಜಂತ್ರಿ ಇದ್ದರು.
------ಫೋಟೊ: ಸುರಪುರ ತಾಲೂಕಿನ ಕೆಂಭಾವಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಜಿಪಂ ಮಾಜಿ ಅಧ್ಯಕ್ಷ ಸಿದ್ಧನಗೌಡ ಪೊಲೀಸ್ ಪಾಟೀಲ್ ಉದ್ಘಾಟಿಸಿದರು.