ಜಾಂಬೋಟಿ, ಕುಂಭಾರ್ಡಾದಲ್ಲಿ ಹೊಸ ಪಿಎಚ್‌ಸಿ ಸ್ಥಾಪಿಸಿ

KannadaprabhaNewsNetwork |  
Published : Jul 13, 2026, 03:15 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದ ಜಾಂಬೋಟಿ ಹಾಗೂ ಕುಂಭಾರ್ಡಾ ಗ್ರಾಮಗಳಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್‌ಸಿ) ಸ್ಥಾಪಿಸುವಂತೆ ಖಾನಾಪುರ ಶಾಸಕ ವಿಠಲ್ ಸೋಮಣ್ಣ ಹಲಗೇಕರ ಅವರು ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದ ಜಾಂಬೋಟಿ ಹಾಗೂ ಕುಂಭಾರ್ಡಾ ಗ್ರಾಮಗಳಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್‌ಸಿ) ಸ್ಥಾಪಿಸುವಂತೆ ಖಾನಾಪುರ ಶಾಸಕ ವಿಠಲ್ ಸೋಮಣ್ಣ ಹಲಗೇಕರ ಅವರು ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಖಾನಾಪುರ ವಿಧಾನಸಭಾ ಕ್ಷೇತ್ರವು ಭೌಗೋಳಿಕವಾಗಿ ಅತ್ಯಂತ ವಿಸ್ತಾರವಾಗಿದ್ದು, ದಟ್ಟ ಅರಣ್ಯ ಪ್ರದೇಶ ಹಾಗೂ ಗ್ರಾಮೀಣ ಭಾಗಗಳನ್ನು ಒಳಗೊಂಡಿದೆ. ಈ ಕಾರಣದಿಂದ ಗ್ರಾಮೀಣ ಜನರಿಗೆ ಸಕಾಲದಲ್ಲಿ ತುರ್ತು ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯುವುದು ಕಷ್ಟಕರವಾಗಿದೆ ಎಂದು ತಿಳಿಸಿದರು.

ಬೆಳಗಾವಿ-ಚೋರ್ಲಾ-ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಾಂಬೋಟಿ ಗ್ರಾಮವು ಸುತ್ತ-ಮುತ್ತಲಿನ ಹಲವು ಗ್ರಾಮಗಳಿಗೆ ಪ್ರಮುಖ ಕೇಂದ್ರವಾಗಿದ್ದು, ಧಾರವಾಡ-ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕುಂಭಾರ್ಡಾ ಗ್ರಾಮವೂ ವಾಹನ ಸಂಚಾರ ಹಾಗೂ ಗ್ರಾಮೀಣ ಸಂಪರ್ಕದ ಪ್ರಮುಖ ಕೇಂದ್ರವಾಗಿದೆ. ಈ ಎರಡೂ ಹೆದ್ದಾರಿಗಳಲ್ಲಿ ದಿನನಿತ್ಯ ಹೆಚ್ಚಿನ ವಾಹನ ಸಂಚಾರ ನಡೆಯುವುದರಿಂದ ಅಪಘಾತಗಳ ಸಂಭವವೂ ಹೆಚ್ಚಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಪಘಾತಗಳು ಸಂಭವಿಸಿದಾಗ, ಗರ್ಭಿಣಿಯರು, ವೃದ್ಧರು ಹಾಗೂ ಮಕ್ಕಳಿಗೆ ತುರ್ತು ಚಿಕಿತ್ಸೆ ಅಗತ್ಯವಾದ ಸಂದರ್ಭದಲ್ಲಿ ದೂರದ ಆರೋಗ್ಯ ಕೇಂದ್ರಗಳಿಗೆ ತೆರಳಬೇಕಾದ ಅನಿವಾರ್ಯತೆ ಇರುವುದರಿಂದ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ. ಇದರಿಂದ ಅನೇಕ ಸಂದರ್ಭಗಳಲ್ಲಿ ಜೀವಹಾನಿಯೂ ಸಂಭವಿಸುತ್ತಿದೆ ಎಂದು ಶಾಸಕರು ಆತಂಕ ವ್ಯಕ್ತಪಡಿಸಿದರು.

ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳಿಗೆ ತಕ್ಷಣ ವೈದ್ಯಕೀಯ ನೆರವು ಒದಗಿಸುವ ಉದ್ದೇಶದಿಂದ ಜಾಂಬೋಟಿ ಮತ್ತು ಕುಂಭಾರ್ಡಾ ಗ್ರಾಮಗಳಲ್ಲಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವುದು ಅತ್ಯಗತ್ಯವಾಗಿದೆ ಎಂದು ಸರ್ಕಾರದ ಗಮನ ಸೆಳೆದರು. ಈ ಹಿನ್ನೆಲೆಯಲ್ಲಿ ಜಾಂಬೋಟಿ ಹಾಗೂ ಕುಂಭಾರ್ಡಾ ಗ್ರಾಮಗಳಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿ, ಗ್ರಾಮೀಣ ಜನರಿಗೆ ಸುಲಭ ಹಾಗೂ ತ್ವರಿತ ಆರೋಗ್ಯ ಸೇವೆ ಕಲ್ಪಿಸಬೇಕು ಎಂದು ಕೋರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈ. ರಾಮಕೃಷ್ಣರ ನಿರ್ಧಾರ ಸಾವಿರಾರು ಜನರಿಗೆ ಆಶ್ರಯ
ವಿದ್ಯಾರ್ಥಿಗಳಿಗೆ ಶಿಸ್ತು ಪರಿಶ್ರಮ ಯಶಸ್ಸಿನ ಮೆಟ್ಟಿಲು