ಕನ್ನಡ ಪ್ರಭ ವಾರ್ತೆ ಕುಣಿಗಲ್
ತಾಲೂಕು ಹಾಗೂ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ನೀರಿನ ಘಟಕಗಳು ನಿರ್ವಹಣೆ ಇಲ್ಲದೆ ಹಾಳಾಗುತ್ತಿವೆ. ಈ ಘಟಕಗಳು ಇರುವುದರಿಂದ ಅಧಿಕಾರಿಗಳು ಪುನಃ ಹೊಸ ಘಟಕ ಸ್ಥಾಪನೆ ಮಾಡಿಲ್ಲ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಆದ್ದರಿಂದ ಬೇರೆ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕುಣಿಗಲ್ ತಾಲೂಕಿನಲ್ಲಿ ನೀರಿನ ಘಟಕ ಪ್ರಾರಂಭಿಸಲು ನಾನು ಚಿಂತನೆ ಮಾಡಿದ್ದೇನೆ ಎಂದು ಸಂಸದ ಡಾ. ಮಂಜುನಾಥ್ ಹೇಳಿದರು.ತಾಲೂಕಿನ ಎಡೆಯೂರ ಗ್ರಾಪಂ ವ್ಯಾಪ್ತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಿ ಜನರಿಂದ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.
ಅಧಿಕಾರಿಗಳು ಜವಾಬ್ದಾರಿಯಿಂದ ಹಾಗೂ ಬದ್ಧತೆಯಿಂದ ಕೆಲಸ ಮಾಡಿದಾಗ ಅಭಿವೃದ್ಧಿ ಜೊತೆಗೆ ಅವರಿಗೂ ಕೂಡ ಉತ್ತಮ ಗೌರವ ಸಿಗುತ್ತದೆ. ಯಾವುದೇ ಅಧಿಕಾರಿಗಳು ಒಂದು ಪಕ್ಷಕ್ಕೆ ಅಂಟಿಕೊಳ್ಳದಂತೆ ಸಾರ್ವಜನಿಕವಾಗಿ ಕೆಲಸ ಮಾಡಿ ಅಧಿಕಾರಿಗಳು ಕೂಡ ರಾಜಕೀಯ ಜೊತೆಗೆ ಸೇರಿ ಅಡ್ಡದಾರಿ ಹಿಡಿಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. ಕುಣಿಗಲ್ ತಾಲೂಕಿಗೆ1 0 ಕುಡಿಯುವ ನೀರಿನ ಘಟಕ ಖಾಸಗಿ ಅವರಿಂದ ಮಾಡಲು ತೀರ್ಮಾನಿಸಿದ್ದೇನೆ ಎಂದರು. ಇದರಿಂದಾಗಿ ನೀರಿನ ಸಮಸ್ಯೆಗೆ ಪರಿಹಾರ ನೀಡಲಾಗುವುದು ಎಂದರು.ಕುಣಿಗಲ್ ನಲ್ಲಿ ಮುಚ್ಚಿ ಹೋಗಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಪುನಃ ಆರಂಭಿಸುವ ಹಿನ್ನೆಲೆಯಲ್ಲಿ ಚಿಂತನೆ ನಡೆಸಲಾಗುತ್ತಿದೆ. ಎಡಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂಬತ್ತು ಎಕರೆ ಗುರುತಿಸಿ ನಿವೇಶನ ಮಾಡುವ ವಿಚಾರವಾಗಿ ತಯಾರಿ ನಡೆಯುತ್ತಿದೆ ಎಂದರು. ರಸ್ತೆ ಅಪಘಾತದಲ್ಲಿ 4.5 ಲಕ್ಷ ಜನ ಮೃತಪಟ್ಟರೆ ಕ್ಯಾನ್ಸರ್ ಇಂದ 6 ಲಕ್ಷ ಜನ ಮೃತಪಟ್ಟಿದ್ದಾರೆ ಹೃದಯಾಘಾತ ಕ್ಯಾನ್ಸರ್ ಬಿಟ್ಟರೆ ರಸ್ತೆ ಅಪಘಾತದಲ್ಲಿ ಹೆಚ್ಚು ಸಾವು ರಸ್ತೆ ಸುರಕ್ಷತೆಯ ಬಗ್ಗೆ ಅಪಘಾತ ಸಂದರ್ಭದಲ್ಲಿ ಗಾಯಾಳುವನ್ನು ರಕ್ಷಿಸುವ ಸಲುವಾಗಿ ಹೆದ್ದಾರಿಯಲ್ಲಿ ತುರ್ತು ಚಿಕಿತ್ಸಾ ಘಟಕ ದೇಶಾದ್ಯಂತ ಎಲ್ಲಾ ಹೆದ್ದಾರಿಗಳಲ್ಲೂ ಪ್ರಾರಂಭ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಕಾಡು ಪ್ರಾಣಿಗಳಿಂದ ಮೃತಪಟ್ಟ ರೈತನಿಗೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ನೀಡುವ 25 ಲಕ್ಷ ರೂಗಳ ಪರಿಹಾರವನ್ನೇ ನೀಡಬೇಕೆಂದು ಪ್ರಸ್ತಾವನೆ ಸಲ್ಲಿಸಲಾಗಿದೆ. ಎಡೆಯೂರಿನಲ್ಲಿರುವ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ವಿಚಾರವಾಗಿ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಕ್ರಮ ವಹಿಸುವುದಾಗಿ ತಿಳಿಸಿದರು.
ಈ ವೇಳೆ ಕೃಷ್ಣಕುಮಾರ್, ಜಗದೀಶ್ ಪಿಡಿಒ ಚಂದ್ರಹಾಸ , ನರಸಿಂಹಮೂರ್ತಿ, ಉಷಾ, ಗ್ರಾಪಂ ಅಧ್ಯಕ್ಷ ರವಿ ತಿಮ್ಮೇಗೌಡ , ದೀಪು ಮರಿಯಣ್ಣ, ಟಿ ಜಿ ವೆಂಕಟೇಶ್, ಮಂಜುನಾಥ್, ಕೃಷ್ಣೇಗೌಡ ಸೇರಿದಂತೆ ಇತರರು ಇದ್ದರು.