ಕನ್ನಡಪ್ರಭ ವಾರ್ತೆ ಕುಷ್ಟಗಿ
ಮೇ 7ರಂದು ನಡೆಯುವ ಮತದಾನವು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮತಗಟ್ಟೆ ಸಿಬ್ಬಂದಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ನಡೆಯಿತು. ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್, ಮತದಾನ ಸಾಮಗ್ರಿಗಳನ್ನು ಹೊತ್ತುಕೊಂಡು ಮತದಾನ ಕಾರ್ಯಕ್ಕೆ ಚುನಾವಣಾ ಸಿಬ್ಬಂದಿ ತೆರಳಿದರು.
ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 268 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, ಈ ಪೈಕಿ ಪುರುಷರು 121526, ಮಹಿಳೆಯರು 120747, ಇತರೆ 10 ಸೇರಿದಂತೆ ಒಟ್ಟು 242283 ಮತದಾರರು ಇದ್ದಾರೆ.ಪ್ರತಿ ಮತಗಟ್ಟೆಗೆ ತಲಾ ಒಬ್ಬರು ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಇಬ್ಬರು ಮತಗಟ್ಟೆ ಸಹಾಯಕರು, ಡಿ ಗ್ರೂಪ್ ಸೇರಿದಂತೆ ಒಂದು ಮತಗಟ್ಟೆಗೆ 5 ಜನ ಸಿಬ್ಬಂದಿಯನ್ನು ನೇಮಿಸಲಾಗಿದೆ. ಒಟ್ಟು 1578 ಜನರನ್ನು ಮತಗಟ್ಟೆಯ ಸಿಬ್ಬಂದಿ ನೇಮಕ ಮಾಡಲಾಗಿದೆ.
ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 268 ಮತಗಟ್ಟೆ ಇದ್ದು, ಮಂಗಳವಾರ ನಡೆಯುವ ಮತದಾನಕ್ಕೆ ಎಲ್ಲ ಸಿದ್ಧತೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.ರೇಷ್ಮಾ ಹಾನಗಲ್ ಸಹಾಯಕ ಚುನಾವಣಾಧಿಕಾರಿ6ಕೆಎಸಟಿ2: ಕುಷ್ಟಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಮತಗಟ್ಟೆಗೆ ಸಿಬ್ಬಂದಿ ಮತದಾನದ ಸಾಮಗ್ರಿಗಳನ್ನು ತೆಗೆದುಕೊಂಡು ತೆರಳಿದರು.