ಪರಿಶಿಷ್ಟರ ವಿದ್ಯಾರ್ಥಿವೇತನಕ್ಕಾಗಿ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ: ಪರಮೇಶ್ವರ್

KannadaprabhaNewsNetwork |  
Published : Nov 30, 2026, 02:15 AM IST
್ಿ್ಿ್ಿ | Kannada Prabha

ಸಾರಾಂಶ

ತುಮಕೂರು ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿಗಳು ದೇವರಾಜ ಅರಸು ಅವರು ಪ್ರಾರಂಭಿಸಿದ್ದ ಹೇಮಾವತಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ 30 ವರ್ಷ ಬೇಕಾಯಿತು.

ಕನ್ನಡಪ್ರಭ ವಾರ್ತೆ, ತುಮಕೂರು

ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಾವತಿಸಲು ಪ್ರತ್ಯೇಕ ನಿರ್ದೇಶನಾಲಯದ ಸ್ಥಾಪನೆಗಾಗಿ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದರು.

ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಭಾನುವಾರದಿಂದ ಎರಡು ದಿನಗಳ ಕಾಲ ನಗರದ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ನಂತರ ಯುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಯಲ್ಲಿ ವಿದ್ಯಾರ್ಥಿ ವೇತನ ಪಾವತಿಸಲು ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ ಕೆಲವೊಮ್ಮೆ ವಿವಿಧ ಕಾರಣಗಳಿಂದ ವಿಳಂಬವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ವಿದ್ಯಾರ್ಥಿ ವೇತನ ನಿರ್ದೇಶನಾಲಯ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ 10 ಸಾವಿರ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ನಿಲಯಗಳ ವಿದ್ಯಾರ್ಥಿಗಳಿಗಾಗಿ 22 ಸಾವಿರ ಕೋಟಿ ರು.ಗಳನ್ನು ಮೀಸಲಿರಿಸಲಾಗಿದೆ. ಇದರಲ್ಲಿ 3 ಸಾವಿರ ಕೋಟಿ ರು.ಗಳನ್ನು ವಿದ್ಯಾರ್ಥಿ ವೇತನಕ್ಕಾಗಿಯೇ ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರಲ್ಲದೆ ಅಭಿವೃದ್ಧಿಯೇ ಬದಲಾವಣೆಯ ಸಾಧನ. ಇತಿಹಾಸವನ್ನು ಗಮನಿಸಿದಾಗ ದೇಶದಲ್ಲಿ ಆಹಾರ ಪಾದಾರ್ಥಗಳ ಉತ್ಪಾದನೆ ಕಡಿಮೆ ಇತ್ತು. ಅದಕ್ಕಾಗಿ ಹಸಿರು ಕ್ರಾಂತಿ ಆಯಿತು. ತಂತ್ರಜ್ಞಾನ ಬೆಳೆದಂತೆ ದೇಶದಲ್ಲಿ ಸಾಕಷ್ಟು ಸುಧಾರಣೆಗಳು ಆಗುತ್ತಿವೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಗತಿಗೆ ಅಭಿವೃದ್ಧಿಯೇ ಸಾಧನವಾಗಿದೆ ಎಂದು ವಿದ್ಯಾರ್ಥಿಯೊಬ್ಬರ ಪ್ರಶ್ನಗೆ ಉತ್ತರಿಸಿದರು.

ಸ್ಮಾರ್ಟ್ ಸಿಟಿಯಂತೆ ಹಳ್ಳಿಗಳ ಅಭಿವೃದ್ಧಿ ಕುರಿತು ಉತ್ತರಿಸಿದ ಉಪಮುಖ್ಯಮಂತ್ರಿ, ಭಾರತ ಹಳ್ಳಿಗಳ ದೇಶ. ಕಾಲ ಹೋದಂತೆ ನಗರೀಕರಣ ಆಗುತ್ತಿದೆ. ಅಂತೆಯೇ ಹಳ್ಳಿಗಳೂ ಅಭಿವೃದ್ಧಿ ಆಗುತ್ತಿವೆ. ಶೇ. 70 ರಷ್ಟು ಜನರು ನಗರ ಭಾಗದಲ್ಲಿ ವಾಸಿಸುತ್ತಿದ್ದಾರೆ. ಹಾಗಾಗಿ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ನಗರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ನಗರದಂತೆ ಹಳ್ಳಿಗಳೂ ಅಭಿವೃದ್ಧಿ ಆಗಲಿವೆ ಎಂದು ತಿಳಿಸಿದರು.ತುಮಕೂರು ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿಗಳು ದೇವರಾಜ ಅರಸು ಅವರು ಪ್ರಾರಂಭಿಸಿದ್ದ ಹೇಮಾವತಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ 30 ವರ್ಷ ಬೇಕಾಯಿತು. ನೇತ್ರಾವತಿ ನದಿಯಿಂದ ಬಯಲು ಸೀಮೆಯ ಪ್ರದೇಶಗಳಿಗೆ ಕುಡಿಯುವ ನೀರೊದಗಿಸುವ ಎತ್ತಿನ ಹೊಳೆ ಯೋಜನೆಯನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಇದ್ದಾಗ ಆರಂಭಿಸಲಾಯಿತು. ಈ ಯೋಜನೆ ಪ್ರಗತಿಯಲ್ಲಿದೆ. ಅಂದು 13 ಸಾವಿರ ಕೋಟಿ ರು.ಗಳಿದ್ದ ಯೋಜನೆ ಅಂದಾಜು ವೆಚ್ಚ ಪ್ರಸ್ತುತ ಇನ್ನು ಹೆಚ್ಚಾಗಿದೆ. ಯೋಜನೆಯ 128 ಕಿ.ಮೀ. ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ತಿಂಗಳಿಗೆ ತುಮಕೂರಿಗೆ ನೀರು ಬರುವ ಸಾಧ್ಯತೆಯಿದೆ. ಇದರ ಜೊತೆಗೆ ಬೆಂಗಳೂರಿಗೆ ಕುಡಿಯುವ ನೀರು ತರುವ ಉದ್ದೇಶಕ್ಕಾಗಿ ಆಲಮಟ್ಟಿ ಜಲಾಶಯದಿಂದ ನೀರು ಹರಿಸುವ ಯೋಜನೆ ಚಿಂತನೆ ಸರ್ಕಾರಕ್ಕಿದೆ ಎಂದು ತಿಳಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಿ.. ಚಂದ್ರಶೇಖರ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿ ನಿರ್ದೇಶಕ ಸುಭಾಶ್ ಚಂದ್ರ ಕೆ.ಎಲ್., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಪ್ರ) ಸಿ. ಗೋಪಾಲ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶುಭ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿ.ಜಿ. ಸಂತೋಷ, ತಹಸೀಲ್ದಾರ್ ರಾಜೇಶ್ವರಿ ಪಿ.ಎಸ್., ಸೇರಿದಂತೆ ಮತ್ತಿತರ ಅಧಿಕಾರಿಗಳು, ಸ್ಪರ್ಧಾಳುಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನರ ಸಮಸ್ಯೆಗೆ ಅಧಿಕಾರಿಗಳೇ ಮೂಲ ಕಾರಣಕರ್ತರು
ಉತ್ತಮ ಸಮಾಜ ನಿರ್ಮಾಣದ ಹೊಣೆ ನಮ್ಮೆಲ್ಲರ ಮೇಲಿದೆ