ರೈತರ ಅಹವಾಲು ಸ್ವೀಕರಿಸಲು ಕೌಂಟರ್ ಸ್ಥಾಪನೆ

KannadaprabhaNewsNetwork |  
Published : May 29, 2024, 12:51 AM IST
ರೈತರಿಂದ ಅರ್ಜಿ ಸ್ವೀಕರಿಸಲು ಕೌಂಟರ್ | Kannada Prabha

ಸಾರಾಂಶ

ತಾಲೂಕಿನ ಬೆಳ್ಳಾವಿ ಹೋಬಳಿ ವ್ಯಾಪ್ತಿಯ ಸೋರೆಕುಂಟೆ, ಪಿ.ಗೊಲ್ಲಹಳ್ಳಿ, ಪುರದಕುಂಟೆ, ಗೌಡನಹಳ್ಳಿ, ಲಿಂಗನಹಳ್ಳಿ, ಗಿರಿಯನಹಳ್ಳಿ ಸೇರಿದಂತೆ 6 ಗ್ರಾಮಗಳ ಸುಮಾರು 1,722 ಎಕರೆ ವಿಸ್ತೀರ್ಣದಲ್ಲಿ ಚೆನ್ನೆ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ತುಮಕೂರುತಾಲೂಕಿನ ಬೆಳ್ಳಾವಿ ಹೋಬಳಿ ವ್ಯಾಪ್ತಿಯ ಸೋರೆಕುಂಟೆ, ಪಿ.ಗೊಲ್ಲಹಳ್ಳಿ, ಪುರದಕುಂಟೆ, ಗೌಡನಹಳ್ಳಿ, ಲಿಂಗನಹಳ್ಳಿ, ಗಿರಿಯನಹಳ್ಳಿ ಸೇರಿದಂತೆ 6 ಗ್ರಾಮಗಳ ಸುಮಾರು 1,722 ಎಕರೆ ವಿಸ್ತೀರ್ಣದಲ್ಲಿ ಚೆನ್ನೆ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಯೋಜನೆ ಅಭಿವೃದ್ಧಿಗಾಗಿ ಭೂಮಿ ನೀಡಿರುವ ರೈತರ ಅಹವಾಲು ಸ್ವೀಕರಿಸಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಶೇಷ ಭೂಸ್ವಾಧೀನ ಅಧಿಕಾರಿ ಸೋಮಪ್ಪ ಕಡಕೋಳ ಅವರ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಕೌಂಟರ್ ಸ್ಥಾಪಿಸಲಾಯಿತು. ಯಲ್ಲದಡ್ಲು ಗ್ರಾಮದ 1, ಸೋರೆಕುಂಟೆ-5, ಪುರದಕುಂಟೆ-1, ಗೌಡನಹಳ್ಳಿ-4 ರೈತರು ಸೇರಿ ಒಟ್ಟು 11 ರೈತರು ಖುದ್ದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಲಿಖಿತವಾಗಿ ಅಹವಾಲು ಸಲ್ಲಿಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ಥಳಕ್ಕೆ ಭೇಟಿ ನೀಡಿ ರೈತರಿಂದ ಸಲ್ಲಿಕೆಯಾಗುತ್ತಿರುವ ಅಹವಾಲುಗಳನ್ನು ಪರಿಶೀಲಿಸಿ ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು. ತುಮಕೂರು ತಾಲೂಕು ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಚೆನ್ನೆ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ಪರಿವೀಕ್ಷಿಸಲು ಜಿಲ್ಲಾಧಿಕಾರಿಗಳು ಮೇ ೨೩ರಂದು ಸೋರೆಕುಂಟೆ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸದರಿ ಯೋಜನೆ ಅಭಿವೃದ್ಧಿಗಾಗಿ ಭೂಮಿ ನೀಡಿದ ಸ್ಥಳೀಯ ರೈತರು ಇದುವರೆಗೂ ಪರಿಹಾರ ದೊರೆತಿಲ್ಲ. ಶೀಘ್ರ ಭೂ ಪರಿಹಾರ ಒದಗಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಯಾವುದೇ ರೈತರು ಭೂ ಪರಿಹಾರದಿಂದ ವಂಚಿತರಾಗಬಾರದೆಂಬ ದೃಷ್ಟಿಯಿಂದ ಲಿಖಿತ ಅಹವಾಲನ್ನು ಖುದ್ದಾಗಿ ಭೇಟಿ ಮಾಡಿ ತಮಗೆ ಸಲ್ಲಿಸಬೇಕೆಂದು ರೈತರಿಗೆ ತಿಳಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಳದಿ ಮಾರ್ಗ: 9 ಮೆಟ್ರೋ ನಿಲ್ದಾಣ ಬಳಿ ಹೊಸ ಬಿಎಂಟಿಸಿ ನಿಲ್ದಾಣ
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌