ಮಂಗಳೂರಲ್ಲಿ ಹೈಕೋರ್ಟ್‌ ವಿಭಾಗೀಯ ಪೀಠಸ್ಥಾಪನೆ: ಧನಾತ್ಮಕ ನಿಲುವಿಗೆ ಕಾಮತ್‌ ಆಗ್ರಹ

KannadaprabhaNewsNetwork |  
Published : Dec 20, 2024, 12:48 AM IST
ಶಾಸಕ ವೇದವ್ಯಾಸ್‌ ಕಾಮತ್‌  | Kannada Prabha

ಸಾರಾಂಶ

ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸದೇ ಕೂಡಲೇ ಧನಾತ್ಮಕ ನಿಲುವು ತೆಗೆದುಕೊಳ್ಳುವ ಮೂಲಕ ಜನರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪಿಸುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ನಿಯಮ 73ರಡಿ ಗಮನ ಸೆಳೆಯುವ ಸೂಚನೆ ಮೂಲಕ ಸರ್ಕಾರದ ನಿಲುವು ಏನೆಂಬುದನ್ನು ಪ್ರಶ್ನಿಸಿದರು.

ಈ ಬಗ್ಗೆ ಅಧಿಕೃತವಾಗಿ ಉತ್ತರಿಸಿದ ರಾಜ್ಯ ಸರ್ಕಾರ, ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆ ಮಾಡುವ ಸಂಬಂಧ ವಕೀಲರ ಸಂಘದಿಂದ ಹಾಗೂ ಜನಪ್ರತಿನಿಧಿಗಳಿಂದ ಮನವಿಯು ಸ್ವೀಕೃತವಾಗಿದ್ದರೂ ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಪ್ರಸ್ತುತ ಈಗ ಇರುವ ವ್ಯವಸ್ಥೆಯಲ್ಲಿಯೇ ಈ ಭಾಗದ ವ್ಯಾಜ್ಯಗಳನ್ನು ಸಮರ್ಥವಾಗಿ ಈ ಪೀಠದಲ್ಲಿಯೇ ನಿರ್ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಮೂಲಕ ಉತ್ತರಿಸಿದೆ.

ಆದಾಗ್ಯೂ ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸದೇ ಕೂಡಲೇ ಧನಾತ್ಮಕ ನಿಲುವು ತೆಗೆದುಕೊಳ್ಳುವ ಮೂಲಕ ಜನರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌