ಉದ್ಯೋಗ ಸೃಷ್ಟಿಸಲು ಕೈಗಾರಿಕಾ ಪ್ರದೇಶ ಸ್ಥಾಪನೆ: ಎಸ್.ಎನ್.ನಾರಾಯಣಸ್ವಾಮಿ

KannadaprabhaNewsNetwork |  
Published : May 13, 2025, 11:51 PM IST
13ಕೆಬಿಪಿಟಿ.1.ಬಂಗಾರಪೇಟೆ ತಾಲೂಕಿನ ಆಲದ ಮರ ಬಳಿ ನಡೆದ ಗ್ರಾಮ ಸಭೆಯಲ್ಲಿ ಶಾಸಕ ನಾರಾಯಣಸ್ವಾಮಿ ಮಾತನಾಡಿದರು. | Kannada Prabha

ಸಾರಾಂಶ

ಪ್ರತಿನಿತ್ಯ ಉದ್ಯೋಗಕ್ಕಾಗಿ ಯುವಕರು ಮತ್ತು ಯುವತಿಯರು ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದು, ಇದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಏಳು ನೂರು ಎಕರೆ ಪ್ರದೇಶದಲ್ಲಿ ಕೈಗಾರಿಕೆ ಅಭಿವೃದ್ಧಿ ಪ್ರದೇಶ ಮತ್ತು ನಗರಾಭಿವೃದ್ಧಿ ಪ್ರದೇಶವನ್ನು ನಿರ್ಮಾಣ ಮಾಡಲು ಜಮೀನನ್ನು ಮಂಜೂರು ಮಾಡಿಸಿದ್ದು, ಅತಿ ಶೀಘ್ರದಲ್ಲೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು.

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಲು ಡಿಕೆಹಳ್ಳಿ ಪಂಚಾಯತಿ ಜನರು ರಾಜಕೀಯವಾಗಿ ನನಗೆ ಮರು ಜನ್ಮ ನೀಡಿದ್ದಾರೆ. ಇಲ್ಲಿಯ ಜನತೆಯ ಋಣವನ್ನು ಎಂದಿಗೂ ಮರೆಯುವುದಿಲ್ಲ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಆಲದಮರದ ಬಳಿ ಡಿಕೆ ಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಆಯೋಜಿಸಿದ್ದ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮಗೆ ರಾಜಕೀಯವಾಗಿ ಮರು ಜನ್ಮ ನೀಡಿದ ನಿಮ್ಮ ಋಣವನ್ನು ತೀರಿಸಲು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವುದಾಗಿ ಹೇಳಿದರು.

ಕೈಗಾರಿಕೆ ಅಭಿವೃದ್ಧಿ ಪ್ರದೇಶ:

ಪ್ರತಿನಿತ್ಯ ಉದ್ಯೋಗಕ್ಕಾಗಿ ಯುವಕರು ಮತ್ತು ಯುವತಿಯರು ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದು, ಇದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಏಳು ನೂರು ಎಕರೆ ಪ್ರದೇಶದಲ್ಲಿ ಕೈಗಾರಿಕೆ ಅಭಿವೃದ್ಧಿ ಪ್ರದೇಶ ಮತ್ತು ನಗರಾಭಿವೃದ್ಧಿ ಪ್ರದೇಶವನ್ನು ನಿರ್ಮಾಣ ಮಾಡಲು ಜಮೀನನ್ನು ಮಂಜೂರು ಮಾಡಿಸಿದ್ದು, ಅತಿ ಶೀಘ್ರದಲ್ಲೇ ಕಾಮಗಾರಿಯನ್ನು ಪ್ರಾರಂಭಿಸುವುದಾಗಿ ತಿಳಿಸಿದರು.

ಭಾರತ್ ನಗರದಲ್ಲಿ ಕೋಟಿ ರುಪಾಯಿಗಳ ಅನುದಾನದಲ್ಲಿ ಸಮುದಾಯ ಭವನವನ್ನು ನಿರ್ಮಿಸಿ ಮತ್ತು ಮೂರು ಕೋಟಿ ರುಪಾಯಿಗಳ ಅನುದಾನದಲ್ಲಿ ದಾಸರಹೊಸಹಳ್ಳಿ ಕೆರೆ ಅಭಿವೃದ್ಧಿ ಮತ್ತು ಸಾರ್ವಜನಿಕರ ಶೌಚಾಲಯ ನಿರ್ಮಾಣ ಮಾಡುವುದಾಗಿ ಹಾಗೂ ಕೋಲಾರದ ದಿಂಬ ಗೇಟ್ ನಿಂದ ಕೃಷ್ಣಾವರಂ ರವರಿಗೆ ಡಬಲ್ ರಸ್ತೆಯನ್ನು ಮಾಡಿ ಬೀದಿ ದೀಪಗಳನ್ನು ಅಳವಡಿವುಸುವುದಾಗಿ ಭರವಸೆಯನ್ನು ನೀಡಿದರು.

ಗ್ರಾಮೀಣರಿಗೆ ಸೌಲಭ್ಯ:

ತಾಲೂಕು ಪಂಚಾಯತಿ ಇಒ ಎಚ್ ರವಿಕುಮಾರ್ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿನ ವಾರ್ಡ್ ಸಭೆಗಳಲ್ಲಿ ನರೇಗಾ ಯೋಜನೆ ಮತ್ತು ಐದಿನೈದನೆಯ ಹಣಕಾಸು ಯೋಜನೆಯಡಿ ಮತ್ತು ಸ್ಥಳೀಯ ಸಂಪನ್ಮೂಲಗಳನ್ನು ಕ್ರೋಡೀಕರಿಸಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮಸ್ಥರ ಸಮ್ಮುಖದಲ್ಲೆ ನಿರ್ಣಯ ತೆಗೆದುಕೊಳ್ಳುವ ಸಭೆಯೇ ಗ್ರಾಮ ಸಭೆಯ ಉದ್ದೇಶವಾಗಿದೆ ಎಂದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್,ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೋಪಾಲ ರೆಡ್ಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭಾಸ್ಕರ್, ಗ್ರಾ.ಪಂ ಸದಸ್ಯರಾದ ಪವಿತ್ರ ಬಾಬು,ಸುಧಾ ಗೌಡ , ಯಲ್ಲಮ್ಮ,ವಿಕ್ಟೋರಿಯಾ ಪುಣ್ಯ ಮೂರ್ತಿ, ಚಂದ್ರಮ್ಮ, ರಮೇಶ್,ಜಯಲಕ್ಷ್ಮಿ,ಭಾಗ್ಯಮ್ಮ, ಪ್ರೇಮನಾಥ, ಶೈಲವತಿ,ಎಂ ಕೃಷ್ಣ, ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ