ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ರಾಗಿ ಖರೀದಿ ಕೇಂದ್ರಗಳ ಸ್ಥಾಪನೆ

KannadaprabhaNewsNetwork |  
Published : Mar 06, 2025, 12:31 AM IST
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ರಾಗಿ ಖರೀದಿ ಕೇಂದ್ರಗಳ ಸ್ಥಾಪನೆ | Kannada Prabha

ಸಾರಾಂಶ

ನೋಂದಾಯಿತ ರೈತರಿಂದ ಪ್ರತಿ ಕ್ವಿಂಟಾಲ್ ಭತ್ತಕ್ಕೆ 2300 ರು.ನಂತೆ ಹಾಗೂ ಪ್ರತಿ ಕ್ವಿಂಟಾಲ್ ರಾಗಿಗೆ 4290 ರು. ದರದಂತೆ ಆಹಾರ ಧಾನ್ಯ ಖರೀದಿಸಲಾಗುತ್ತಿದೆ. ಆದ್ದರಿಂದ ನೋಂದಾಯಿತ ರೈತರು ತಮ್ಮ ತಮ್ಮ ತಾಲೂಕಿನಲ್ಲಿ ತೆರೆಯಲಾಗಿರುವ ಬೆಂಬಲ ಬೆಲೆ ಯೋಜನೆಯ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಈ ಜಿಲ್ಲೆಯ ಖರೀದಿ ಏಜೆನ್ಸಿಯವರು ನಿಗಧಿಪಡಿಸಿದ ದಿನಾಂಕದಂದು ಎಪ್.ಎ.ಕ್ಯೂ ಗುಣಮಟ್ಟದ ಭತ್ತ ಮತ್ತು ರಾಗಿಯನ್ನು ಖರೀದಿ ಕೇಂದ್ರಕ್ಕೆ ನೀಡುವಂತೆ ತಿಳಿಸಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ 2024-25 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಿಕೊಂಡಿರುವ ರೈತರಿಂದ ಜಿಲ್ಲೆಯಲ್ಲಿ ತೆರೆದಿರುವ ಕೇಂದ್ರಗಳಲ್ಲಿ ಭತ್ತ ಮತ್ತು ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ.

ನೋಂದಾಯಿತ ರೈತರಿಂದ ಪ್ರತಿ ಕ್ವಿಂಟಾಲ್ ಭತ್ತಕ್ಕೆ 2300 ರು.ನಂತೆ ಹಾಗೂ ಪ್ರತಿ ಕ್ವಿಂಟಾಲ್ ರಾಗಿಗೆ 4290 ರು. ದರದಂತೆ ಆಹಾರ ಧಾನ್ಯ ಖರೀದಿಸಲಾಗುತ್ತಿದೆ. ಆದ್ದರಿಂದ ನೋಂದಾಯಿತ ರೈತರು ತಮ್ಮ ತಮ್ಮ ತಾಲೂಕಿನಲ್ಲಿ ತೆರೆಯಲಾಗಿರುವ ಬೆಂಬಲ ಬೆಲೆ ಯೋಜನೆಯ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಈ ಜಿಲ್ಲೆಯ ಖರೀದಿ ಏಜೆನ್ಸಿಯವರು ನಿಗಧಿಪಡಿಸಿದ ದಿನಾಂಕದಂದು ಎಪ್. ಎ. ಕ್ಯೂ ಗುಣಮಟ್ಟದ ಭತ್ತ ಮತ್ತು ರಾಗಿಯನ್ನು ಖರೀದಿ ಕೇಂದ್ರಕ್ಕೆ ನೀಡುವಂತೆ ತಿಳಿಸಿದೆ.

ನೋಂದಣಿ ಹಾಗೂ ಖರೀದಿ ಕೇಂದ್ರಗಳು: ಮೈಸೂರು ತಾಲೂಕಿನ ಎ.ಪಿ.ಎಂ.ಸಿ ಆವರಣ ಬಂಡಿಪಾಳ್ಯ, ನಂಜನಗೂಡು ತಾಲೂಕಿನ ಎ.ಪಿ.ಎಂ.ಸಿ ಆವರಣ, ಬಿಳಿಗೆರೆ ಖರೀದಿ ಕೇಂದ್ರ, ಟಿ.ನರಸೀಪುರ ತಾಲೂಕಿನ ಎ.ಪಿ.ಎಂ.ಸಿ ಆವರಣ, ಟಿ ನರಸೀಪುರ, ಎ.ಪಿ.ಎಂ.ಸಿ ಆವರಣ, ಬನ್ನೂರು, ಹುಣಸೂರು ತಾಲೂಕಿನ ಎ.ಪಿ.ಎಂ.ಸಿ ಆವರಣ, ಹುಣಸೂರು, ಎ.ಪಿ.ಎಂ.ಸಿ ಆವರಣ, ರತ್ನಪುರಿ, ಕೆ.ಆರ್.ನಗರ ತಾಲೂಕಿನ ಎ.ಪಿ.ಎಂ.ಸಿ ಆವರಣ, ಕೆ.ಆರ್.ನಗರ, ಸಾಲಿಗ್ರಾಮ ತಾಲೂಕಿನ ಎ.ಪಿ.ಎಂ.ಸಿ ಆವರಣ ಸಾಲಿಗ್ರಾಮ, ಪ್ರವಾಸಿ ಮಂದಿರ (ಶ್ರೀರಾಮ ದೇವಸ್ಥಾನದ ಹತ್ತಿರ) ಚುಂಚನಕಟ್ಟೆ, ಸರಗೂರು ತಾಲೂಕಿನ ಎ.ಪಿ.ಎಂ.ಸಿ ಆವರಣ ಸರಗೂರು, ಪಿರಿಯಾಪಟ್ಟಣ ತಾಲೂಕಿನ ಎ.ಪಿ.ಎಂ.ಸಿ ಆವರಣ ಪಿರಿಯಾಪಟ್ಟಣ, ಎ.ಪಿ.ಎಂ.ಸಿ ಆವರಣ, ಬೆಟ್ಟದಪುರ, ರೈತ ಸಂಪರ್ಕ ಕೇಂದ್ರ, ಹಾರನಹಳ್ಳಿ, ರೈತ ಸಂಪರ್ಕ ಕೇಂದ್ರ, ರಾವಂದೂರು ಇಲ್ಲಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ, ಅಧ್ಯಕ್ಷರಾದ ಜಿ ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದ್ದಾರೆ.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ