ಕಲಘಟಗಿ:
ಕಲಘಟಗಿಯ ಜನತಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನ ಸಭೆಗೆ ಚಾಲನೆ ನೀಡಿದ ಅವರು, ಜನರ ಮನೆ ಬಾಗಿಲಿಗೆ ಸರ್ಕಾರ ತೆರಳಲಿದೆ. ತಾಲೂಕು ಮಟ್ಟ ಹಾಗೂ ಜಿಲ್ಲಾಮಟ್ಟದಲ್ಲಿ ಜನರ ಸಮಸ್ಯೆ ಆಲಿಸಿ, ಶೀಘ್ರದಲ್ಲೇ ಪರಿಹರಿಸಲು ಕ್ರಮವಹಿಸಲಾಗುವುದು. ನಿಗದಿತ ಸಮಯದಲ್ಲಿ ಜನರ ಅಹವಾಲುಗಳನ್ನು ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಸಹ ಪ್ರಜಾಸೇವಾ ಆಂದೋಲನ ಸಭೆ ನಡೆಸಲಾಗುತ್ತದೆ ಎಂದರು.
ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಪ್ರಜಾಸೇವೆ ಕೇವಲ ಕರ್ತವ್ಯವಲ್ಲ, ಅದು ಸಮಾಜದ ಅಭಿವೃದ್ಧಿಗೆ ನೀಡಬಹುದಾದ ಅತ್ಯಮೂಲ್ಯ ಕೊಡುಗೆಯಾಗಿದೆ. ಮನೆ ಬಾಗಿಲಿಗೆ ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ವಾಕ್ಯದಡಿ ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ, ಗೌರವಯುತ ಜೀವನ, ಶಿಕ್ಷಣ, ಆರೋಗ್ಯ, ಉದ್ಯೋಗ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮಾಡುವುದೇ ಪ್ರಜಾಸೇವೆಯ ಮೂಲ ಉದ್ದೇಶವಾಗಿದೆ ಎಂದರು. ನಂತರ ಶಿಕ್ಷಕರ ದಿನಾಚರಣೆ ಅಂಗವಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು.ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ನಮ್ಮ ಸರ್ಕಾರ ಜನರ ಪರವಾಗಿದ್ದು ಜನರ ಕಣ್ಣೀರು ಒರೆಸುತ್ತಿದೆ. ಜನರಿಗೆ ಪ್ರಾಮಾಣಿಕ ಸೇವೆ ಸಲ್ಲಿಸಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಮಾತನಾಡಿ, ಜನರ ಬಳಿಗೆ ಸರ್ಕಾರ ಹೋಗಿ ಸೇವೆ ನೀಡುತ್ತಿದ್ದು ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದರು.