ಹುಬ್ಬಳ್ಳಿಗೆ ಪ್ರಾದೇಶಿಕ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಸ್ಥಾಪನೆ

KannadaprabhaNewsNetwork |  
Published : Dec 15, 2023, 01:30 AM ISTUpdated : Dec 15, 2023, 01:31 AM IST
ಮಹೇಶ ಟೆಂಗಿನಕಾಯಿ | Kannada Prabha

ಸಾರಾಂಶ

ಹುಬ್ಬಳ್ಳಿಯಲ್ಲಿ ಪ್ರಾದೇಶಿಕ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಸ್ಥಾಪಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್‌.ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಧಾನಸಭೆ

ಹುಬ್ಬಳ್ಳಿಯಲ್ಲಿ ಪ್ರಾದೇಶಿಕ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಸ್ಥಾಪಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್‌.ಪಾಟೀಲ ಹೇಳಿದರು.

ಸದನದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಕಳೆದ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿಗ ಪ್ರಾದೇಶಿಕ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಮಂಜೂರಾಗಿತ್ತು. ಅದನ್ನು ಬೆಳಗಾವಿಗೆ ವರ್ಗಾಯಿಸಲಾಗಿದೆ. ಇದೀಗ ಹುಬ್ಬಳ್ಳಿಗೆ ಕ್ಯಾನ್ಸರ್‌ ಪ್ರಾದೇಶಿಕ ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ಶಾಸಕರಿಂದ ಒತ್ತಾಯ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೂ ಒಂದು ಚಿಕಿತ್ಸಾ ಕೇಂದ್ರ ಸ್ಥಾಪಿಸಲು ಹೊಸದಾಗಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಜತೆಗೆ ಹುಬ್ಬಳ್ಳಿ ಕಿಮ್ಸ್‌ನಲ್ಲಿ ಕ್ಯಾನ್ಸರ್‌ ಚಿಕಿತ್ಸೆಗಾಗಿ ಪ್ರತ್ಯೇಕ ವಿಭಾಗವಿದೆ. ಈ ವಿಭಾಗವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಸರ್ಕಾರ ಚಿಂತಿಸಿದೆ. ಕಿಮ್ಸ್‌ನಲ್ಲಿ ಕ್ಯಾನ್ಸರ್‌ ರೋಗಿಗಳಿಗೆ ಮೆಡಿಕಲ್‌, ಶಸ್ತ್ರಚಿಕಿತ್ಸೆ, ವಿಕರಣ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಈ ಎಲ್ಲ ವಿಭಾಗಗಳಲ್ಲಿ ತಜ್ಞ ವೈದ್ಯರು ನಿರ್ವಹಿಸುತ್ತಿದ್ದಾರೆ. ಕ್ಯಾನ್ಸರ್‌ ವಿಭಾಗಕ್ಕೆ ಅಗತ್ಯವಿರುವ ಯಂತ್ರೋಪಕರಣ ಮತ್ತು ಮಾನವ ಸಂಪನ್ಮೂಲ ಒದಗಿಸಿ ಮತ್ತಷ್ಟು ಬಲವರ್ಧನೆಗೊಳಿಸಲಾಗುವುದು ಎಂದರು.

ಇದಕ್ಕೂ ಮುನ್ನ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ ಉತ್ತರ ಕರ್ನಾಟಕದ ಪ್ರಮುಖ ನಗರವಾಗಿದೆ. ಸುತ್ತಮುತ್ತಲಿನ ಜಿಲ್ಲೆಗಳ ರೋಗಿಗಳು ಚಿಕಿತ್ಸೆ ಅರಸಿ ಇಲ್ಲಿಗೆ ಬರುತ್ತಾರೆ. ಇಲ್ಲಿ ಪ್ರಾದೇಶಿಕ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ತೆರೆದು ರಕ್ತ, ಮೂಳೆ, ಮಕ್ಕಳ ಕ್ಯಾನ್ಸರ್‌ ಚಿಕಿತ್ಸೆಗೆ ಅನುಕೂಲ ಮಾಡಿಕೊಡಬೇಕು ಎಂದು ಕೋರಿದರು. ಇದಕ್ಕೆ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಅರವಿಂದ ಬೆಲ್ಲದ, ಎನ್‌.ಎಚ್‌.ಕೋನರಡ್ಡಿ ಸೇರಿದಂತೆ ಹಲವು ಶಾಸಕರು ಧ್ವನಿಗೂಡಿಸಿದರು.

ಸಭಾಧ್ಯಕ್ಷ ಯು.ಟಿ. ಖಾದರ್ ಕೂಡ ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸೆ ಕೇಂದ್ರ ತೆರೆಯುವುದು ಅಗತ್ಯವಿದೆ. ಕೂಡಲೇ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಸೂಚಿಸಿದರು. ಸಚಿವ ಡಾ.ಶರಣಪ್ರಕಾಶ ಆರ್ ಪಾಟೀಲ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಆರ್ಥಿಕ ಇಲಾಖೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್
ಬೆಂಬಲ ಬೆಲೆಯಡಿ ರಾಗಿ ಖರೀದಿಗೆ ಚುರುಕು