ಜಿಲ್ಲೆಯಲ್ಲಿ 6 ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್

KannadaprabhaNewsNetwork |  
Published : Nov 20, 2024, 12:30 AM IST
19ಸಿಎಚ್‌ಎನ್‌55ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ 6 ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲಿಸಿದ ಬಳಿಕ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಇಂಧನ ಇಲಾಖೆಗೆ ಸಂಬಂಧಿಸಿ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯಲ್ಲಿ 6 ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲಿಸಿದ ಬಳಿಕ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ 400 ಕೆ.ವಿ.ವಿದ್ಯುತ್ ಉಪಕೇಂದ್ರ ಸೇರಿದಂತೆ ಒಟ್ಟು 6 ಹೊಸ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಹಾಗೂ ಚೂಡಾ ಅಧ್ಯಕ್ಷರು ಸಭೆಯಲ್ಲಿ ಮನವಿ ಮಾಡಿದ ಮೇರೆಗೆ ಜಿಲ್ಲಾ ಕೇಂದ್ರದ ಬಿ. ರಾಚಯ್ಯ ಜೋಡಿ ರಸ್ತೆಗೆ ಎಲ್‌ಇಡಿ ಬಲ್ಪ್‌ಗಳನ್ನು ಕೆಪಿಟಿಸಿಎಲ್‌ನ ಸಿಎಸ್‌ಆರ್ ಫಂಡ್‌ನಿಂದ ಅಳವಡಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಅಕ್ರಮ ಸಕ್ರಮ ಯೋಜನೆಯಡಿ ಇರುವ ಅರ್ಜಿಗಳ ವಿಲೇವಾರಿಗೆ ಕ್ರಮವಹಿಸಲಾಗಿದೆ. ಮೊದಲ ಆದ್ಯತೆ ಮೇರೆಗೆ 1,500 ಅರ್ಜಿಗಳನ್ನು ತೆಗೆದುಕೊಳ್ಳಲಿದ್ದೇವೆ. ಇನ್ನೂ ಎರಡು ವರ್ಷದೊಳಗೆ ಬಾಕಿ ಇರುವ ಎಲ್ಲ ಅರ್ಜಿಗಳನ್ನು ಪೂರ್ಣಗೊಳಿಸಲಿದ್ದೇವೆ ಎಂದು ಹೇಳಿದರು.

ಕುಸುಂ ಬಿ ಯೋಜನೆಯಡಿ ಸೋಲಾರ್ ಪಂಪ್‌ಸೆಟ್‌ಗಳಿಗೆ ಶೇ.80ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 350 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸೋಲಾರ್ ಮೂಲಕ ವಿದ್ಯುತ್ ಉತ್ಪಾದನೆಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ಕುಸುಂ ಬಿ, ಕುಸುಂ ಸಿ ಯೋಜನೆಯಡಿ ಸೋಲಾರ್ ಮೂಲಕ 3000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ಪಂಪ್‌ಸೆಟ್‌ಗಳಿಗೆ ಪೂರೈಕೆ ಮಾಡಲಾಗುತ್ತದೆ. ನಿರ್ವಹಣೆ ಕೆಲಸಗಳಿಗಾಗಿ ಸಾಕಷ್ಟು ಹಣ ಇಡಲಾಗಿದೆ ಎಂದರು.

ರಾಜ್ಯದಲ್ಲಿ 2500 ಲೈನ್‌ಮ್ಯಾನ್‌ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಶನವನ್ನು ಒಂದೇ ದಿನದಲ್ಲಿ ಮಾಡಲಾಗುತ್ತದೆ. ಈ ಹಿಂದೆ ಬೇರೆ ಬೇರೆ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹುದ್ದೆಗಳು ಖಾಲಿ ಉಳಿಯದಂತೆ ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುವ ಮಹತ್ವದ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಮಾತನಾಡಿ, ಕಳೆದ ವರ್ಷ ಸಿವಿಲ್ ಎಲೆಕ್ಟ್ರಿಕಲ್ ಎಂಜಿನಿಯರ್‌ಗಳನ್ನು ಪಾರದರ್ಶಕ ಪ್ರಕ್ರಿಯೆ ಅನುಸರಿಸಿ ನೇಮಕ ಮಾಡಿಕೊಂಡಿದ್ದೇವೆ. ಈ ಬಾರಿಯು ಹುದ್ದೆಗಳ ನೇಮಕಕ್ಕೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, 42 ಕೋಟಿ ರು. ವೆಚ್ಚದಲ್ಲಿ ಚಾಮರಾಜನಗರ ಹನೂರು ತಾಲೂಕಿನ ಹಾಡಿ, ಪೋಡುಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವ ಯೋಜನೆಗೆ ಇದೇ ನ.26ರಂದು ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.

ಇದಕ್ಕೂ ಮೊದಲು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ಡಾ.ಡಿ.ತಿಮ್ಮಯ್ಯ, ಕೆ.ವಿವೇಕಾನಂದ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಸೆಸ್ಕ್‌ನ ತಾಂತ್ರಿಕ ನಿರ್ದೇಶಕ ಮುನಿಗೋಪಾಲ್‌ರಾಜ್, ಮುಖ್ಯ ಎಂಜಿನಿಯರ್ ದಿವಾಕರ್, ಅಧೀಕ್ಷಕ ಎಂಜಿನಿಯರ್ ತಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ