ಮೀನಾ ಹತ್ಯೆ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ: ಡಾ.ಪರಮೇಶ್ವರ್‌

KannadaprabhaNewsNetwork |  
Published : May 17, 2024, 12:32 AM IST
ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹತ್ಯೆಯಾದ ಮೀನಾ ಕುಟುಂಬಕ್ಕೆ ಸಾಂತ್ವನ ಹೇಳಿದರು. | Kannada Prabha

ಸಾರಾಂಶ

ಸೋಮವಾರಪೇಟೆಯ ಕುಂಬಾರಗಡಿಗೆ ಗ್ರಾಮದಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆ ಆಗಿದ್ದ ಮೀನಾ ಮನೆಗೆ ಗುರುವಾರ ಭೇಟಿ ನೀಡಿದ ಗೃಹ ಸಚಿವ ಡಾ.ಪರಮೇಶ್ವರ್‌ ಆಕೆಯ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಪ್ರಕರಣದ ವಿಚಾರಣೆಗೆ ವಿಶೇಷವಾಗಿ ಸ್ಪೆಷಲ್ ಪ್ರಾಸಿಕ್ಯೂಟರ್ ನೇಮಕ ಮಾಡಿ, ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡುತ್ತೇವೆ ಎಂದು ಪ್ರಕಟಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗಿನ ಬಾಲಕಿ ಹತ್ಯೆ ಸಹಿಸಲು ಸಾಧ್ಯವಿಲ್ಲ. ಕಾನೂನು‌ ಪ್ರಕಾರ ಕಟ್ಟುನಿಟ್ಟಿನ ಕ್ರಮ ಆಗುತ್ತದೆ, ಮೀನಾ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ. ವಿಶೇಷವಾಗಿ ಸ್ಪೆಷಲ್ ಪ್ರಾಸಿಕ್ಯೂಟರ್ ನೇಮಕ ಮಾಡಿ, ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಕುಂಬಾರಗಡಿಗೆ ಗ್ರಾಮದಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆ ಆಗಿದ್ದ ಮೀನಾ ಮನೆಗೆ ಗುರುವಾರ ಭೇಟಿ ನೀಡಿದ ಡಾ.ಪರಮೇಶ್ವರ್‌ ಆಕೆಯ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ಪರಿಹಾರ ನೀಡಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೀತಿ ಸಂಹಿತೆ ಸಡಿಲವಾದ ನಂತರ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದ ಅಲ್ಲಲ್ಲಿ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಜನ ಕಾನೂನು ಕೈಗೆತ್ತಿಕೊಳ್ಳುತ್ತಿದ್ದಾರೆ. ಆದರೆ ಈ ಕೊಲೆಗಳು ಪೂರ್ವಯೋಜಿತ ಕೃತ್ಯಗಳಲ್ಲ. ಆ ಕ್ಷಣಕ್ಕೆ ಮಾಡಿದ ಕೃತ್ಯ ಎಂದು ಕಾಣುತ್ತಿದೆ. ಈ ಬಗ್ಗೆ ತನಿಖೆ ಆದ ಬಳಿಕ ಸತ್ಯಾಂಶ ಬಯಲಿಗೆ ಬರಲಿದೆ. ಪೊಲೀಸ್ ಇಲಾಖೆ ಸಮರ್ಥವಾಗಿದೆ ತನಿಖೆ ನಡೆಸುತ್ತಿದೆ ಎಂದು ಹೇಳಿದರು.

ಆರೋಪಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಈ ಸಂದರ್ಭ ಪೋಷಕರಿಗೆ ಸಾಂತ್ವನದೊಂದಿಗೆ ಭರವಸೆ ನೀಡಿದರು. ಬುಧವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಮೀನಾಳ ತಾಯಿಯ ಬಳಿ ಇದೇ ಸಂದರ್ಭ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಶಾಸಕ ಮಂತರ್ ಗೌಡ, ಪಕ್ಷದ ಮುಖಂಡರು ಹಾಜರಿದ್ದರು.

ಶೆಟ್ಟರ್ ಸರ್ಟಿಫಿಕೇಟ್ ಬೇಕಿಲ್ಲ: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹಾಳಾಗಿದೆ.

ಕೊಲೆಯಂತಹ ಪ್ರಕರಣಗಳನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸಿಲ್ಲಿಯಾಗಿ ತೆಗೆದುಕೊಳ್ಳುತ್ತಾರೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು, ಜಗದೀಶ್ ಶೆಟ್ಟರ್ ಕಾಲದಲ್ಲಿ ಎಷ್ಟು ರೇಪ್ ಆಗಿದ್ದವು ಎಂದು ಪ್ರಶ್ನಿಸಿದರು.

ಅವರ ಕಾಲದಲ್ಲಿ ಎಷ್ಟು ಹತ್ಯೆಯಾಗಿದ್ದವು, ಸುಲಿಗೆ ನಡೆದಿದ್ದವು, ಅವರು ಮುಖ್ಯಮಂತ್ರಿ ಆಗಿದ್ದಾಗ ಎಷ್ಟು ಪ್ರಕರಣ ದಾಖಲಾಗಿದೆ. ಅವರ ಕಾಲದ ಅಂಕಿಅಂಶ ತೆಗೆದು ನೋಡಿದರೆ ಗೊತ್ತಾಗುತ್ತೆ. ಅವುಗಳನ್ನು ಬಿಚ್ಚಿಡಲಾ ಎಂದು ಪ್ರಶ್ನಿಸಿದರು.

ಶೆಟ್ಟರ್ ಸರ್ಟಿಫಿಕೇಟ್ ನಮಗೆ ಬೇಕಾಗಿಲ್ಲ. ಜನರು ನಮಗೆ ಸರ್ಟಿಫಿಕೇಟ್ ಕೊಡುತ್ತಾರೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ