ಒತ್ತುವರಿಯಾಗಿದ್ದ 140 ಕೋಟಿ ಮೌಲ್ಯದ 7 ಎಕರೆ ಜಾಗ ಎಂಡಿಎ ವಶಕ್ಕೆ

KannadaprabhaNewsNetwork |  
Published : Feb 08, 2026, 01:15 AM IST
6 | Kannada Prabha

ಸಾರಾಂಶ

ಎಂಡಿಎ ಅಧಿಕಾರಿಗಳು, ಸ್ಥಳದಲ್ಲಿದ್ದ ಶೆಡ್ ತೆರವುಗೊಳಿಸುವ ಮೂಲಕ ಜಾಗದ ಸುತ್ತ ತಂತಿ ಬೇಲಿ ಹಾಕುವ ಕಾರ್ಯ ಆರಂಭಸಿದ್ದರು

ಕನ್ನಡಪ್ರಭ ವಾರ್ತೆ ಮೈಸೂರು

ವಿಜಯನಗರ 3ನೇ ಹಂತದಲ್ಲಿ ಒತ್ತುವರಿಯಾಗಿದ್ದ ಅಂದಾಜು 140 ಕೋಟಿ ರು. ಮೌಲ್ಯದ 7 ಎಕರೆ ಜಾಗವನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರವು (ಎಂಡಿಎ) ಶನಿವಾರ ತೆರವು ಕಾರ್ಯಾಚರಣೆ ಮೂಲಕ ತನ್ನ ವಶಕ್ಕೆ ಪಡೆದಿದೆ.ಪೊಲೀಸ್‌ ಭದ್ರತೆಯಲ್ಲಿ ಶನಿವಾರ ಮುಂಜಾನೆ ಕಾರ್ಯಾಚರಣೆ ನಡೆಸಿದ ಎಂಡಿಎ ಅಧಿಕಾರಿಗಳು, ಸ್ಥಳದಲ್ಲಿದ್ದ ಶೆಡ್ ತೆರವುಗೊಳಿಸುವ ಮೂಲಕ ಜಾಗದ ಸುತ್ತ ತಂತಿ ಬೇಲಿ ಹಾಕುವ ಕಾರ್ಯ ಆರಂಭಸಿದ್ದರು. ಈ ವೇಳೆ ಕೆಲವರು ಜೆಸಿಬಿ ಯಂತ್ರಗಳ ಮುಂದೆ ಮಲಗಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದರು.ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.ವಿಜಯನಗರ 3ನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ 1984ರಲ್ಲಿ ಈ ಜಾಗದ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿ, ಮಾಲೀಕರಿಗೆ ನಿಯಮಾನುಸಾರ ಪರಿಹಾರ ಮಂಜೂರು ಮಾಡಿತ್ತು. ನಂತರದಲ್ಲಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ಶೆಡ್‌ ನಿರ್ಮಿಸಿಕೊಂಡಿದ್ದರು. ಆರ್‌ ಟಿಸಿ ಪ್ರಕಾರ ಜಮೀನಿನ ಮಾಲೀಕತ್ವ ಪ್ರಾಧಿಕಾರದ ಹೆಸರಿನಲ್ಲಿದ್ದು, ಜಿಲ್ಲಾಧಿಕಾರಿ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಿ ಎಂಡಿಎ ಅಧಿಕಾರಿಗಳು ಜಾಗವನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.ಈ ಕಾರ್ಯಾಚರಣೆಯಲ್ಲಿ ಎಂಡಿಎ ಕಾರ್ಯದರ್ಶಿ ಕೆ. ಜಾನ್ಸನ್‌, ಕಾರ್ಯಪಾಲಕ ಎಂಜಿನಿಯರ್‌ ಗಳಾದ ನಾಗೇಶ್‌, ಮಹೇಶ್‌, ಎಇಇ ಸುನಿತಾ ಹಾಗೂ ಭೂಸ್ವಾಧೀನ ಶಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು
ಸಮಸ್ಯೆ ಬಗೆ ಹರಿಸದಿದ್ದರೇ ತೀವ್ರ ಹೋರಾಟ