-ಜವಹಾರಲಾಲ್ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಕಂದಕೂರು
ಕನ್ನಡಪ್ರಭ ವಾರ್ತೆ ಗುರುಮಠಕಲ್
ಯೋಧರು ಹಾಗೂ ರೈತರು ನಮ್ಮ ಬೆನ್ನೆಲುಬಾಗಿದ್ದಾರೆ. ಆದರೆ, ಸ್ವಾತಂತ್ರ್ಯ ಸಿಕ್ಕು 78 ವರ್ಷಗಳೇ ಕಳೆದರೂ ರೈತರಿಗೆ 10 ತಾಸು ವಿದ್ಯುತ್ ಒದಗಿಸಲಾಗುತ್ತಿಲ್ಲ ಎಂದು ಶಾಸಕ ಶರಣಗೌಡ ಕಂದಕೂರು ಅವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿದರು.ಜವಹಾರಲಾಲ್ ನೆಹರು ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಭ್ರಷ್ಟಾಚಾರ, ಅನಾಚಾರ ನಡೆಯಲು ಬಿಡುವುದಿಲ್ಲ ಎಂದು ಈ ಸ್ವಾತಂತ್ರ‍್ಯ ದಿನಾಚರಣೆ ವೇಳೆ ಪ್ರಮಾಣ ಮಾಡುವೆ ಎಂದರು.
ಕ್ಷೇತ್ರದ ಜನಪರ ಹೋರಾಟಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ. ಮತದಾರರ ತಲೆತಗ್ಗಿಸುವ ಕಾರ್ಯ ಎಂದಿಗೂ ಮಾಡಲ್ಲ. ತಮ್ಮ ಧ್ವನಿ ಅಡಗಿಸುವ ಷಡ್ಯಂತ್ರ ನಡೆಯುತ್ತಿದೆ ಅದು ಸಾಧ್ಯವಿಲ್ಲ ಎಂದು ಗುಡುಗಿದರು.
ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದ ಇಂದು ಶಾಸಕರಾಗಿದ್ದೇವೆ. ಅಂಬೇಡ್ಕರ್ ಅವರ ಭಾವಚಿತ್ರ ಇಡುವ ಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದರು.
ಶಶಿಕಾಂತ ಜನಾರ್ದನ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು.
ತಾ.ಪಂ. ಅಧಿಕಾರಿ ಅಂಬರೀಶ್ ಪಾಟೀಲ್, ಮುಖ್ಯಾಧಿಕಾರಿ ಭಾರತಿ ದಂಡೋತಿ, ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ಪಿಎಸ್‌ಐ ಭೀಮರಾಯ, ಉಪ ತಹಸೀಲ್ದಾರ್ ಎಜಾಜ್ ಉಲ್ ಹಕ್, ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂತೊಷ ಕುಮಾರ್ ನೀರೆಟಿ, ಸಿಡಿಪಿಒ ಶರಣ ಬಸಪ್ಪ ಇದ್ದರು.
15ವೈಡಿಆರ್12: ಗುರುಮಠಕಲ್ ಪಟ್ಟಣದ ಜವಹಾರಲಾಲ್ ನೆಹರು ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮ ಜರುಗಿತು.