ಕಾಂಗ್ರೆಸ್ ಬಿಟ್ಟ ಮೇಲೂ ಅದರ ಸಂಪರ್ಕದಲ್ಲಿದ್ದೆ: ಜೆ.ಪಿ. ಹೆಗ್ಡೆ

KannadaprabhaNewsNetwork |  
Published : Mar 15, 2024, 01:21 AM IST
ಜೆಪಿಹೆಗ್ಡೆ14 ಉಡುಪಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ ಜಯಪ್ರಕಾಶ್ ಹೆಗ್ಡೆ | Kannada Prabha

ಸಾರಾಂಶ

ನನ್ನ ಜೊತೆ ಬಿಜೆಪಿ ಸೇರಿದ್ದವರೂ ವಾಪಸ್‌ ಬರುತ್ತಾರೆ. ಒಂದೇ ಸಲ ಎಲ್ಲರನ್ನೂ ಕರೆದುಕೊಂಡು ಬರಲು ಸಾಧ್ಯ ಎಂದು ಅನಿಸುವುದಿಲ್ಲ. ಎರಡು ಜಿಲ್ಲೆಯಲ್ಲಿ ಅನೇಕ ಮಂದಿ ಬಿಜೆಪಿಯವರು ನನ್ನ ಜೊತೆ ಬರುತ್ತೇನೆ ಎಂದಿದ್ದಾರೆ. ಅವರಿಂದ ನನ್ನ ರಾಜಕೀಯ ಭವಿಷ್ಯ, ನನ್ನಿಂದ ಅವರ ರಾಜಕೀಯ ಭವಿಷ್ಯ ಎಂದು ನಾನು ಭಾವಿಸುವುದಿಲ್ಲ ಎಂದು ಜೆಪಿ ಹೆಗ್ಡೆ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿಕಾಂಗ್ರೆಸ್ ಪಕ್ಷ ಬಿಟ್ಟ ಮೇಲೆಯೂ ನಾನು ಪಕ್ಷದ ನಾಯಕರ ಸಂಪರ್ಕದಲ್ಲಿದ್ದೆ. ಕಾಂಗ್ರೆಸ್‌ನ ಸ್ನೇಹಿತರ ಸ್ನೇಹಾಚಾರ ಬಿಟ್ಟಿಲ್ಲ. ಜನರ ಅಭಿವೃದ್ಧಿ ಕೆಲಸಗಳಿಗೆ ನಾವೆಲ್ಲರೂ ಒಟ್ಟಾಗುತ್ತಿದ್ದೆವು ಎಂದು ಕಾಂಗ್ರೆಸ್‌ಗೆ ಮರಳಿರುವ, ಸಂಭಾವ್ಯ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.ಪಕ್ಷ ಸೇರಿದ ಮೇಲೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಗುರುವಾರ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.ನಾನು ಟಿಕೆಟ್ ಬಗ್ಗೆ ಸಿದ್ದರಾಮಯ್ಯ ಜೊತೆ ಯಾವುದೇ ಚರ್ಚೆ ಮಾಡಿಲ್ಲ. ಆದರೆ ಚುನಾವಣೆಯಲ್ಲಿ ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುವುದರ ಜೊತೆಗೆ, ಮುಂದಿನ ಚುನಾವಣೆಯ ಗೆಲ್ಲುವುದಕ್ಕೆ ಕೆಲಸ ಮಾಡಬೇಕಾಗಿದೆ. ಎರಡೂ ಜಿಲ್ಲೆಯ ಪಕ್ಷದ ಪದಾಧಿಕಾರಿಗಳನ್ನು ಒಟ್ಟು ಸೇರಿಸಿ ಒಂದು ಸಭೆ ಮಾಡುವ ಯೋಜನೆ ಇದೆ ಎಂದರು.

ಹಿಂದುಳಿದ ವರ್ಗಗಳ ಆಯೋಗದ ವರದಿಯ ಬಗ್ಗೆ ಚರ್ಚೆ ಇದೆ ನಿಜ, ಆದರೆ ಸರ್ಕಾರ ವರದಿಯನ್ನು ಸ್ವೀಕರಿಸಿದ್ದರೆ ಲಾಭವಾಗುತ್ತಿತ್ತು ಅನಿಸುತ್ತದೆ. ಈ ವಿಚಾರ ಸರ್ಕಾರದ ತೀರ್ಮಾನಕ್ಕೆ ಬಿಟ್ಟದ್ದು ಎಂದರು.* ನನ್ನ ಜೊತೆಗಿದ್ದರೂ ಹಿಂದೆ ಬರುತ್ತಾರೆಬಿಜೆಪಿ ಅಭ್ಯರ್ಥಿ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಹೆಗ್ಡೆ ಅವರು, ಬಿಜೆಪಿ ಅದರ ಕೆಲಸ ಮಾಡುತ್ತದೆ, ನಾವು ನಮ್ಮ ಕೆಲಸ ಮಾಡುತ್ತೇವೆ. ನಾವು ಕಾಂಗ್ರೆಸ್ ಪಕ್ಷದ ಕೆಲಸ ಶುರು ಮಾಡಿದ್ದೇವೆ ಎಂದರು.ನನ್ನ ಜೊತೆ ಬಿಜೆಪಿ ಸೇರಿದ್ದವರೂ ವಾಪಸ್‌ ಬರುತ್ತಾರೆ. ಒಂದೇ ಸಲ ಎಲ್ಲರನ್ನೂ ಕರೆದುಕೊಂಡು ಬರಲು ಸಾಧ್ಯ ಎಂದು ಅನಿಸುವುದಿಲ್ಲ. ಎರಡು ಜಿಲ್ಲೆಯಲ್ಲಿ ಅನೇಕ ಮಂದಿ ಬಿಜೆಪಿಯವರು ನನ್ನ ಜೊತೆ ಬರುತ್ತೇನೆ ಎಂದಿದ್ದಾರೆ. ಅವರಿಂದ ನನ್ನ ರಾಜಕೀಯ ಭವಿಷ್ಯ, ನನ್ನಿಂದ ಅವರ ರಾಜಕೀಯ ಭವಿಷ್ಯ ಎಂದು ನಾನು ಭಾವಿಸುವುದಿಲ್ಲ ಎಂದರು.ಜಾತಿಯ ಬಗ್ಗೆ ಚರ್ಚೆ ಮಾಡುವುದು ಕಮ್ಮಿ ಮಾಡಿದಷ್ಟು, ಸೌಹಾರ್ದಯುತವಾಗಿ ಕೆಲಸ ಮಾಡಬಹುದು ಎಂದು ಜಾತಿವಾರು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ