2 ವರ್ಷವಾದ್ರೂ ರಾಜ್ಯದ ಅಭಿವೃದ್ಧಿ ಶೂನ್ಯ: ಎಂ.ಪಿ.ರೇಣುಕಾಚಾರ್ಯ

KannadaprabhaNewsNetwork |  
Published : May 29, 2025, 02:43 AM ISTUpdated : May 29, 2025, 11:15 AM IST
ಹೊನ್ನಾಳಿ ಫೋಟೋ 28ಎಚ್.ಎಲ್.ಐ1. ಬುಧವಾರ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ತಮ್ಮ ನಿನಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು | Kannada Prabha

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಸಾಧನೆ ಮಾತ್ರ ಶೂನ್ಯವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸರ್ಕಾರವನ್ನು ಕುಟುಕಿದರು

 ಹೊನ್ನಾಳಿ : ರಾಜ್ಯದಲ್ಲಿ ಕಾಂಗ್ರೆಸ್ 136 ಸೀಟ್ ಪಡೆಯುವ ಮೂಲಕ ಜನಾದೇಶ ಪಡೆದು ಅಧಿಕಾರಕ್ಕೆ ಬಂದು 2 ವರ್ಷಗಳಾಗಿವೆ. ಇತ್ತೀಚೆಗೆ ಸರ್ಕಾರ ಸಾಧನೆ ಸಮಾವೇಶ ಕೂಡ ಅದ್ಧೂರಿಯಾಗಿ ಆಚರಿಸಿಕೊಂಡಿದೆ. ಆದರೆ, ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಸಾಧನೆ ಮಾತ್ರ ಶೂನ್ಯವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸರ್ಕಾರವನ್ನು ಕುಟುಕಿದರು

ಇಲ್ಲಿಯ ತಮ್ಮ ನಿವಾಸದಲ್ಲಿ ಬುಧವಾರ ಬಿಜೆಪಿ ಮುಖಂಡರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರ್ಕಾರಗಳು ಜಾರಿಗೆ ತಂದಿರುವ ಹಲವಾರು ಜನೋಪಕಾರಿ ಯೋಜನೆಗಳನ್ನು ಕೈಬಿಡುವ ಮೂಲಕ ಕಾಂಗ್ರೆಸ್ ಒಂದು ರೀತಿಯಲ್ಲಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.

ಈ ಹಿಂದೆ ಬಿಜೆಪಿ ಸರ್ಕಾರದ ಅ‍ವಧಿಯಲ್ಲಿ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಅಭಿವೃದ್ದಿಗಾಗಿ 46 ಸಾವಿರ ಕೋಟಿ ರು.ನಷ್ಟು ಹಣವನ್ನು ರಾಜ್ಯದ ಅಭಿವೃದ್ದಿಗಾಗಿ ಮೀಸಲಾಗಿಡಲಾಗಿತ್ತು, ಸಾಲದೆಂಬಂತೆ ಎಸ್‌ಸಿಟಿಎಸ್‌ಪಿ ಹಣ 26 ಸಾವಿರ ಕೋಟಿ ರು. ಹಣವನ್ನು ಕೂಡ ಕಾಂಗ್ರೆಸ್ ಸರ್ಕಾರ ಬೇರೆಡೆಗೆ ಡೈವರ್ಟ್ ಮಾಡಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡರೆ ಎಲ್ಲಿ ಬಿಜೆಪಿಗೆ ಹೆಸರು ಬರುತ್ತದೆಯೋ ಎಂಬ ಕಾರಣದಿಂದ ಬಿಜೆಪಿ ಸರ್ಕಾರಗಳ ಹಲವಾರು ಜನಪರ ಯೋಜನೆಗಳನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನುಷ್ಠಾನ ಮಾಡದೇ ಕೈಬಿಟ್ಟಿದೆ ಕೇಂದ್ರ ಸರ್ಕಾರದಿಂದ ಅನುದಾನ ಬರುತ್ತಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಸತ್ಯಕ್ಕೆ ದೂರವಾದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರೈತರ ಹಿತಕಾಪಾಡುವ ಪಿ.ಎಂ.ಕಿಸಾನ್ ಸನ್ಮಾನ್ ಯೋಜನೆಯಡಿ ಪ್ರತಿ ವರ್ಷ ರೈತರ ಖಾತೆಗೆ 6ಸಾವಿರ ಹಣ ಹಾಕಿದರೆ ಮುಖ್ಯ ಯಡಿಯೂರಪ್ಪ ಅಧಿಕಾರಾವಧಿಯಲ್ಲಿ 4 ಸಾವಿರ ರು.ರೈತರ ಖಾತೆಗೆ ಜಮಾ ಮಾಡಲಾಗುತ್ತಿತ್ತು, ಇದರೆ ಜತೆಗೆ ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್, ವಿದ್ಯಾನಿಧಿ ಜನೌಷಧಿ, ಸ್ತ್ರೀ ಸಾಮರ್ಥ್ಯ ಯೋಜನೆ ಹೀಗೆ ಹತ್ತು ಹಲವು ಯೋಜನೆಗಳನ್ನು ಇಂದು ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ. ಎಪಿಎಂಸಿ ಕಾಯ್ಗೆ ರದ್ದು, ಕೃಷಿ ಮಾರಾಟ ಕಾಯ್ದೆ ರದ್ದು ಮಾಡಿದ್ದಾರೆ ಎಂದು ಟೀಕಿಸಿದರು

ಅಬಕಾರಿ ಇಲಾಖೆಯಲ್ಲಿ ಲಿಕ್ಕರ್ ಲೈಸನ್ಸ್ ಫೀ ಗ್ರಾಮೀಣ ಪ್ರದೇಶದಲ್ಲಿ 6.60 ಲಕ್ಷ ರು. ಇದ್ದದ್ದು, ಕಾಂಗ್ರೆಸ್ ಕಾಲದಲ್ಲಿ ದುಪ್ಪಟ್ಟು ಅಂದರೆ 13.20 ಲಕ್ಷ ರು. ಅಗಿದೆ ಇದೇ ರೀತಿ ಮುದ್ರಾಂಕ ಶುಲ್ಕ ಸೇರಿದಂತೆ ಅನೇಕ ವಿಚಾರಗಳಲ್ಲಿ ಬೆಲೆ ದುಪ್ಪಟ್ಟು ಮಾಡುವ ಮೂಲಕ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದೆ ಎಂದು ಹೇಳಿದರು

ಜನೌಷಧಿ ಮಳಿಗೆ ರದ್ದು ವಿರುದ್ಧ ಪ್ರತಿಭಟನೆ:

ತಾಲೂಕು ಬಿಜೆಪಿ ಅಧ್ಯಕ್ಷ ಅರಕೆರೆ ನಾಗರಾಜ್ ಮಾತನಾಡಿ, ಬಹುಪಾಲು ಬಡವರಿಗೆ ವರದಾನವಾಗಿದ್ದ ಜನೌಷಧಿ ಮಳಿಗೆಗಳನ್ನು ಈಗಿನ ಸರ್ಕಾರ ರದ್ದು ಮಾಡಿದ್ದು, ಇದನ್ನು ಖಂಡಿಸಿ ಮೇ 30ರಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಎಂದು ಬಿಜೆಪಿ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಮೌನ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.

ವ್ಯಕ್ತಿಗಿಂತ ಪಕ್ಷ ದೊಡ್ಡದಾಗಿದ್ದು ತಾನು ಎಲ್ಲಿಯೂ ಎಂದಿಗೂ ಪಕ್ಷದ ವಿರುದ್ಧ ಮಾತನಾಡಿಲ್ಲ ಬಿಜೆಪಿ ಪಕ್ಷವೇ ತಮಗೆ ಸರ್ವೋಚ್ಚವಾಗಿದೆ ಎಂದು ಹೇಳಿದರು.

ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್, ನೆಲಹೊನ್ನೆ ಮಂಜುನಾಥ, ಬಡಾವಣೆ ರಂಗಪ್ಪ, ಅನಿಲ್, ಸಿದ್ದಲಿಂಗಪ್ಪ,ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''