ಕನ್ನಡಪ್ರಭ ವಾರ್ತೆ ಶಿವಮೊಗ್ಗ ಇವತ್ತು ವಿಧಾನಸಭಾ ಚುನಾವಣೆ ನಡೆದರೆ 135ಕ್ಕಿಂತ ಹೆಚ್ಚಿನ ಸೀಟನ್ನು ಗೆದ್ದು ಬಿಜೆಪಿ ರಾಜ್ಯದಲ್ಲಿ ಆಡಳಿತ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ,ಎಸ್.ಯಡಿಯೂರಪ್ಪ ಹೇಳಿದರು.
ಜಿಲ್ಲಾ ಬಿಜೆಪಿ ವತಿಯಿಂದ ನಗರದ ಪ್ರೇರಣಾ ಸಭಾಂಗಣದಲ್ಲಿ ಬುಧವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ರಾಜ್ಯದ ಅಧ್ಯಕ್ಷರಾದ ಮೇಲೆ ರಾಜ್ಯದ ಉದ್ದಗಲಕ್ಕೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ ಎಂದರು.ವಿಜಯೇಂದ್ರ ಅಧ್ಯಕ್ಷ ಆಗುತ್ತಾರೆ ಎಂದು ಯಾರು ನಿರೀಕ್ಷೆ ಮಾಡಿರಲಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಜಿ ಅವರು ದೂರವಾಣಿ ಮೂಲಕ ಮಾತನಾಡಿ, ಈ ವಿಷಯದ ಬಗ್ಗೆ ಮಾತನಾಡಿದಾಗ ನಾನು ನಂಬಿರಲಿಲ್ಲ. ವಿಜಯೇಂದ್ರ ಬಂದು ಹೇಳಿದ ಮೇಲೆ ನಾನು ನಂಬಿದ್ದು. ಮಾಧ್ಯಮದಲ್ಲಿ ಬಂದ ವರದಿ ಆಧಾರದ ಮೇಲೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದರು.
ಈಗ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಬರೋದು ನಿಶ್ಚಿತ. ವಿಧಾನಸಭೆ ಚುನಾವಣೆಯಲ್ಲನ್ನಮಗೆ ಹಿನ್ನಡೆಯಾಗಿದೆ. ಆಗಿರುವ ತಪ್ಪನ್ನು ಸರಿಪಡಿಸಿಕೊಂಡು ಮುಂದೆ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷವನ್ನು ಬಲಪಡಿಸಿ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಬೇಕು ಎಂದು ಸಂಕಲ್ಪ ಮಾಡಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.- - - ಕೋಟ್ ರಾಜ್ಯ ಸರ್ಕಾರದ ಆಡಳಿತ ಬಗ್ಗೆ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಜನರ ಜೀವನ ಜೊತೆ ಚೆಲ್ಲಾಟ ಆಡುತ್ತಿರುವ ಬಗ್ಗೆ ಬೆಳಗಾವಿ ಅಧಿವೇಶದಲ್ಲಿ ನಮ್ಮ ಶಾಸಕರು ಗಂಭೀರವಾಗಿ ಚರ್ಚೆ ನಡೆಸಲಿದ್ದಾರೆ. ಈ ಸರ್ಕಾರಕ್ಕೆ ಛೀಮಾರಿ ಹಾಕಿ, ನೀವು ಅಧಿಕಾರದಲ್ಲಿ ಇರುವ ನೈತಿಕ ಹಕ್ಕಿಲ್ಲ, ರಾಜಿನಾಮೆ ಕೊಟ್ಟು ಮನೆಗೆ ಹೋಗಿ ಎಂದು ಹೇಳುವುದು ಮಾತ್ರ ಬಾಕಿ ಉಳಿದಿದೆ
- ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ- - - (-ಫೋಟೋ: ಬಿ.ಎಸ್.ಯಡಿಯೂರಪ್ಪ)