ಕನ್ನಡಪ್ರಭ ವಾರ್ತೆ ಹೊನ್ನಾವರ
ಪಟ್ಟಣದ ಎಂಪಿಇ ಸೊಸೈಟಿಯ ಎಸ್‌ಡಿಎಂ ಪದವಿ ಪೂರ್ವ ಕಾಳೇಜಿನಲ್ಲಿ ಶನಿವಾರ ನಡೆದ 2025-26ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಇದೀಗ ಕೃತಕ ಬುದ್ಧಿಮತ್ತೆಯ ಕಾಲ. ನಮ್ಮನ್ನು ನೋಡುವ ರೀತಿಯೇ ಬದಲಾಗಿದೆ. ಅದರ ಕೈವಶ ಆಗಬಾರದು. ನಾವು ಏನಾಗಬೇಕು ಎಂಬುದನ್ನು ಮೊದಲೇ ನಿರ್ಧರಿಸಿಕೊಳ್ಳಬೇಕು. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಿ. ನಿಮ್ಮನ್ನು ನೀವು ಭಿನ್ನವಾಗಿ ತೋರಿಸಿಕೊಳ್ಳಿ. ಪರಿಸ್ಥಿತಿ ನೋಡಿಕೊಂಡು ನಿಮ್ಮ ಜೀವನ ಸಂತೋಷವಾಗಿರುವಂತೆ ಮಾಡಿಕೊಳ್ಳಿ. ಹೆಚ್ಚು ಅಂಕ ಗಳಿಸಿದವರೆಲ್ಲ ದೊಡ್ಡ ಹುದ್ದೆಗೆ ಹೋಗುತ್ತಾರೆ ಅನ್ನುವುದು ಸುಳ್ಳು ಎಂದು ನುಡಿದರು.ಕಾರ್ಯಕ್ರಮ ಉದ್ಘಾಟಿಸಿದ ಎಂಪಿಇ ಸೊಸೈಟಿಯ ಅಧ್ಯಕ್ಷ ಕೃಷ್ಣಮೂರ್ತಿ ಭಟ್ ಶಿವಾನಿ ಮಾತನಾಡಿ, ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಮಾಜದಲ್ಲಿ ಹೆಸರನ್ನು ಗಳಿಸಿದಾಗ ಶಿಕ್ಷಕರಿಗೆ ಹೆಮ್ಮೆ ಎನಿಸುತ್ತದೆ. ವಿದ್ಯಾರ್ಥಿಗಳು ಪೂರ್ವ ವಿದ್ಯಾರ್ಥಿಗಳಿಂದ ಪ್ರೇರಣೆ ಹೊಂದಬೇಕು. ತಮ್ಮ ಕಾಲೇಜಿನ ಬಗ್ಗೆ ಅಭಿಮಾನವನ್ನು ಹೊಂದಿರಬೇಕು. ಸಾಧಿಸುವ ಛಲ ನಿಮ್ಮಲ್ಲಿರಲಿ. ಯಾವುದೇ ಚಿಕ್ಕಪುಟ್ಟ ಸಂಗತಿಗಳಿಗೆ ಖಿನ್ನತೆಗೆ ಒಳಗಾಗಬೇಡಿ. ಒತ್ತಡವನ್ನು ಎದುರಿಸುವ ಗುಣ ಬೆಳೆಸಿಕೊಳ್ಳಿ. ಮಾಡುವ ಕೆಲಸವನ್ನು ಶ್ರದ್ಧೆಯಿಂದ ಮಾಡಿ ಎಂದು ಕಿವಿಮಾತು ಹೇಳಿದರು.
ಎಸ್.ಡಿ.ಎಂ.ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಡಿ.ಎಲ್. ಹೆಬ್ಬಾರ್ ಮಾತನಾಡಿದರು. ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಂ.ಎಚ್. ಭಟ್ ಅಧ್ಯಕ್ಷತೆ ವಹಿಸಿದ್ದರು.ಎಂಪಿಇ ಸೊಸೈಟಿ ಉಪಾಧ್ಯಕ್ಷ ನಾಗರಾಜ್ ಕಾಮತ್, ಕಾರ್ಯದರ್ಶಿ ಎಸ್.ಎಂ. ಭಟ್, ದೈಹಿಕ ಶಿಕ್ಷಣ ಡೈರೆಕ್ಟರ್ ರೇಣುಕಾ ಮೇಸ್ತ, ವಿದ್ಯಾರ್ಥಿ ಯೂನಿಯನ್ ಪ್ರಧಾನ ಕಾರ್ಯದರ್ಶಿ ಪ್ರಿನ್ಸ್ ರೊಡ್ರಗೀಸ್, ಕ್ರೀಡಾ ಕಾರ್ಯದರ್ಶಿ ಕಿಶನ್ ನಾಯ್ಕ ಉಪಸ್ಥಿತರಿದ್ದರು.
ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಯೂನಿಯನ್ ಸಲಹೆಗಾರ ಐ.ಎ. ಶೇಖ್ ಸ್ವಾಗತಿಸಿದರು. ಉಪನ್ಯಾಸಕ ವಿನಾಯಕ ಭಟ್ ಪರಿಚಯಿಸಿದರು. ಉಪನ್ಯಾಸಕಿ ಹೇಮಾ ಭಟ್ ವರದಿ ವಾಚಿಸಿದರು. ಉಪನ್ಯಾಸಕ ಎಂ.ಎನ್. ಅಡಿಗುಂಡಿ ಹಾಗೂ ಉಪನ್ಯಾಸಕಿ ಹೇಮಾ ಭಟ್ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.