ಮೋದಿ ಕೂಡ ಬಿಜೆಪಿ ಹೆಸರು ಹೇಳಲ್ಲ, ಮೋದಿ ಕೀ ಗ್ಯಾರಂಟಿ ಅಂತಾರೆ: ಶಾಸಕ ಆರ್.ವಿ. ದೇಶಪಾಂಡೆ

KannadaprabhaNewsNetwork |  
Published : Apr 23, 2024, 12:46 AM IST
ಡಾ.ಅಂಜಲಿ ನಿಂಬಾಳ್ಕರ್ ಮಾತನಾಡುತ್ತಿರುವುದು | Kannada Prabha

ಸಾರಾಂಶ

ಸಂಸತ್ ಚುನಾವಣೆಯಲ್ಲಿ ಜಿಲ್ಲೆಯಿಂದ ಮೊದಲು ಮಾರ್ಗರೇಟ್ ಆಳ್ವ ಅವರಿಗೆ ಕಾಂಗ್ರೆಸ್ ಅವಕಾಶ ನೀಡಿತ್ತು. ಉತ್ತಮ ಕೆಲಸ ಮಾಡಿದ್ದರು. ಎರಡನೇ ಬಾರಿಗೆ ಡಾ. ಅಂಜಲಿ ಅವರಿಗೆ ಅವಕಾಶ ನೀಡಿದ್ದೇವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಹೊನ್ನಾವರ: ಮೋದಿ ಕೂಡ ಬಿಜೆಪಿ ಹೆಸರು ಹೇಳಲ್ಲ, "ಮೋದಿ ಕೀ ಗ್ಯಾರಂಟಿ'''' ಎನ್ನುತ್ತಾರೆ. ನಾವೆಲ್ಲಿಯೂ ಸಿದ್ದರಾಮಯ್ಯ, ಸೋನಿಯಾ ಗ್ಯಾರಂಟಿ ಎನ್ನಲ್ಲ, ನಮ್ಮದು ಕಾಂಗ್ರೆಸ್ ಗ್ಯಾರಂಟಿ. ಬಿಜೆಪಿ ಎಂಬ ಪಕ್ಷವಿದ್ದರೂ ಅದರಲ್ಲಿರುವವರು ಮೋದಿ ಹೆಸರಲ್ಲಿ ಮತ ಕೇಳುತ್ತಾರೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಬಿಜೆಪಿಗರ ವಿರುದ್ಧ ವ್ಯಂಗ್ಯವಾಡಿದರು.

ಸೋಮವಾರ ಹಳದಿಪುರದಲ್ಲಿ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜಕೀಯದಲ್ಲಿ ಮಹಿಳೆಯರಿಗೆ ಅವಕಾಶ ಸಿಗುವುದೇ ಕಡಿಮೆ. ಸಂಸತ್ ಚುನಾವಣೆಯಲ್ಲಿ ಜಿಲ್ಲೆಯಿಂದ ಮೊದಲು ಮಾರ್ಗರೇಟ್ ಆಳ್ವ ಅವರಿಗೆ ಕಾಂಗ್ರೆಸ್ ಅವಕಾಶ ನೀಡಿತ್ತು. ಉತ್ತಮ ಕೆಲಸ ಮಾಡಿದ್ದರು. ಎರಡನೇ ಬಾರಿಗೆ ಡಾ. ಅಂಜಲಿ ಅವರಿಗೆ ಅವಕಾಶ ನೀಡಿದ್ದೇವೆ. ಸಂಸತ್ ಚುನಾವಣೆಯಲ್ಲಿ ಬಿಜೆಪಿಗರು ಮಹಿಳೆಯರಿಗೆ ಅವಕಾಶ ಕೊಟ್ಟಿದ್ದೇ ಇಲ್ಲ ಎಂದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಮಾತನಾಡಿ, ಎಲ್ಲ ವಸ್ತುಗಳ ಮೇಲೂ ಜಿಎಸ್‌ಟಿ ಹೇರಿದ್ದಾರೆ. ಬಿಜೆಪಿಯ ಆಡಳಿತ ದುಬಾರಿಯಾಗಿದೆ. ರಾಜ್ಯ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿ ನೀಡಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತೈದು ಗ್ಯಾರಂಟಿ ತರುತ್ತೇವೆ. ಈ ಭಾಗದಲ್ಲಿನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಅರಣ್ಯ ಅತಿಕ್ರಮಣ ಸಮಸ್ಯೆ ಬಗ್ಗೆ ಸಂಸತ್‌ನ ಮೊದಲ ಅಧಿವೇಶನದಲ್ಲೇ ಧ್ವನಿ ಎತ್ತುತ್ತೇನೆ. ಒಮ್ಮೆ ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದರೆ ಬದಲಾವಣೆ ತಂದು ತೋರಿಸುತ್ತೇನೆ ಎಂದು ಭರವಸೆ ನೀಡಿದರು‌.

ಈ ಸಂದರ್ಭದಲ್ಲಿ ಡಾ. ಅಂಜಲಿ ಅವರಿಗೆ ಸ್ಥಳೀಯ ಮಹಿಳೆಯರು ಉಡಿ ತುಂಬುವ ಮೂಲಕ ಗೌರವ ಅರ್ಪಣೆ ಮಾಡಿದರು.

ಮಾಜಿ ಶಾಸಕಿ ಶಾರದಾ ಶೆಟ್ಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ‌ ಗಾಂವ್ಕರ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ರವೀಂದ್ರ ನಾಯ್ಕ, ಜಿಲ್ಲಾ ಗ್ಯಾರಂಟಿ ಅನುಷ್ಠಾ‌ನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಪ್ರಚಾರ ಸಮಿತಿ ತಾಲೂಕು ಅಧ್ಯಕ್ಷ ಹೊನ್ನಪ್ಪ ನಾಯ್ಕ, ಮಹಿಳಾ ಕಾಂಗ್ರೆಸ್‌ನ ಪುಷ್ಪಾ ಮಹೇಶ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಬ್ದುಲ್ ಮಜೀದ್, ಕೆಪಿಸಿಸಿ ವೀಕ್ಷಕ ಅನಂತು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ತೆಂಗೇರಿ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಯೊಬ್ಬರಲ್ಲಿ ದೇಶ ಭಕ್ತಿ ಮೂಡಿಸಿ
ಪಂಚಾಂಗ ಶ್ರವಣದಿಂದ ಮನಸ್ಸಿಗೆ ನೆಮ್ಮದಿ ಲಭಿಸುವುದು-ಶಿವಾಚಾರ್ಯರು