ರಾಜ್ಯ ವಿರೋಧಿಸುತ್ತಿದ್ದರೂ ಕೇಂದ್ರದಿಂದ ಮತ್ತೆ 7 ನೇ ಕರಡು ಅಧಿಸೂಚನೆ: ರಮೇಶ್ ಹೆಗ್ಡೆ ಆರೋಪ

KannadaprabhaNewsNetwork |  
Published : Aug 23, 2026, 01:45 AM IST
ನರಸಿಂಹರಾಜಪುರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ನೇತ್ರತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಮಾತನಾಡಿದರು. | Kannada Prabha

ಸಾರಾಂಶ

ನರಸಿಂಹರಾಜಪುರಕೇಂದ್ರ ಸರ್ಕಾರ ಹೊರಡಿಸಿದ ಪರಿಸರ ಸೂಕ್ಷ್ಮ ವಲಯದ ಕರಡು ಅಧಿಸೂಚನೆ ವಿರೋಧಿಸುತ್ತಾ ಬರುತ್ತಿದ್ದರೂ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ 7 ನೇ ಕರಡು ಅಧಿಸೂಚನೆ ಹೊರಡಿಸಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್‌ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.

- ಬ್ಲಾಕ್ ಕಾಂಗ್ರೆಸ್ ನೇತ್ರತ್ವದಲ್ಲಿ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ ವಿರೋದಿಸಿ ಪ್ರತಿಭಟನಾ ಸಭೆ

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಕೇಂದ್ರ ಸರ್ಕಾರ ಹೊರಡಿಸಿದ ಪರಿಸರ ಸೂಕ್ಷ್ಮ ವಲಯದ ಕರಡು ಅಧಿಸೂಚನೆ ವಿರೋಧಿಸುತ್ತಾ ಬರುತ್ತಿದ್ದರೂ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ 7 ನೇ ಕರಡು ಅಧಿಸೂಚನೆ ಹೊರಡಿಸಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್‌ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಪಟ್ಟಣದ ಡ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿದ್ದ ಪರಿಸರ ಸೂಕ್ಷ್ಮ ಪ್ರದೇಶದ 7 ನೇ ಕರಡು ಅಧಿಸೂಚನೆ ವಿರುದ್ಧದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಪರಿಸರ ಸೂಕ್ಷ್ಮ ಪ್ರದೇಶದ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದೆ. ರಾಜ್ಯ ಸರ್ಕಾರ ಕೇವಲ ಯೋಜನೆ, ಕಾಯ್ದೆಗಳಿಗೆ ಆಕ್ಷೇಪಣೆ ಸಲ್ಲಿಸಬಹುದು. ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರಿಸರ ಸೂಕ್ಷ್ಮ ಪ್ರದೇಶ ಅಧಿಸೂಚನೆ ವಿರುದ್ಧ ಆಕ್ಷೇಪಣೆ ಸಲ್ಲಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

2014 ರ ಲೋಕಸಭಾ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡುವುದಿಲ್ಲ ಎಂದಿದ್ದ ಬಿಜೆಪಿ ಅಧಿಕಾರಕ್ಕೆ ಬಂದು ಪರಿಸರ ಸೂಕ್ಷ್ಮ ಪ್ರದೇಶದ ಕರಡು ಅಧಿಸೂಚನೆ ಹೊರಡಿಸಿದೆ. ಇದು ಮಲೆನಾಡು ಭಾಗದ ರೈತರ ಮರಣ ಶಾಸನ. ಉಡುಪಿ, ಚಿಕ್ಕಮಗಳೂರು ಸಂಸದರು ಸಂಸತ್ ಅಧಿವೇಶನದಲ್ಲಿ ಮಾತನಾಡಬೇಕು ಎಂದು ಆಗ್ರಹಿಸಿದರು.ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ ಪ್ರಸ್ತುತ ರೈತರು ಬೆಳೆದ ಬೆಳೆ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಡವರ, ರೈತರ ಧ್ವನಿ ಕೇಂದ್ರ ಸರ್ಕಾರ ಕಡೆಗಣಿಸುತ್ತಿದೆ. ಜಿಲ್ಲೆಯ 147 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಒಳಪಡಿಸಲಾಗಿದೆ. ಇಂದು ಸಂಘಟಿತರಾಗಿ ಹೋರಾಟ ಮಾಡಿ, ವಿರೋಧ ವ್ಯಕ್ತಪಡಿಸದೇ ಹೋದರೆ ಈ ಭಾಗದ ರೈತರಿಗೆ ಉಳಿಗಾಲವಿಲ್ಲ. ಕೇಂದ್ರದ ಬಿಜೆಪಿ ಸರ್ಕಾರ ಈ ಭಾಗದ ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ಈ ಭಾಗದ ಸಂಸದರ ಜವಾಬ್ದಾರಿ ನೆನಪಿಸಲು ಇಂದು ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಈ ಹಿಂದಿನ ಸಂಸದರಾಗಿದ್ದ ಶೋಭಾ ಕರಂದ್ಲಾಜೆ ಪಶ್ಚಿಮ ಘಟ್ಟಗಳ ಪ್ರದೇಶ ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಒಳಪಡುವ ಮಹತ್ತರ ಸಭೆಗೆ ಗೈರು ಹಾಜರಾಗಿದ್ದ ರಿಂದ ಈ ಭಾಗದ ರೈತರು ಈಗ ಪಶ್ಚಾತ್ತಾಪ ಪಡುವಂತಾಗಿದೆ. ಈ ಕ್ಷೇತ್ರದ ಮಾಜಿ ಶಾಸಕರು ಎನ್.ಆರ್. ಪುರದಲ್ಲಿ ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳ ಸಭೆಗೆ ಕರೆಸಿ ರೈತರಿಗೆ ಮಾರಕವಾದ ಯಾವುದೇ ಯೋಜನೆ, ಕಾಯ್ದೆ ಜಾರಿಯಾಗಿಲ್ಲ ಎಂದು ಬಲವಂತವಾಗಿ ಹೇಳಿಸಿದ್ದರು. ಕಳೆದ ಬಾರಿ ಗ್ರಾಪಂಗಳಿಂದ, ರೈತರಿಂದ ಸ್ವೀಕೃತ ಆಕ್ಷೇಪಣೆಗಳು ಎಲ್ಲಿಗೆ ಹೋಗಿದೆ ಎಂದು ಪ್ರಶ್ನಿಸಿದರು. ಜಿಪಂ ಮಾಜಿ ಸದಸ್ಯ ಬಿ.ಎಸ್.ಸುಬ್ರಮಣ್ಯ ಮಾತನಾಡಿ, ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ, ತಾಲೂಕು ಬಗರ್ ಹುಕುಂ ಅಧ್ಯಕ್ಷ ಈ.ಸಿ.ಜೋಯಿ ಮಾತನಾಡಿದರು. ಪ್ರತಿಭಟನಾ ಸಭೆಗೂ ಮುನ್ನ ಪ್ರತಿಭಟನಾಕಾರರು ದೀಪ್ತಿ ಸರ್ಕಲ್‌ನಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು. ಸಭೆ ನಂತರ ಡೆಪ್ಯೂಟಿ ತಹಸೀಲ್ದಾರ್ ಹೇಮಾ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದರು.ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರ್‌ಬೈಲ್‌ನಟರಾಜ್, ಕಾರ್ಯದರ್ಶಿ ಸುನೀಲ್‌ ಕುಮಾರ್, ನಗರ ಘಟಕದ ಅಧ್ಯಕ್ಷ ಶ್ರೀಧರ ಪಾನಿ, ಮುಖಂಡರಾದ ಕೆ.ಎಂ.ಸುಂದರೇಶ್, ಬಿ.ವಿ.ಉಪೇಂದ್ರ, ಎಚ್.ಬಿ. ರಘವೀರ್, ಬಿ.ಕೆ.ನಾರಾಯಣಸ್ವಾಮಿ, ಕು.ಚಂದ್ರಮ್ಮ,ಸಮೀರನಹೀಂ,ಶ್ರೀಜಿತ್‌ಗೌಡ ದಿಂಡಿನಮಕ್ಕಿ, ಬೆನ್ನಿ, ಎಚ್.ಎಂ. ಶಿವಣ್ಣ, ಮೀನಾಕ್ಷಿಕಾಂತರಾಜ್,ಜುಬೇದಾ, ಹನೀಫ್, ಅಂಜುಮ್ ಮತ್ತು ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಲೂಕು ಅಭಿವೃದ್ಧಿಗೆ ತಂದೆಯಕನಸು ಸಾಕಾರವೇ ನನ್ನ ಗುರಿ
ಇಂದು ಬಳಘಟ್ಟ ಗ್ರಾಮಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ: ಸಿ.ಎಸ್.ಪುಟ್ಟರಾಜು