ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಪಂ, ಅರಣ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಶಿವಮೊಗ್ಗ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅರಣ್ಯೀಕರಣ ಹಾಗೂ ಕೆರೆಗಳ ಪುನಶ್ಚೇತನ ಅಭಿಯಾನ-2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪರಿಸರ ಸಮತೋಲನವನ್ನು ಕಾಯ್ದುಕೊಳ್ಳಲು ಅರಣ್ಯ ಸಂಪತ್ತನ್ನು ಉಳಿಸಲೇಬೇಕಿದೆ ಎಂದರು.
ಪ್ರಕೃತಿಯಲ್ಲಿ ಅರಣ್ಯ ಮತ್ತು ಜಲ ಸಂರಕ್ಷಣೆ ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಶುದ್ಧವಾದ ಗಾಳಿ ಮತ್ತು ನೀರು ಸಿಗುವುದು ಕಷ್ಟಸಾಧ್ಯ.ಆದ್ದರಿಂದ ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದರು.ದೇಶದ ಗಡಿ ರಕ್ಷಣೆಗಾಗಿ ನಾವು ಸೈನ್ಯವನ್ನು ನಿಯೋಜಿಸುತ್ತೇವೆ. ಆ ಗಡಿ ಭದ್ರತೆ ಎಷ್ಟು ಮುಖ್ಯವೋ, ದೇಶದ ಒಳಗಿನ ಅರಣ್ಯ ಪ್ರದೇಶಗಳನ್ನು ಕಾಪಾಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ.ಗಡಿಯಾಚೆಗಿನ ಆಕ್ರಮಣ ತಡೆಯಲು ಸೈನಿಕರಿದ್ದರೆ, ನಮ್ಮ ಒಳಗಿನ ಪರಿಸರವನ್ನು ರಕ್ಷಿಸಲು ನಾವೇ ಸೈನಿಕರಂತೆ ಕೆಲಸ ಮಾಡಬೇಕಾಗಿದೆ ಎಂದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮಾರ್ಗದರ್ಶನದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಗಳ ಸಮನ್ವಯದೊಂದಿಗೆ ರಾಜ್ಯಾದ್ಯಂತ ಅತ್ಯಂತ ವ್ಯವಸ್ಥಿತವಾಗಿ ಬೃಹತ್ ಪ್ರಮಾಣದಲ್ಲಿ ಸಸಿ ನೆಡುವ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೆ ಅರಣ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಕೈಜೋಡಿಸಿರುವುದು ಶ್ಲಾಘನೀಯ ಎಂದರು.
ನ್ಯಾಯಾಧೀಶರು, ಅಧಿಕಾರಿಗಳು, ವಿವಿಧ ಇಲಾಖೆಯ ಮುಖ್ಯಸ್ಥರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಸಿಗಳನ್ನು ನೆಡುವ ಮೂಲಕ ಹಸಿರು ಆಂದೋಲನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನ್ಯಾಯಾಂಗ ಇಲಾಖೆ, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು
ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ಸಂತೋಷ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಮಾತನಾಡಿ, ಅರಣ್ಯ ಇಲಾಖೆ ಸಹಯೋಗದಲ್ಲಿ 25 ಲಕ್ಷ ಗಿಡಗಳನ್ನು ನೆಡುವ ಮಹೋನ್ನತ ಕಾರ್ಯ ಆಗುತ್ತಿದೆ. ಅರಣ್ಯ ಇಲಾಖೆಯ ಇಂತಹ ಉತ್ತಮ ಕಾರ್ಯಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು ಎಂದರು.
ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ್, ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ಮಾತನಾಡಿದರು, ಎಸಿಎಫ್ ವಿಜಯಕುಮಾರ್, ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ರಘುರಾಜ್, ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ಹಾಜರಿದ್ದರು.