ಕನ್ನಡಪ್ರಭ ವಾರ್ತೆ ಯಳಂದೂರು
ಈ ಸಂಬಂಧ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಅಂದು ತಾಲೂಕು ಆಡಳಿತದ ವತಿಯಿಂದ ರಾಜ್ಯೋತ್ಸವ ಕಾರ್ಯಕ್ರಮವನ್ನು ಎಂದಿನಂತೆ ಅರ್ಥಪೂರ್ಣವಾಗಿ ಆಚರಣೆ ಮಾಡುವುದು. ಸರ್ಕಾರಿ ಶಾಲಾ ಮಕ್ಕಳು, ಇಲಾಖೆಗಳ ಸಿಬ್ಬಂದಿ, ಅಧಿಕಾರಿಗಳು, ಕನ್ನಡ ಪರ ಸಂಘಟನೆಗಳು ಹಾಗೂ ಸಾರ್ವಜನಿಕರೊಂದಿಗೆ ಕನ್ನಡಾಂಬೆ ಭಾವಚಿತ್ರದ ಮೆರವಣಿಗೆಯನ್ನು ಪಟ್ಟಣ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು. ನಂತರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವೇದಿಕೆ ಕಾರ್ಯಕ್ರಮಗಳು, ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ, ಸೆಸ್ಕ್ ವತಿಯಿಂದ ಪಟ್ಟಣದ ಬಳೇಮಂಟಪ, ಭೂಲಕ್ಷ್ಮಿ ವರಾಹಸ್ವಾಮಿ ದೇಗುಲಕ್ಕೆ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕರಿಸುವುದು, ಸರ್ಕಾರಿ ಕಚೇರಿಗಳಿಗೂ ವಿದ್ಯುತ್ ದೀಪಾಲಂಕಾರ ಮಾಡಬೇಕು ಎಂದು ಸೂಚನೆ ನೀಡಿದರು.ಇಲಾಖೆಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಎಲ್ಲರೂ ಚಾಚು ತಪ್ಪದೆ ಪಾಲಿಸಬೇಕು. ಇಂತಹ ಪೂರ್ವಭಾವಿ ಸಭೆಗಳಿಗೆ ಕೆಲವು ಇಲಾಖೆಗಳ ಅಧಿಕಾರಿಗಳು ಭಾಗವಹಿಸದೆ ತಮ್ಮ ಸಿಬ್ಬಂದಿಯನ್ನು ಕಳುಹಿಸುತ್ತಾರೆ. ಇದು ನಿಲ್ಲಬೇಕು. ಕಡ್ಡಾಯವಾಗಿ ಇಲಾಖೆಯ ಮುಖ್ಯಸ್ಥರೇ ಬರಬೇಕು, ಇಲ್ಲವಾದಲ್ಲಿ ಅವರಿಗೆ ಮುಂದಿನ ದಿನಗಳಲ್ಲಿ ನೋಟಿಸ್ ಜಾರಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.