ಪ್ರತಿಯೊಬ್ಬ ಭಾರತೀಯನು ದೇಶಾಭಿಮಾನ ಬೆಳೆಸಿಕೊಳ್ಳಬೇಕು

KannadaprabhaNewsNetwork |  
Published : Aug 16, 2026, 02:45 AM IST
15ಎಚ್ಎಸ್ಎನ್3 : ಚನ್ನರಾಯಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈಧ ಸಾಧಕರಿಗೆ ತಾಲೂಕು ಆಡಳಿತದ ವತಿಯಿಂದ ಅಭಿನಂದಿಸಲಾಯಿತು.      | Kannada Prabha

ಸಾರಾಂಶ

ದೇಶಕ್ಕಾಗಿ ದುಡಿದ ಸುಭಾಷ್‌ ಚಂದ್ರಬೋಸ್, ಸರ್ದಾರ್‌ ವಲ್ಲಬಾಯಿ ಪಟೇಲ್, ಲಾಲ್‌ ಬಹದ್ದೂರ್‌ ಶಾಸ್ತ್ರೀ ಹೀಗೆ ಅನೇಕ ಮಹನೀಯರ ಹೋರಾಟದ ಫಲವಾಗಿ ಸಿಕ್ಕಿದ್ದು ಸ್ವಾತಂತ್ರ್ಯ. ಪ್ರತಿಯೊಬ್ಬ ಭಾರತೀಯನು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ದೇಶ ಅಭಿವೃದ್ಧಿಯಾದರೆ ನಾವುಗಳು ಬೆಳೆದಂತೆ. ನಮ್ಮ ದೇಶ ಮುಂದುವರೆಯುತ್ತಿರುವ ದೇಶ, ಸ್ವಾತಂತ್ರ್ಯ ಹೋರಾಟಗಾರರ ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ತ್ಯಾಗ, ಶಾಂತಿ, ಅಹಿಂಸೆಯ ಮಾರ್ಗದಲ್ಲಿ ಸ್ವಾತಂತ್ರ್ಯವನ್ನು ಪಡೆಯಲಾಗಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.

ಅವರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ವಾತಂತ್ರ್ಯದ ದಿನಗಳಲ್ಲಿ ಎಷ್ಟೋ ಜನರ ರಕ್ತದ ಮಡುವಿನಲ್ಲಿ ಹೋರಾಟ ಹಾಗೂ ಶಾಂತಿಯ ಫಲವಾಗಿ ಬ್ರಿಟೀಷರಿಂದ ಆಗಸ್ಟ್ ೧೫ರಂದು ಸ್ವಾತಂತ್ರ್ಯ ಪಡೆದುಕೊಂಡೆವು. ದೇಶಕ್ಕಾಗಿ ದುಡಿದ ಸುಭಾಷ್‌ ಚಂದ್ರಬೋಸ್, ಸರ್ದಾರ್‌ ವಲ್ಲಬಾಯಿ ಪಟೇಲ್, ಲಾಲ್‌ ಬಹದ್ದೂರ್‌ ಶಾಸ್ತ್ರೀ ಹೀಗೆ ಅನೇಕ ಮಹನೀಯರ ಹೋರಾಟದ ಫಲವಾಗಿ ಸಿಕ್ಕಿದ್ದು ಸ್ವಾತಂತ್ರ್ಯ. ಪ್ರತಿಯೊಬ್ಬ ಭಾರತೀಯನು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ದೇಶ ಅಭಿವೃದ್ಧಿಯಾದರೆ ನಾವುಗಳು ಬೆಳೆದಂತೆ. ನಮ್ಮ ದೇಶ ಮುಂದುವರೆಯುತ್ತಿರುವ ದೇಶ, ಸ್ವಾತಂತ್ರ್ಯ ಹೋರಾಟಗಾರರ ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು. ತಹಸೀಲ್ದಾರ್ ಶಂಕರಪ್ಪ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಓ ಹರೀಶ್, ಕನ್ನಡಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಎಲ್.ಪಿ.ಪ್ರಕಾಶ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ವೆಂಕಟೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಮತ್ತಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಇದೇ ಸಂದರ್ಭದಲ್ಲಿ ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮೆಚ್ಚುಗೆಗೆ ಪಾತ್ರವಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾತ್ರೋರಾತ್ರಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ರಾಜ್ಯ ಸರ್ಕಾರ..!
ಯುವಶಕ್ತಿಯನ್ನು ಸರಿದಾರಿಗೆ ಕರೆದೊಯ್ಯುವ ಆದರ್ಶ ಪುರುಷರ ಸಂಖ್ಯೆ ಕಡಿಮೆ: ತಿಮ್ಮರಾಯಿಗೌಡ