ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ
ಬುಧವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ತಾಲೂಕಿಗೆ ಆಗಮಿಸಿದ ಸಾಹಿತ್ಯ ರಥವನ್ನುಸ್ವಾಗತಿಸಿ ಮಾಲಾರ್ಪಣೆ ಮಾಡಿ ಮಾತನಾಡಿದರು. ಜಿಲ್ಲಾ ಸಮ್ಮೇಳನಕ್ಕೆ ಎನ್.ಆರ್.ಪುರ ತಾಲೂಕಿನ ಸಾಹಿತಿ ಜಯಮ್ಮ ಸರ್ವಾಧ್ಯಕ್ಷೆಯಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಎಂದರು.
ತಾಲೂಕು ಕಸಾಪ ಅಧ್ಯಕ್ಷ ಪೂರ್ಣೇಶ್ ಮಾತನಾಡಿ, ಕಡೂರಿನಲ್ಲಿ ಎಪ್ರಿಲ್ 10,11 ಹಾಗೂ 12 ರಂದು ನಡೆಯಲಿರುವ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಹಿತ್ಯ ರಥ ವಿವಿಧ ತಾಲೂಕಿನಲ್ಲಿ ಸಂಚರಿಸಿ ಇಂದು ನರಸಿಂಹರಾಜ ಪುರಕ್ಕೆ ಬಂದಿದೆ. ಜಿಲ್ಲಾದ್ಯಂತ ಕಸಾಪ ಮಹಿಳಾ ಘಟಕದವರು ಈ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಎಲ್ಲಾ ಮಹಿಳೆಯರು ಜಿಲ್ಲಾ ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ಮಾತನಾಡಿ, ತಾಲೂಕಿನಲ್ಲಿ ಕಸಾಪ ಮಹಿಳಾ ಘಟಕದವರು ಕನ್ನಡದ ಕೆಲಸ ದಲ್ಲಿ ತನ್ನೇ ಆದ ಛಾಪು ಮೂಡಿಸುತ್ತಿದ್ದಾರೆ. ನಮ್ಮೂರಿನ ಸಾಹಿತಿ ಎಂ.ಜಯಮ್ಮ ಸಮ್ಮೇಳನಾಧ್ಯಕ್ಷೆಯಾಗಿರುವುದು ಮಹಿಳೆ ಯರಿಗೆ ಸಿಕ್ಕ ಗೌರವ ಎಂದರು.
ಪಪಂ ಮಾಜಿ ಅಧ್ಯಕ್ಷೆ ಜುಬೇದ ಮಾತನಾಡಿದರು. ಈ ಸಂದರ್ಭದಲ್ಲಿ ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಸದಸ್ಯರಾದ ಶ್ಯಾಮಲ ಸತೀಶ್, ಚೈತ್ರಾ ರಮೇಶ್,ಶೀಲಾ ಸುಂದರೇಶ್, ತಾ.ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷೆ ಜಯಂತಿ, ಕಸಾಪ ಮಹಿಳಾ ಘಟಕದ ಕಾರ್ಯದರ್ಶಿ ಶಶಿಕಲಾ, ಸದಸ್ಯೆಸವಿತಾ, ತರೀಕೆರೆ ಮಹಿಳಾ ಘಟಕದ ಅಧ್ಯಕ್ಷೆ ಸುನೀತ, ಕಡೂರು ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಜಶೇಖರ್, ಪದ್ಮ ಸೂರಿ ಶ್ರೀನಿವಾಸ್, ಕಸಾಪ ಜಿಲ್ಲಾ ಸಂಚಾಲಕ ಎಸ್.ಎಸ್.ಸಂತೋಷ್ ಕುಮಾರ್, ಪ್ರಧಾನ ಸಂಚಾಲಕ ಇರ್ಮಾನ್ ಅಹಮ್ಮದ್ ಬೇಗ್ ಮತ್ತಿತರರು ಇದ್ದರು.