ಪ್ರತಿ ಗ್ರಾಪಂಗೊಂದು ಕೆಜಿಯಿಂದ ಪಿಯುವರೆಗೆ ಶಾಲೆಗೆ ಚಿಂತನೆ

KannadaprabhaNewsNetwork |  
Published : May 23, 2025, 12:07 AM IST
ಪಟ್ಟಣದ ಶಾಸಕರ ಗೃಹ ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕಿನ ಎಲ್ಲಾ ಶಾಲೆಗಳ ಮುಖ್ಯೊಪಾದ್ಯಯರ ಸಭೆಯಲ್ಲಿ ಎಸ್ .ಬಿ.ಚಾರಿಟಬಲ್ ಟ್ರಸ್ಟ್ ವತಿಯಿಂದ ಭಾಷವಾರು ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನು ಗಳಿಸಲು ಕಾರಣರಾದ ಶಿಕ್ಷಕರನ್ನು ಅಭಿನಂದಿಸಲಾಯಿತು. | Kannada Prabha

ಸಾರಾಂಶ

ಕ್ಷೇತ್ರದ ಬಡವರು ರೈತರ ಮಕ್ಕಳಿಗಾಗಿ ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಒಂದೇ ಸೂರಿನಡಿಯಲ್ಲಿ ಎಲ್ ಕೆಜಿ ಯಿಂದ ಪಿಯುಸಿಯವರೆಗೆ ಶಿಕ್ಷಣವನ್ನು ನೀಡುವಂತಹ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರದೊಂದಿಗೆ ಚರ್ಚಿಸಿ ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕನಾಯಕನಹಳ್ಳಿ

ಕ್ಷೇತ್ರದ ಬಡವರು ರೈತರ ಮಕ್ಕಳಿಗಾಗಿ ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಒಂದೇ ಸೂರಿನಡಿಯಲ್ಲಿ ಎಲ್ ಕೆಜಿ ಯಿಂದ ಪಿಯುಸಿಯವರೆಗೆ ಶಿಕ್ಷಣವನ್ನು ನೀಡುವಂತಹ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರದೊಂದಿಗೆ ಚರ್ಚಿಸಿ ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.ಪಟ್ಟಣದ ಶಾಸಕರ ಗೃಹ ಕಚೇರಿಯ ಸಭಾಂಗಣದಲ್ಲಿ ತಾಲೂಕಿನ ಎಲ್ಲಾ ಶಾಲೆಗಳ ಮುಖ್ಯೊಪಾಧ್ಯಾಯರ ಸಭೆಯಲ್ಲಿ ಎಸ್ .ಬಿ.ಚಾರಿಟಬಲ್ ಟ್ರಸ್ಟ್ ವತಿಯಿಂದ ಭಾಷವಾರು ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನು ಗಳಿಸಲು ಕಾರಣರಾದ ಶಿಕ್ಷಕರನ್ನು ಅಭಿನಂದಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಈಗಾಗಲೇ ಪ್ರತಿ ಹೋಬಳಿಗೆ ಒಂದರಂತೆ ಮೋರಾರ್ಜಿ, ಅಂಬೇಡ್ಕರ್ ವಸತಿ ಶಾಲೆ, ಆಶ್ರಮ ಶಾಲೆಗಳು ಹಾಗೂ ಹುಳಿಯಾರು ಭಾಗದಲ್ಲಿ ಒಂದು ಕೆಪಿಎಸ್ ಶಾಲೆ ಇದೆ. ನಮ್ಮ ತಾಲೂಕಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ದೃಷ್ಠಿಯಿಂದ ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ 27 ಗ್ರಾಮ ಪಂಚಾಯಿತಿಗಳಲ್ಲೂ ಸರ್ಕಾರಿ ಜಾಗದಲ್ಲಿ 5 ರಿಂದ 10 ಎಕರೆ ಜಾಗದಲ್ಲಿ ಎಲ್ಲಾ ಮೂಲ ಸೌಲಭ್ಯಗಳೊಂದಿಗೆ ಮಗುವಿನ ಪ್ರಾರಂಭಿಕ ಶಿಕ್ಷಣ ಎಲ್ ಕೆ ಜಿ ಯಿಂದ ಆ ಮಗು ಪಿಯುಸಿಯನ್ನು ಮುಗಿಸಿ ಹೊರಗಡೆ ಉನ್ನತ ವ್ಯಾಸಂಗಕ್ಕೆ ಹೋಗುವಂತೆ ಮಾಡುವಂತಹ ಸಂಪನ್ಮೂಲ ಶಿಕ್ಷಕರನ್ನು ಒಳಗೊಂಡಂತಹ ಸರ್ಕಾರಿ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರದ ಹಂತದಲ್ಲಿ ಮಾತುಕತೆ ನಡೆಸಿ ಚರ್ಚಿಸಲಾಗುವುದು ಯಾವುದೇ ಖಾಸಗಿ ಶಾಲೆಗಳಿಗೆ ಕಮ್ಮಿ ಇಲ್ಲದಂತೆ ನಮ್ಮ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಶಿಕ್ಷಣ ನೀಡುತ್ತಿದ್ದಾರೆ.

ಈ ವರ್ಷದ ಎಸ್ ಎಸ್ ಎಲ್ ಸಿ ಪಲಿತಾಂಶ ಕಾರಣವಾಗಿದೆ 620 ಅಂಕಗಳಿಸಿದ ಮೋರಾರ್ಜಿ ವಸತಿ ಶಾಲೆಯು ಪ್ರಥಮವಾದರೆ , ಯಳನಡು ಶಾಲೆ, ಕೆಪಿಎಸ್ ಶಾಲೆಗಳು ಮೊದಲ ಸ್ಥಾನದಲ್ಲಿವೆ. ಈ ಬಗ್ಗೆ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ತಮ್ಮಅಭಿಪ್ರಾಯಗಳನ್ನು ತಿಳಿಸುವಂತೆ ಹೇಳಿದ, ಅವರು ಕ್ಷೇತ್ರದ ಜನತೆಗೆ ಆರೋಗ್ಯ ಹಾಗೂ ಶಿಕ್ಷಣದ ಬಗ್ಗೆ ಯಾವುದೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತಿದ್ದು ಉತ್ತಮ ಆರೋಗ್ಯದಿಂದ ಜೀವನ ಚೆನ್ನಾಗಿದ್ದರೆ ಉತ್ತಮ ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಅದ್ದರಿಂದ ಶೈಕ್ಷಣಿಕವಾಗಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದು ನನ್ನ ಮುಖ್ಯ ಉದ್ದೇಶವಾಗಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಮಾತನಾಡಿ ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಕಾರಣರಾದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಅಭಿನಂದಿಸಿದ ಶಾಸಕರು ನಮ್ಮ ಮೇಲೆ ಜವಾಬ್ದಾರಿಯನ್ನು ಹೆಚ್ಚಿಸಿದ್ದಾರೆ ಮುಂದೆಯು ಇದೇ ರೀತಿಯ ಫಲಿತಾಂಶವನ್ನು ನೀಡಬೇಕಾಗಿದೆ. ಈ ಫಲಿತಾಂಶಕ್ಕೆ ಶಿಕ್ಷಕರು, ಪೋಷಕರು, ಹಾಗೂ ಮಕ್ಕಳ ಶ್ರಮವು ಇದೆ ಪ್ರೇರಣಾ ಶಿಬಿರಗಳು, ಧ್ಯಾನ ಶಿಬಿರಗಳು ಅನುಕೂಲವಾಗಿದೆ. ನಮ್ಮೊಂದಿಗೆ ಇದ್ದು ತಮ್ಮ ಸಂಪೂರ್ಣ ಸಹಕಾರ ನೀಡಿದ ಶಾಸಕರ ಕಾರ್ಯವೈಖರಿ ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಪ್ರೌಢ ಶಿಕ್ಷಕರ ಸಂಘದ ಅಧ್ಯಕ್ಷ ಗಂಗಾಧರ್, ದೈಹಿಕ ಶಿಕ್ಷಕರಸಂಘದ ಕೇಶವಮೂರ್ತಿ, ಸುರೇಶ್, ನೌಕರರ ಸಂಘದ ಅಧ್ಯಕ್ಷ ಪರಶಿವಮೂರ್ತಿ, ಸತೀಶ್ , ಅನಿಲ್, ತಾಲೂಕು ಕಸಾಪ ಅಧ್ಯಕ್ಷ ಎಂ.ಎಸ್.ರವಿಕುಮಾರ್ ಇತರರು ಇದ್ದರು. ಈ ಸಂದರ್ಭದಲ್ಲಿ ಪ್ರೇರಣಾ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಶಿಕ್ಷಕರುಗಳನ್ನು ಎಸ್.ಬಿ.ಚಾರಿಟಬಲ್ ಟ್ರಸ್ಟ್ ವತಿಯಿಂದ ಅಭಿನಂದಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಪ್ತ ಶಾಸಕರ ಜತೆ ಸದನದ ಕೊನೆ ಸಾಲಲ್ಲಿ ಡಿಕೆಶಿ ಚರ್ಚೆ
ಅಹಂಕಾರ, ದರ್ಪ ತೋರದೇ ಎಲ್ಲ ಜನರನ್ನೂ ಗೌರವಿಸಿದ ಶಾಮನೂರು: ಅಣಬೇರು ರಾಜಣ್ಣ