ಪ್ರತಿ ಗ್ರಾಮಕ್ಕೂ ಆಟದ ಮೈದಾನದ ಅಗತ್ಯವಿದೆ

KannadaprabhaNewsNetwork |  
Published : Aug 23, 2026, 01:45 AM IST
22ಎಚ್ಎಸ್ಎನ್3 :  | Kannada Prabha

ಸಾರಾಂಶ

ಕ್ರೀಡೆಯಲ್ಲಿ ಸೋಲು ಹಾಗೂ ಗೆಲವು ಸಾಮಾನ್ಯ. ವಿದ್ಯಾರ್ಥಿ ದೆಸೆಯಲ್ಲಿ ಮಾತ್ರ ಕ್ರೀಡೆಯಲ್ಲಿ ತೊಡಗಿಕೊಳ್ಳದೆ ಬಧುಕಿನ ಎಲ್ಲ ಹಂತಗಳಲ್ಲೂ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದರೆ ರೋಗ ಮುಕ್ತ ಜೀವನ ನಡೆಸಲು ಸಹಕಾರಿಯಾಗಲಿದೆ. ಇಂದು ವಿದ್ಯಬ್ಯಾಸದಿಂದ ಮಾತ್ರ ಸಾದನೆ ಮಾಡಬಹುದು ಎಂಬುದು ಸುಳ್ಳು. ಕ್ರೀಡೆ ಸೇರಿದಂತೆ ಎಲ್ಲ ರಂಗಗಳಲ್ಲೂ ಸಾದನೆ ಮಾಡಲು ಅವಕಾಶವಿದೆ. ದೇಶದಲ್ಲಿ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು ಅಂತರರಾಷ್ಟ್ರಿಯ ಕ್ರೀಡೆಗಳಲ್ಲಿ ಭಾರತದ ಕ್ರಿಡಾಪಟುಗಳು ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಆದ್ದರಿಂದ ಕಠಿಣ ಪರಿಶ್ರಮ ಪಟ್ಟರೆ ಜೀವನದಲ್ಲಿ ಏನು ಬೇಕಾದರು ಸಾಧಿಸ ಬಹುದು ಎಂದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಒಂದು ಆಟದ ಮೈದಾನ ಹತ್ತು ಆಸ್ಪತ್ರೆಗಳಿಗೆ ಸಮ. ಆದ್ದರಿಂದ ಪ್ರತಿಯೊಂದು ಗ್ರಾಮದಲ್ಲೂ ಆಟದ ಮೈದಾನಗಳಿರುವುದು ಅಗತ್ಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಶನಿವಾರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೋಟ ಉದ್ಘಾಟಿಸಿ ಮಾತನಾಡಿ, ಕ್ರೀಡೆ ಬಧುಕಿನ ಅವಿಭಾಜ್ಯ ಅಂಗ. ಕ್ರೀಡೆಯಲ್ಲಿ ಸೋಲು ಹಾಗೂ ಗೆಲವು ಸಾಮಾನ್ಯ. ವಿದ್ಯಾರ್ಥಿ ದೆಸೆಯಲ್ಲಿ ಮಾತ್ರ ಕ್ರೀಡೆಯಲ್ಲಿ ತೊಡಗಿಕೊಳ್ಳದೆ ಬಧುಕಿನ ಎಲ್ಲ ಹಂತಗಳಲ್ಲೂ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದರೆ ರೋಗ ಮುಕ್ತ ಜೀವನ ನಡೆಸಲು ಸಹಕಾರಿಯಾಗಲಿದೆ. ಇಂದು ವಿದ್ಯಬ್ಯಾಸದಿಂದ ಮಾತ್ರ ಸಾದನೆ ಮಾಡಬಹುದು ಎಂಬುದು ಸುಳ್ಳು. ಕ್ರೀಡೆ ಸೇರಿದಂತೆ ಎಲ್ಲ ರಂಗಗಳಲ್ಲೂ ಸಾದನೆ ಮಾಡಲು ಅವಕಾಶವಿದೆ. ದೇಶದಲ್ಲಿ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು ಅಂತರರಾಷ್ಟ್ರಿಯ ಕ್ರೀಡೆಗಳಲ್ಲಿ ಭಾರತದ ಕ್ರಿಡಾಪಟುಗಳು ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಆದ್ದರಿಂದ ಕಠಿಣ ಪರಿಶ್ರಮ ಪಟ್ಟರೆ ಜೀವನದಲ್ಲಿ ಏನು ಬೇಕಾದರು ಸಾಧಿಸ ಬಹುದು ಎಂದರು.ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಲೋಹಿತ್ ಕೌಡಳ್ಳಿ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಪ್ರಾಂಶಪಾಲ ರಮೇಶ್, ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿನ ಅಧೀಕ್ಷಕ ಮಂಜುನಾಥ್ ಮುಂತಾದವರಿದ್ದರು.ಫೋಟೋ:

ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಲೂಕು ಅಭಿವೃದ್ಧಿಗೆ ತಂದೆಯಕನಸು ಸಾಕಾರವೇ ನನ್ನ ಗುರಿ
ಇಂದು ಬಳಘಟ್ಟ ಗ್ರಾಮಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ: ಸಿ.ಎಸ್.ಪುಟ್ಟರಾಜು