ನಮ್ಮ ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಸಮಬಾಳು ನೀಡಲಾಗಿದೆ. ಜತೆಗೆ ಹಲವು ಕರ್ತವ್ಯಗಳನ್ನು ಸೂಚಿಸಲಾಗಿದೆ. ಇಂತಹ ಮಹಾನ್ ಗ್ರಂಥದಡಿ ಎಲ್ಲರೂ ನಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಶಿಗ್ಗಾಂವಿ ತಹಸೀಲ್ದಾರ್ ಸಂತೋಷ ಹಿರೇಮಠ ಹೇಳಿದ್ದಾರೆ. ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಗ್ಗಾಂವಿ: ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಲಾಗಿದೆ ಎಂದು ತಹಸೀಲ್ದಾರ್ ಸಂತೋಷ ಹಿರೇಮಠ ಹೇಳಿದರು.
ಪಟ್ಟಣದ ಪುರಸಭೆ ಆವರಣದಲ್ಲಿ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ಬುಧವಾರ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ದೇಶವು ೨೦೦ ವರ್ಷಗಳ ಕಾಲ ಬ್ರಿಟಿಷ್ ಆಡಳಿತದಿಂದ ಮುಕ್ತಗೊಂಡು ಸ್ವಾತಂತ್ರ್ಯ ಪಡೆದ ಆನಂತರ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಕ್ಷತೆಯಲ್ಲಿ ಸಂವಿಧಾನ ರಚಿಸಲಾಯಿತು. ನಮ್ಮ ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಸಮಬಾಳು ನೀಡಲಾಗಿದೆ. ಜತೆಗೆ ಹಲವು ಕರ್ತವ್ಯಗಳನ್ನು ಸೂಚಿಸಲಾಗಿದೆ. ಇಂತಹ ಮಹಾನ್ ಗ್ರಂಥದಡಿ ಎಲ್ಲರೂ ನಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಎಸ್‌ಬಿಬಿಎಂಡಿ ಕಾಲೇಜಿನ ಉಪನ್ಯಾಸಕಿ ಸಾವಿತ್ರಿ ಪೂಜಾರ ವಿಶೇಷ ಉಪನ್ಯಾಸ ನೀಡಿ, ಭಾರತೀಯ ಪೌರರ ಬೇಡಿಕೆಗಳನ್ನು ಗಮನದಲ್ಲಿ ಇಟ್ಟುಕೊಂಡು ಅಂಬೇಡ್ಕರ್ ಅವರು ನಮ್ಮ ಸಂವಿಧಾನ ರಚಿಸಿದ್ದಾರೆ ಎಂದು ಹೇಳಿದರು. ಉಪ ವಿಭಾಗಾಧಿಕಾರಿ ಮಹಮ್ಮದ್ ಖಿಜರ್ ಸಂವಿಧಾನ ಜಾಗೃತಿ ಜಾಥಾ, ಸಂವಿಧಾನದ ಕುರಿತು ಮಾತನಾಡಿದರು. ಶಿಕ್ಷಕ ಎಚ್.ಎಸ್. ರಟ್ಟೀಹಳ್ಳಿ ಅವರಿಂದ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಎಂ.ಕೆ. ಮುಗಳಿ, ಸಿಪಿಐ ಸತ್ಯಪ್ಪ ಮಾಳಗೊಂಡ, ಜಿಲ್ಲಾ ಕೌಶಲ್ಯ ಅಧಿಕಾರಿ ಹುನಿರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ, ಸಿಡಿಪಿಒ ಗಣೇಶ ಲಿಂಗನಗೌಡ್ರ, ಮಂಜುನಾಥ ಬ್ಯಾಹಟ್ಟಿ, ರಮೇಶ ವನಹಳ್ಳಿ, ಪರಶುರಾಮ ಸೊನ್ನದ, ಗೌಸ್‌ಖಾನ್ ಮುನಸಿ, ಅನುರಾಧಾ ಮಾಳವದೆ, ಕರಿಯಪ್ಪ ಕಟ್ಟಿಮನಿ, ಹನುಮಂತ ಬಂದಿವಡ್ಡರ, ನೀಲವ್ವ ಕಾಲವಾಡ, ನಾಗರಾಜ ಹಾವೇರಿ, ಡಾ. ಮಲ್ಲೇಶಪ್ಪ ಹರಿಜನ, ರಾಮು ಪೂಜಾರ, ಬಿ.ಸಿ. ಪಾಟೀಲ, ದುರಗಪ್ಪ ಬಂದಿವಡ್ಡರ, ಯಲ್ಲಪ್ಪ ಅಂದಲಗಿ, ಸುರೇಶ ಹರಿಜನ, ವೀರೇಶ ಕಾಳೆ, ಪುರಸಭೆ ಅಧಿಕಾರಿಗಳಾದ ಶೈಲಾ ಪಾಟೀಲ, ಎಸ್.ಎಂ. ಪಾಟೀಲ ಸೇರಿದಂತೆ ಪುರಸಭೆ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಇತರರಿದ್ದರು. ಶಿಕ್ಷಕರಾದ ಎಚ್.ಎಚ್. ರಟ್ಟಿಹಳ್ಳಿ ಹಾಗೂ ನಾಗಪ್ಪ ಬೆಂತೂರ ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.