ಕನಕಪುರ:
ತಾಲೂಕು ಆಡಳಿತದ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಕನ್ನಡ ನಾಡಿನ ಪಾಲಿಗೆ ಒಂದು ಶುಭದಿನ. ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಕೆಂಪೇಗೌಡರನ್ನು ಸ್ಮರಿಸಬೇಕಾದ ದಿನವಾಗಿದೆ. ಬೆಂಗಳೂರಿನಂತ ಮಹಾಮಹಿಮ ನಗರಕ್ಕೆ ತಳಪಾಯ ಹಾಕಿದ ನಾಡಪ್ರಭುಗಳ 516ನೇ ಜನ್ಮದಿನವನ್ನು ರಾಜ್ಯ ಸರ್ಕಾರವೇ ಬಹಳ ವಿಜೃಂಭಣೆಯಿಂದ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.
ತಹಸೀಲ್ದಾರ್ ಮಂಜುನಾಥ್ ಕೆಂಪೇಗೌಡರ ಜನಪರ ಆಡಳಿತ ಹಾಗೂ ದೂರದೃಷ್ಟಿಯ ಬಗ್ಗೆ ಮಾತನಾಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ದಿಲೀಪ್, ನಗರಸಭಾ ಅಧ್ಯಕ್ಷೆ ಹೇಮಾರಾಜು, ಮಾಜಿ ಅಧ್ಯಕ್ಷೆ ಲಕ್ಷ್ಮಿದೇವಿ, ಸದಸ್ಯೆ ಸರಳಾ ಶ್ರೀನಿವಾಸ್, ಎಡಿಎಲ್‌ಆರ್ ನಂದೀಶ್, ಕಾರ್ಮಿಕ ನಿರೀಕ್ಷಕ ಜಯಪ್ರಕಾಶ್, ಶಿಕ್ಷಣ ಇಲಾಖೆ ರಾಜು, ಬಿಇಒ ಮತ್ತೀಗೌಡ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಧಾಕೃಷ್ಣ ಮೊದಲಾದವರು ಭಾಗಿಯಾಗಿದ್ದರು.ಕೆ ಕೆ ಪಿ ಸುದ್ದಿ 01: ಕನಕಪುರದ ಅಂಬೇಡ್ಕರ್ ಭವನದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಉದ್ಘಾಟಿಸಲಾಯಿತು.