ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವಲ್ಲಿ ಎಲ್ಲರ ಶ್ರಮವಿದೆ: ಮಹೇಶ ಗೌಡ

KannadaprabhaNewsNetwork |  
Published : Jan 13, 2025, 12:46 AM IST
ಕ್ಯಾಪ್ಷನ11ಕೆಡಿವಿಜಿ34 ತೆಲಂಗಾಣದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಟಿಪಿಸಿ ಅಧ್ಯಕ್ಷ ಜಿ.ಮಹೇಶ್ ಗೌಡ ಪಕ್ಷ ಸಂಘಟನೆ ಕುರಿತು ಸಭೆ ನಡೆಸಿದರು. ರಾಷ್ಟ್ರೀಯ ಕಾಂಗ್ರೆಸ್ ಯುವ ಘಟಕದ ಕಾರ್ಯದರ್ಶಿ ದಾವಣಗೆರೆಯ ಸೈಯದ್ ಖಾಲಿದ್ ಅಹ್ಮದ್ ಇತರರು ಇದ್ದರು. | Kannada Prabha

ಸಾರಾಂಶ

ತೆಲಂಗಾಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ರಾಷ್ಟ್ರೀಯ ನಾಯಕರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಸ್ವಲ್ಪ ಹಿನ್ನೆಡೆ ಆದರೂ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹೇಶ್ ಗೌಡ ತೆಲಂಗಾಣದಲ್ಲಿ ಹೇಳಿದ್ದಾರೆ.

- ಯುವ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಪಕ್ಷ ಸಂಘಟನೆ ಕುರಿತು ಸಭೆ- - - ಕನ್ನಡಪ್ರಭ ವಾರ್ತೆ ದಾವಣಗೆರೆ

ತೆಲಂಗಾಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ರಾಷ್ಟ್ರೀಯ ನಾಯಕರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಸ್ವಲ್ಪ ಹಿನ್ನೆಡೆ ಆದರೂ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹೇಶ್ ಗೌಡ ಹೇಳಿದರು.

ತೆಲಂಗಾಣದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಪಕ್ಷ ಸಂಘಟನೆ ಕುರಿತು ಸಭೆ ನಡೆಸಿ ಅವರು ಮಾತನಾಡಿದರು. ಪಕ್ಷ ಮತ್ತಷ್ಟು ಬಲಿಷ್ಠವಾಗಬೇಕಿದೆ. ಯುವಕರು ಹೆಚ್ಚಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಮಾಡಲು ಶ್ರಮಿಸುವಂತೆ ಸಲಹೆ ನೀಡಿದರು.

ರಾಷ್ಟ್ರೀಯ ಕಾಂಗ್ರೆಸ್ ಯುವ ಘಟಕದ ಕಾರ್ಯದರ್ಶಿ ದಾವಣಗೆರೆಯ ಸೈಯದ್ ಖಾಲಿದ್ ಅಹ್ಮದ್ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ದ್ವೇಷ ರಾಜಕಾರಣ ಮಾಡುತ್ತಿದೆ. ಜನರಲ್ಲಿ ಗೊಂದಲ ಸೃಷ್ಟಿಸುವಂಥ ಕೆಲಸ ಮಾಡುತ್ತಿದೆ. ಅಭಿವೃದ್ಧಿ ರಾಜಕಾರಣದ ಬದಲು ಸೇಡು ತೀರಿಸಿಕೊಳ್ಳುವ ರಾಜಕೀಯ ಮಾಡುತ್ತಿದೆ. ಈ ವಿಚಾರವನ್ನು ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಜನರಿಗೆ ತಿಳಿಸುವ ಕೆಲಸ ಮಾಡಬೇಕಿದೆ. ಇದು ಪರಿಣಾಮಕಾರಿಯಾಗಿ ಆಗಬೇಕಾದ ಅವಶ್ಯಕತೆ ಇದೆ ಎಂದರು.

ತೆಲಂಗಾಣ ರಾಜ್ಯ ಸರ್ಕಾರವು ಉತ್ತಮ ಆಡಳಿತ ನೀಡುತ್ತಿದೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಜನರ ಸಂಕಷ್ಟಗಳಿಗೆ ಸ್ಪಂದಿಸುವ, ಜನಪರ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿದ್ದಾರೆ. ಜನರಿಗೆ ತಲುಪಿಸಲು ಯುವ ಕಾಂಗ್ರೆಸ್‌ನವರು ಮುಂದಾಗಬೇಕು. ಜನರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಮುಂದಾಗಿ ಎಂದು ಹೇಳಿದರು.

ದೇಶದ ಜನರಿಗೆ ಕಾಂಗ್ರೆಸ್‌ ಹಲವಾರು ಯೋಜನೆಗಳನ್ನು ನೀಡಿದೆ. ಉಳುವವನೆ ಭೂಮಿ ಒಡೆಯ, ಮಾಹಿತಿ ಹಕ್ಕು ಕಾಯ್ದೆ, ಶಿಕ್ಷಣದ ಹಕ್ಕು, ಹಸಿರು ಕ್ರಾಂತಿ, ನರೇಗಾ ಸೇರಿದಂತೆ ನೂರಾರು ಯೋಜನೆಗಳನ್ನು ನೀಡಿದೆ. ಕೇಂದ್ರ ಸರ್ಕಾರ ಜನರಿಗೆ ಭರವಸೆ ನೀಡಿದ್ದು ಬಿಟ್ಟರೆ ಈಡೇರಿಸಿಲ್ಲ ಎಂದು ಟೀಕಿಸಿದರು.

ಸಲಹೆ ಸ್ವೀಕರಿಸಿದ ಜಿ.ಮಹೇಶ್ ಗೌಡ ಹಾಗೂ ಸೈಯದ್ ಖಾಲಿದ್ ಅಹ್ಮದ್ ಅವರು ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠಗೊಳಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸೋಣ. ನೀವೆಲ್ಲರೂ ಸಜ್ಜಾಗಿ ಎಂದು ಹೇಳಿದರು.

ಸಭೆಯಲ್ಲಿ ತೆಲಂಗಾಣ ಯುವ ಕಾಂಗ್ರೆಸ್ ನ ಮುಖಂಡರು, ಪದಾಧಿಕಾರಿಗಳು ಹಾಜರಿದ್ದರು.

- - - -11ಕೆಡಿವಿಜಿ34.ಜೆಪಿಜಿ:

ತೆಲಂಗಾಣದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಟಿಪಿಸಿ ಅಧ್ಯಕ್ಷ ಜಿ.ಮಹೇಶ್ ಗೌಡ ಪಕ್ಷ ಸಂಘಟನೆ ಕುರಿತು ಸಭೆ ನಡೆಸಿದರು. ರಾಷ್ಟ್ರೀಯ ಕಾಂಗ್ರೆಸ್ ಯುವ ಘಟಕದ ಕಾರ್ಯದರ್ಶಿ ದಾವಣಗೆರೆಯ ಸೈಯದ್ ಖಾಲಿದ್ ಅಹ್ಮದ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೋಧನೆಯಲ್ಲಿ ತಂತ್ರಜ್ಞಾನ ಸಮರ್ಪಕವಾಗಿ ಬಳಸಿಕೊಳ್ಳಲಿ: ಪ್ರೊ. ಎ.ಎಂ. ಖಾನ್
ಮಾನಸಿಕ, ಶಾರೀರಿಕ ಸದೃಢತೆಗೆ ಕ್ರೀಡಾ ಉತ್ಸವಗಳು ಸಹಕಾರಿ: ಸಭಾಪತಿ ಹೊರಟ್ಟಿ