ಸ್ವಚ್ಛ ಪರಿಸರಕ್ಕೆ ಎಲ್ಲರೂ ಕೈ ಜೋಡಿಸಿ: ಸಿದ್ರಾಮಪ್ಪ ಅಮರಾವತಿ

KannadaprabhaNewsNetwork |  
Published : Jun 07, 2026, 02:30 AM IST
ಪೋಟೊ5ಕೆಎಸಟಿ2: ಕುಷ್ಟಗಿ ಪಟ್ಟಣದ ಬಾಲಕಿಯರ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪರಿಸರ ದಿನಾಚರಣೆಯ ಕಾರ್ಯಕ್ರಮದಲ್ಲಿ ಹಿರಿಯ ಮುಖ್ಯಶಿಕ್ಷಕ  ಸಿದ್ರಾಮಪ್ಪ ಅಮರಾವತಿ ಸಸಿ ನೆಟ್ಟರು. | Kannada Prabha

ಸಾರಾಂಶ

ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ, ಸ್ವಚ್ಛ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು

ಕುಷ್ಟಗಿ:ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಮುಖ್ಯಶಿಕ್ಷಕ ಸಿದ್ರಾಮಪ್ಪ ಅಮರಾವತಿ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮರ ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಪರಿಸರ ಸಮತೋಲನ ಕಾಪಾಡಬಹುದು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ, ಸ್ವಚ್ಛ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಸರಸ್ವತಿ ಡಾವಣಗೇರಿ. ರತ್ನಾಬಾಯಿ ಹೂಗಾರ, ಪಾರ್ವತೆಮ್ಮ ಗುರಿಕಾರ, ವೀಣಾ ಸೊನ್ನದ ಹನಮಗೌಡ ಗೌಡರ, ಆಂಜನೇಯ ಎಚ್., ಚನ್ನಪ್ಪ ಮೇಟಿ, ರೂಪಾ ಗುಡ್ಲಾನೂರ, ವಿಜಯಲಕ್ಷ್ಮೀ ದೊಡ್ಡಮನಿ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

30ರಿಂದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ
ಏಕರೂಪ ಬೀಜ ದರ ನಿಗದಿಗೆ ಒತ್ತಾಯ