ಕನ್ನಡಪ್ರಭ ವಾರ್ತೆ ಮಡಿಕೇರಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಕಾಲೇಜಿನ ಕಾರ್ಯಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ಕುರಿತು ನಡೆದ ‘ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನತೆ, ಆಸ್ತಿ ಹಕ್ಕನ್ನು ಕಲ್ಪಿಸಿದ್ದಾರೆ, ಅಂಬೇಡ್ಕರ್ ಅವರ ಹೋರಾಟ, ಚಿಂತನೆ ಸದಾ ಸ್ಮರಣೀಯ ಎಂದು ಅವರು ಹೇಳಿದರು.ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ , ಭ್ರಾತೃತ್ವ ಒಳಗೊಂಡ ಸಂವಿಧಾನ ರಚಿಸಿದ್ದಾರೆ ಎಂದರು.
ಕಾರ್ಮಿಕ ಕಾಯ್ದೆ ಜಾರಿಗೊಳಿಸುವ ಮೂಲಕ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್ ಅವರ ಸಮಾನತೆ, ಸಹೋದರತೆ, ಭ್ರಾತೃತ್ವದ ಆಶಯಗಳು ಸದಾ ಸಾರ್ವಕಾಲೀಕವಾಗಿದ್ದು, ಅವರ ಬದುಕು ಮತ್ತು ಬರಹಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ.ಪ್ರೊ.ರಾಘವ ಅವರು ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆ ಮತ್ತು ಸಿದ್ದಾಂತಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ಹೇಳಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಹ ಪ್ರಾಧ್ಯಾಪಕರಾದ ರೇಣುಶ್ರೀ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಆಶಾ, ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕು ಅಧಿಕಾರಿ ಮೋಹನ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್ ಇತರರು ಇದ್ದರು.