ಕನ್ನಡಪ್ರಭ ವಾರ್ತೆ ಹುಣಸಗಿ
ಇಲ್ಲಿನ ಪಟ್ಟಣ ಪಂಚಾಯ್ತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಚುನಾವಣಾಧಿಕಾರಿ, ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ ಅಧ್ಯಕ್ಷರು, ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ಹಾಗೂ ಪಟ್ಟಣ ಪಂಚಾಯ್ತಿ ಹುಣಸಗಿ ಮತದಾನ ಜಾಗೃತಿ ಅಭಿಯಾನ ಅಂಗವಾಗಿ ದೀಪದೊಂದಿಗೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಯಲ್ಲಿ 18 ವರ್ಷ ತುಂಬಿದ ಮತದಾರರು ಮತಗಟ್ಟಗೆ ತೆರಳಿ ಮತದಾನ ಮಾಡಬೇಕು. ಯಾರೊಬ್ಬರು ಮತದಾನದಿಂದ ದೂರ ಉಳಿಯಬಾರದು ಎಂದರು.ಮತದಾನ ಎಂಬುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಹಾಗೂ ಮೂಲ ಹಕ್ಕಾಗಿದ್ದು, ಯಾವುದೇ ಆಸೆ ಆಮೀಷಗಳಿಗೆ ಒಳಗಾಗದೇ ಪ್ರತಿಯೊಬ್ಬರು ಮತದಾನ ಮಾಡಲು ಮುಂದಾಗಬೇಕು ಎಂದು ಹೇಳಿದರು.
ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ವೆಂಕಟೇಶ ತೆಲಂಗ ಮಾತನಾಡಿ, ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನವರಿಗೆ ಮತದಾನದ ಮಹತ್ವವನ್ನು ತಿಳಿಸಬೇಕು. ಪ್ರತಿಯೊಬ್ಬರು ಮತದಾನ ಮಾಡುವಂತೆ ಅವರಲ್ಲಿ ಮತದಾನ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.ಮತದಾನ ಜಾಗೃತಿ ಜಾಥವು ಪಟ್ಟಣದ ಪ್ರಮುಖ ಬೀದಿಯಲ್ಲಿ ದೀಪದೊಂದಿಗೆ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಿದರು.
ತಾಲೂಕು ಪಂಚಾಯ್ತಿ ಸಿಬ್ಬಂದಿಗಳು, ಪಟ್ಟಣ ಪಂಚಾಯ್ತಿ ಸಿಬ್ಬಂದಿ ಮತ್ತು ಸದಸ್ಯರು, ಶಿಕ್ಷಕರು, ಮತಗಟ್ಟೆ ಸಿಬ್ಬಂದಿಗಳು, ಅಂಗನವಾಡಿ-ಆಶಾ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರ ಸಿಬ್ಬಂದಿ ಇದ್ದರು.