ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯ ವಡಗೇರಾ ತಾಲೂಕಿನ ಹಯ್ಯಾಳ (ಬಿ) ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತ, ಮತದಾನ ಅತ್ಯಂತ ಪವಿತ್ರವಾದದ್ದು, ಸಂವಿಧಾನವು ನಮಗೆ ಮತದಾನದ ಹಕ್ಕನ್ನು ನೀಡಿದೆ. ಯಾರೂ ಕೂಡ ಮತದಾನದಿಂದ ದೂರ ಉಳಿಯದೆ ಕಡ್ಡಾಯವಾಗಿ ಮತದಾನ ಮಾಡುವಂತೆ ಹೇಳಿದರು.
ಪ್ರಖ್ಯಾತ ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಮಾತನಾಡಿ, ಸರ್ಕಾರವು ಮತದಾನದ ಜಾಗೃತಿ ಕುರಿತು ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರತಿ ಗ್ರಾಮ ಮಟ್ಟದಲ್ಲಿ ಕೂಡ ಜಾಗೃತಿ ಮೂಡಿಸುತ್ತಿರುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಮತದಾನ ನಮ್ಮ ಪ್ರಮುಖ ಹಕ್ಕು. ಅದನ್ನು ಕಡ್ಡಾಯವಾಗಿ ಚಲಾವಣೆ ಮಾಡಬೇಕು. ಯುವಕರೇ ದೇಶದ ಶಕ್ತಿ. ಪ್ರತಿಯೊಬ್ಬರು ಮತದಾನ ಮಾಡುವುದರ ಜತೆಗೆ ಮತ್ತೊಬ್ಬರನ್ನು ಕರೆತಂದು ಮತದಾನದ ಅರಿವು ಮೂಡಿಸಿ ಇದು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಹಕ್ಕು ಇದಾಗಿದೆ. ಯಾರು ಕೂಡ ನಿರ್ಲಕ್ಷ್ಯ ಮಾಡಬಾರದು ಎಂದು ತಮ್ಮ ಹಾಸ್ಯ ಚಟಾಕಿಯ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸಿದರು.
ಮಹಿಳೆಯರಿಂದ ರಂಗೋಲಿ ಸ್ಪರ್ಧೆ ನಿಂಬೆಹಣ್ಣಿನ ಓಟ, ಗೋಣಿಚೀಲದ ಓಟ ಹಾಗೂ ಚುನಾವಣೆ ರಾಯಭಾರಿಗಳಿಂದ ಹಾಡು ಇನ್ನಿತರ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಯಿತು. ಕ್ರೀಡೆಯಲ್ಲಿ ಗೆದ್ದವರಿಗೆ ಸೂಕ್ತ ಬಹುಮಾನ ವಿತರಿಸಿದರು.
ತಹಸೀಲ್ದಾರ್, ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾ ವಿಕಲಚೇತನ ಅಧಿಕಾರಿಗಳು, ಸಿಡಿಪಿಒ, ತಾಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕರು, ಕ್ರೀಡಾ ಇಲಾಖೆ ಅಧಿಕಾರಿಗಳು ಇತರರಿದ್ದರು.