ಚಿಬ್ಬಲಗೇರಿ ಸರಕಾರಿ ಪ್ರೌಢಶಾಲೆಯಲ್ಲಿ ಪಕ್ಷಿ ವೀಕ್ಷಣಾ ಕಾರ್ಯಾಗಾರ
ತಾಲೂಕಿನ ಚಿಬ್ಬಲಗೇರಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಪಕ್ಷಿ ವೀಕ್ಷಣಾ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.
ಪ್ರಕೃತಿಯೊಂದಿಗೆ ಮಕ್ಕಳನ್ನು ಬೆಸೆಯುವ ಹಾಗೂ ಪಕ್ಷಿ ಸಂರಕ್ಷಣೆಯು ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಾಗಾರ ಆಯೋಜಿಸಲಾಗಿತ್ತು.ಕೈಗಾದ ಪಕ್ಷಿ ವೀಕ್ಷಕರಾದ ವಿ.ಜಿ. ಮೋಹನದಾಸ, ಮಹಾಂತೇಶ್ ಓಸಿಮಠ ಹಾಗೂ ಸೂರಜ ಪ್ರಕಾಶ್ ಜೆ.ಬಿ. ಸಹಯೋಗ ಮತ್ತು ಮಾರ್ಗದರ್ಶನದಲ್ಲಿ ನಡೆದ ಈ ವಿಶೇಷ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಅಪೂರ್ವ ಕಲಿಕಾ ಅನುಭವ ನೀಡಿತು.
ಪಕ್ಷಿಗಳ ವೀಕ್ಷಣೆಯ ನಂತರ ಶಾಲೆಯಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಜಿ.ಮೋಹನದಾಸ ವಿವಿಧ ಪಕ್ಷಿಗಳ ಕುರಿತು ಮಾಹಿತಿ ನೀಡಿದರು. ಪರಿಸರದ ಸಮತೋಲನವನ್ನು ಕಾಪಾಡುವಲ್ಲಿ ಪಕ್ಷಿಗಳ ಪಾತ್ರ ಅತ್ಯಂತ ಮಹತ್ವದಾಗಿದ್ದು, ಪಕ್ಷಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಾದ ಅಗತ್ಯವಿದೆ ಎಂದರು.
ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ ಸಂಸ್ಥೆಯ ಸಹಯೋಗದಲ್ಲಿ ಕೈಗೊಂಡಿರುವ ಹಕ್ಕಿಯ ಹಾಡು ಯೋಜನೆಯ ಅಂಗವಾಗಿ ನಡೆಯುತ್ತಿರುವ ಪಶ್ಚಿಮ ಘಟ್ಟದ ಹಕ್ಕಿಗಳ ಜನಪದ ಸಂಶೋಧನಾ ಯಾತ್ರೆ ಯೋಜನೆಯಡಿ ಈ ಕಾರ್ಯಾಗಾರವನ್ನು ವಿಜ್ಞಾನ ಶಿಕ್ಷಕ ಸಿದ್ದಪ್ಪ ಬಿರಾದಾರ ಆಯೋಜಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಧಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ವಿಠ್ಠಲ ಕೊರ್ವೆಕರ ಆಗಮಿಸಿದ್ದರು.