ಬಾಗೇಪಲ್ಲಿ: ಹೋಬಳಿ, ತಾಲೂಕು ಮಟ್ಟದಲ್ಲಿ ರಸ್ತೆ ಸುರಕ್ಷತಾ ಮಾಸ ಅರಿವು ಕಾರ್ಯಕ್ರಮವನ್ನು ಜ.30 ರವರೆಗೆ ತಾಲೂಕಿನಾದ್ಯಂತ ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಧೀಶರಾದ ಮಂಜುನಾಥಚಾರಿ ತಿಳಿಸಿದರು.ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಆಡಳಿತ, ಜಿಪಂ, ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಪಟ್ಟಣದ ಜೆ.ಎಂ.ಎಫ್. ಸಿ ನ್ಯಾಯಾಲಯದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ವಕೀಲರು ಸಂಘದ ಅದ್ಯಕ್ಷ ಮಂಜುನಾಥ, ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಸುನಿಲ್, ಟಿಎಚ್‍ಓ ಡಾ. ಸತ್ಯನಾರಾಯಣರೆಡ್ಡಿ ಮತ್ತಿತರರು ಇದ್ದರು.
06ಬಿಜಿಪಿ-2: ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾ ಕ್ಕೆ ಬಾಗೇಪಲ್ಲಿ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಧೀಶ ಮಂಜುನಾಥಚಾರಿ ಚಾಲನೆ ನೀಡಿದರು.